ಕಲ್ಪ ಮೀಡಿಯಾ ಹೌಸ್ | ಉಡುಪಿ |
ಮಳೆಯಿಂದ ಹಾನಿಯಾದ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ DC Vidyakumari ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಂದೂರು ತಾಲೂಕಿನ ನಾವುಂದದಲ್ಲಿ ತೀವ್ರ ಮಳೆಯಿಂದ ನೆರೆ ಪೀಡಿತವಾಗಿರುವ ಪ್ರದೇಶ ಮತ್ತು ನಿರೋಡಿಯಲ್ಲಿ ಸೇತುವೆಗೆ ಹಾನಿಯಾದ ಪ್ರದೇಶಕ್ಕೆ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನೆರೆ ಬಾದಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಕಲ ರೀತಿಯಲ್ಲೂ ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
Also read: ಉಡುಪಿಯಲ್ಲಿ ಹಠಾತ್ ಪ್ರವಾಹ ಮುನ್ಸೂಚನೆ: ಎಚ್ಚರಿಕೆ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸೈಕ್ಲೋನ್ ಶೆಲ್ಟರ್’ಗೆ ಭೇಟಿ
ಇನ್ನು, ಕುಂದಾಪುರದ ತೆಕ್ಕಟ್ಟೆಯಲ್ಲಿರುವ ಸೈಕ್ಲೋನ್ ಶೆಲ್ಟರ್’ಗೆ ಇಂದು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೆರೆ ಹಾನಿಯಿಂದಾಗಿ ಎದುರಾಗುವ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















