ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸುಂದರ ಪುರಾಣಿಕ್ ಸ್ಮಾರಕ ಪ್ರಾಥಮಿಕ ಶಾಲೆ ಪೆರ್ವಾಜೆ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕ್ರೈಸ್ಟ್‌ಕಿಂಗ್ Christ King ಆಂಗ್ಲಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ವಿದ್ಯಾರ್ಥಿಗಳಾದ ಹತ್ತನೇ ತರಗತಿಯ ಚಿರಾಗ್ ಮತ್ತು ಅನ್ವಿತ್, ಒಂಬತ್ತನೇ ತರಗತಿಯ ಕೀರ್ತನ್ ಡಿಸೋಜಾ, ಸುಕ್ಷಿತ್ ಜೈನ್, ಮೊಹಮ್ಮದ್ ಅರಿಜ್ ವಿಜೇತ ತಂಡದ ಸದಸ್ಯರಾಗಿದ್ದಾರೆ. ಇದೇ ಪಂದ್ಯಾಟದಲ್ಲಿ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಏಳನೇ ತರಗತಿಯ ಸಾದಿಯಾ ಮೆಹರ್, ಆರನೇ ತರಗತಿಯ ಫಿಯೋನಾ, ಸಾನ್ವಿ, ಐಶ್ವರ್ಯ ದ್ವಿತೀಯ ಸ್ಥಾನ ಪಡೆದ ತಂಡದ ಸದಸ್ಯರಾಗಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಸಾದ್, ಪ್ರಕಾಶ್ ನಾಕ್, ಕು.ಲಾವಣ್ಯ ತಂಡಗಳ ನೇತೃತ್ವ ವಹಿಸಿದ್ದರು.
Also read: ಧರ್ಮಸ್ಥಳ ಯೋಜನೆಯಿಂದ ದೊರಕುವ ನಾಟಿಯಂತ್ರ ಸೌಲಭ್ಯ ಸದುಪಯೋಗಿಸಿಕೊಳ್ಳಿ: ಸುಬ್ರಾಯ್ ನಾಯ್ಕ್ ಕರೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















