ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಜಿಲ್ಲಾ ಪಂಚಾಯತ್ ಸಿಇಒ ಸುಧಾಕರ್ ಅವರನ್ನು ಕುವೆಂಪು ವಿಶ್ವವಿದ್ಯಾಲಯದ Kuvempu University ರಿಜಿಸ್ಟರ್ (ಆಡಳಿತ) ಆಗಿ ಹೆಚ್ಚುವರಿ ಜವಾಬ್ದಾರಿ ನೀಡಿ ನಿಯೋಜಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ತತಕ್ಷಣವೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ವಿವಿ ರಿಜಿಸ್ಟರ್(ಆಡಳಿತ) ಆಗಿ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುವಂತೆ ಆದೇಶಿಸಲಾಗಿದೆ.
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ರಿಜಿಸ್ಟರ್ (ಆಡಳಿತ) ಹುದ್ದೆಯನ್ನು 2016 ರ ಹಿರಿಯ ಶ್ರೇಣಿಯ ಐಎಎಸ್ (ವೇತನ) ನಿಯಮಗಳ 12 ರ ಅಡಿಯಲ್ಲಿ ಮುನ್ಸಿಪಲ್ ಆಡಳಿತದ ನಿರ್ದೇಶಕರ ಕೇಡರ್ ಹುದ್ದೆಗೆ ಸ್ಥಾನಮಾನ ಮತ್ತು ಜವಾಬ್ದಾರಿಗಳಲ್ಲಿ ಸಮಾನವೆಂದು ಘೋಷಿಸಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















