ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡು ಭಾಗದಲ್ಲಿ ನಿರಂತರವಾಗಿ ಭರ್ಜರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ Gajnur Dam ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಸಲಾಗಿದ್ದು, ತುಂಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ.
ತುಂಗಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇಂದು ಮಧ್ಯಾಹ್ನದ ವೇಳೆಗೆ ಸುಮಾರು 67 ಸಾವಿರ ಕ್ಯೂಸೆಕ್ಸ್ ನೀರು ಒಳಹರಿದು ಬಂದಿದೆ. ಈ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಭಾರೀ ಪ್ರಮಾಣದ ನೀರನ್ನು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ನೀರು ಹರಿವಿನ ಪ್ರಮಾಣ ಇನ್ನೂ ಹೆಚ್ಚಾದರೆ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ.
Also read: ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗದಲ್ಲಿ ಎಷ್ಟು ಮಳೆಯಾಯ್ತು? ಡ್ಯಾಂಗಳಲ್ಲಿ ಎಷ್ಟು ನೀರಿದೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















