ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಶ್ವ ಛಾಯಾಗ್ರಾಹಕ ದಿನಾಚರಣೆ ಪ್ರಯುಕ್ತ ತಾಲೂಕು ಛಾಯಾಗ್ರಾಹಕರ ಸಂಘ ಮತ್ತು ಛಾಯಾಗ್ರಾಹಕರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಆ. 20ರ ಭಾನುವಾರ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದೊಂದಿಗೆ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30ರವರೆಗೆ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಇಸಿಜಿ, ಹೃದಯ, ಕಿಡ್ನಿ, ದಂತ, ಕಣ್ಣು, ಕಿವಿ, ಇ.ಎನ್.ಟಿ, ಮೂಳೆ, ನರರೋಗ, ಚರ್ಮರೋಗ, ಸಕ್ಕರೆ ಖಾಯಿಲೆ, ಮಕ್ಕಳ ಮತ್ತು ಸ್ತ್ರೀಯರ ಖಾಯಿಲೆಗಳು ಹಾಗೂ ಜನರಲ್ ಮೆಡಿಸಿನ್, ಜನರಲ್ ಸರ್ಜರಿ ಇತರೆ ರೋಗಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುವುದು.
Also read: Amit Shah planted four croreth sapling under ‘All India Tree Plantation Campaign’
ಇದೇ ಸಂದರ್ಭದಲ್ಲಿ ರಕ್ತದಾನ ಶಿಬಿರವೂ ಆಯೋಜಿಸಲಾಗಿದ್ದು, ರಕ್ತದಾನ ಮಾಡಿದಂತಹ ದಾನಿಗಳಿಗೆ ಸುಬ್ಬಯ್ಯ ವೈದ್ಯಕೀಯ
ಮಹಾವಿದ್ಯಾಲಯದ ವತಿಯಿಂದ ಉಚಿತ ಹೆಲ್ತ್‌ಕಾರ್ಡ್ (ಕುಟುಂಬದ ಸದಸ್ಯರಿಗೆ) ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅರುಣ್ ಕುಮಾರ್ : 9448329866, ಮಂಜುನಾಥ : 9972387099, ಸಂಜೀವರಾವ್ ಸಿಂಧ್ಯಾ : 94494 26872, ಕುಮಾರ .ಜೆ : 99801 76516, ಮೊಹಮ್ಮದ್: 8951617838 ಮತ್ತು ಕಾಂತರಾಜ್ : 9900131155 ಅವರನ್ನು ಸಂಪರ್ಕಿಸಬಹುದಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















