ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮಳೆಯ ಅಭಾವದಿಂದಾಗಿ ರಾಜ್ಯದ ರೈತರು ಸಂಕಷ್ಟದಲ್ಲಿದ್ದರೂ ಲೆಕ್ಕಿಸದೇ ತಮಿಳುನಾಡಿಗೆ Tamilnadu ಹರಿಸುತ್ತಿದ್ದ ನೀರಿನ ಪ್ರಮಾಣವನ್ನು ರಾಜ್ಯ ಸರ್ಕಾರ ಒತ್ತಡಕ್ಕೆ ಮಣಿದು ಇಳಿಕೆ ಮಾಡಿದೆ.
ನಮಗೇ ನೀರಿಗೆ ಸಂಕಷ್ಟ ಎದುರಾಗಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ಕ್ರಮವನ್ನು ಪ್ರತಿಪಕ್ಷ ಹಾಗೂ ರೈತರು ತೀವ್ರವಾಗಿ ವಿರೋಧಿಸಿದ್ದಾರೆ. ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ ಇದಕ್ಕೆ ಮಣಿದಿರುವ ರಾಜ್ಯ ಸರ್ಕಾರ ನೀರಿನ ಪ್ರಮಾಣವನ್ನು ಇಳಿಕೆ ಮಾಡಿದೆ.
ಸರ್ವಪಕ್ಷ ಸಭೆ ಬಳಿಕ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಪ್ರಮಾಣವನ್ನು ಇಳಿಕೆ ಮಾಡಿದೆ. ಈ ಬೆಳವಣಿಗೆ ರೈತರಲ್ಲಿ ತುಸು ಸಮಾಧಾನವನ್ನು ನೀಡಿದೆ.
Also read: ಶಿವಮೊಗ್ಗದಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ವಾಹನ ನಿಲ್ಲಿಸುವಂತಿಲ್ಲ: ಇಲ್ಲಿದೆ ನಿಲುಗಡೆ ಸ್ಥಳದ ಪಟ್ಟಿ
ನೀರಾವರಿ ಇಲಾಖೆ ಅಧಿಕಾರಿಗಳು 6,000 ಕ್ಯೂಸೆಕಸ್’ಗೂ ಹೆಚ್ಚು ನೀರನ್ನು ಬಿಡುಗಡೆ ಮಾಡಿದ್ದರಿಂದ ಜಲಾಶಯದ ಮಟ್ಟ 2,281 ಅಡಿಯಿಂದ 2,276 ಅಡಿಗೆ ಇಳಿದಿದೆ. ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ನೀರಾವರಿ ಕಾಲುವೆಗೆ ಬಿಡುಗಡೆ ಮಾಡಬೇಕಿದ್ದ ನೀರಿನ ಪ್ರಮಾಣವನ್ನು ಕಡಿಮೆ ಮಾಡಿದ್ದಾರೆ ಎಂದು ವರದಿಯಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಡ್ಯ ರೈತರ ಆಕ್ರೋಶ
ಇನ್ನು, ಮಳೆ ಕೊರತೆಯಿಂದಾಗಿ ರಾಜ್ಯದ ರೈತರೇ ಸಂಕಷ್ಟದಲ್ಲಿದ್ದಾರೆ. ಆದರೂ ಇದನ್ನು ಲೆಕ್ಕಿಸದೇ ತಮಿಳುನಾಡಿಗೆ ನೀರು ಹರಿಸಲಾಗುತ್ತಿರುವುದಕ್ಕೆ ಮಂಡ್ಯದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ರೈತರು ಬುಧವಾರ ರಸ್ತೆ ತಡೆದು ಸರಣಿ ಪ್ರತಿಭಟನೆಗಳ ನಡೆಸಿದ್ದಾರೆ. ರಾಜ್ಯದ ರೈತರಿಗೆ ನೀರು ನೀಡುವ ಬದಲು, ನೆರೆ ರಾಜ್ಯಕ್ಕೆ ಬಿಡುಗಡೆ ಮಾಡಿದೆ. ಈ ಮೂಲಕ ರೈತರಿಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















