ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ರಾಜ್ಯಪಾಲರು ಭಾಷಣ ಮಾಡುತ್ತಿರುವಾಗಲೇ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ಮಾಡಿರುವ ಘಟನೆ ಇಂದು ಕುವೆಂಪು ವಿಶ್ವವಿದ್ಯಾಲಯದ Kuvempu University 37 ನೇ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ನಡೆದಿದೆ.
ಶಂಕರಘಟ್ಟದ ವಿವಿ ಸಭಾಂಗಣದಲ್ಲಿ ನಡೆಯುತ್ತಿದ್ದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಕುವೆಂಪು ವಿವಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ ರಾಜ್ಯಪಾಲರ ಭಾಷಣದ ನಡುವೆಯೇ ದಿಕ್ಕಾರ ಕೂಗಿದ ವಿದ್ಯಾರ್ಥಿ ಸಂಘಟನೆ ಮುಖಂಡರು ಕುವೆಂಪು ವಿವಿ ಕುಲಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದಿಕ್ಕಾರ ಕೂಗಿದವರು ಬಂದು ನನ್ನ ಬಳಿ ಮಾತನಾಡಲಿ, ಅವರ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯಪಾಲರು ಪ್ರತಿಭಟನಾಕಾರರಿಗೆ ಸೂಚಿಸಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.
ನಾಲ್ಕು ಜನರು ಬಂದು ನನ್ನ ಬಳಿ ಮಾತನಾಡಲಿ.ಅವರ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯಪಾಲರು ಹೇಳಿದ ಮೇಲೆ ಪ್ರತಿಭಟನೆ ತಣ್ಣಗಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post