ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ/ಶಿವಮೊಗ್ಗ |
ಈಗಾಗಲೇ ಮಳೆಯ ಅಬ್ಬರದಿಂದ ತತ್ತರಿಸಿರುವ ಕರಾವಳಿ ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ Red Alert in Karawali ಘೋಷಣೆ ಮಾಡಲಾಗಿದ್ದು, ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯಂತೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜುಲೈ 26-27ರಂದು ಆರೆಂಜ್, ಜುಲೈ 28-29ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ-ಮಲೆನಾಡಿನ ಪರಿಸ್ಥಿತಿಯೇನು?
ಇನ್ನು, ಶಿವಮೊಗ್ಗ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಇಂದು ಆರೆಂಜ್ ಹಾಗೂ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡಿನಲ್ಲಿ ಹೈಅಲರ್ಟ್
ಉತ್ತರ ಭಾಗದ ಕರಾವಳಿಯಲ್ಲಿ ವಾಯಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಶಿವಮೊಗ್ಗ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನಲ್ಲಿ ಭಾರೀ ಮಳೆ ಮುಂದುವರೆದಿದೆ. ಉಳಿದಂತೆ ಶಿವಮೊಗ್ಗ, ಭದ್ರಾವತಿ, ಸೊರಬ, ಶಿಕಾರಿಪುರ ತಾಲೂಕಿನಲ್ಲಿ ಕೊಂಚ ಇಳಿಕೆಯಾಗಿದೆ. ಆದರೂ, ಜಿಲ್ಲೆಯಾದ್ಯಂತ ಮೋಡಕವಿದ ಥಂಡಿಯ ವಾತಾವರಣ ಮುಂದುವರೆದಿದೆ.









Discussion about this post