ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ #ChristkingPUCollege ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನ ನಿಮಿತ್ತ ಚೇತನಾ ವಿಶೇಷ ಶಾಲೆಗೆ ಭೇಟಿ ನೀಡಿ ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ ಮಾಡಿದರು.
ಅಲ್ಲಿನ ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ತರಬೇತಿ, ತರಗತಿ ನಡೆಸುವ ವಿಧಾನ, ಮಕ್ಕಳಲ್ಲಿ ಇರುವ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಮಾಹಿತಿ ಸಂಗ್ರಹಿಸಿದರು. ಚೇತನ ಶಾಲೆಯ ಸಂಚಾಲಕರಾದ ವಿಜಯ ಕುಮಾರ್ ಮತ್ತು ರಘುನಾಥ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಉಪನ್ಯಾಸಕಿ ಅನಿತಾ ಲೋಬೊ, ಕು. ಅಭಿನಯ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
Also read: accelerate the rural economy with the mantra of “Sahkar Se Samridhi”: Amith Shah
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post