ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಾವು ಸ್ವಯಿಚ್ಛೆಯಿಂದ ರಕ್ತದಾನ ಮಾಡುವುದರ ಜೊತೆಗೆ ಬೇರೆಯವರಿಗೂ ರಕ್ತದಾನ ಮಾಡುವಂತೆ ಪ್ರೇರಣೆ ನೀಡಬೇಕಾಗಿರುವುದು ಅನಿವಾರ್ಯವಾಗಿದೆ. ನಾವು ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರಿಗೆ ಅದರ ಲಾಭವಾಗಲಿದೆ ಎಂದು ಕುವೆಂಪು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ Nagaraj Parisara ಅಭಿಪ್ರಾಯಪಟ್ಟರು.
ನಗರದ ಆಚಾರ್ಯ ತುಳಸಿ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವತಿಯಿಂದ ಆಯೋಜಿಸಲಾಗಿದ್ದ ಕುವೆಂಪು ವಿಶ್ವವಿದ್ಯಾಲಯ Kuvempu University ಮಟ್ಟದ ಅಂತರ ಕಾಲೇಜು ಶಿಬಿರದಲ್ಲಿ ಡಾ ನಾಗರಾಜ ಪರಿಸರ ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿಂದಂತೆ ಪ್ರತಿ ನಿತ್ಯ 300 ಯೂನಿಟ್ ರಕ್ತದ ಬೇಡಿಕೆ ಇದೆ. ಆದರೆ 200 ರಿಂದ 250 ಯೂನಿಟ್‌ಗಳು ಮಾತ್ರ ಲಭ್ಯವಾಗುತ್ತಿದೆ. ಪ್ರತಿದಿನ 50ಕ್ಕೂ ಹೆಚ್ಚು ಜನರಿಗೆ ರಕ್ತದ ಬೇಡಿಕೆ ಇದೆ. ಆದ್ದರಿಂದ ನಾವೆಲ್ಲಾ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಬೇರೆಯವರಿಗೂ ರಕ್ತದಾನ ಮಾಡಲು ಪ್ರೇರೇಪಿಸಬೇಕಾಗಿದೆ ಎಂದರು.
ಸ್ವಯಂ ಪ್ರೇರಿತ ರಕ್ತದಾನಿಗಳಾದ ಧರಣೇಂದ್ರ ದಿನಕರ್, ವಿಜಯ ಕುಮಾರ್ ಮಾತನಾಡಿ, ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯ ಸಮಸ್ಯೆಗಳೂ ಕಡಿಮೆ ಆಗುತ್ತವೆ. ನಾವು ಲವಲವಿಕೆಯಿಂದ ಇರಲು ರಕ್ತದಾನ ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಎ ಟಿ ಎನ್ ಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಮಮತಾ ಅಧ್ಯಕ್ಷತೆ ವಹಿಸಿದ್ದರು. ರಾಸೇಯೋ ಅಧಿಕಾರಿಗಳಾದ ಪ್ರೊ ಕೆ. ಎಂ. ನಾಗರಾಜು, ಪ್ರೊ ಜಗದೀಶ್ ಎಸ್ ಮತ್ತು ಮಂಜುನಾಥ್ ಎನ್, ನಿರ್ದೇಶಕರಾದ ನವೀನ್ ಮತ್ತಿತರರು ಉಪಸ್ಥಿತರಿದ್ದರು. ಒಟ್ಟು 41 ಜನ ಸ್ವಯಿಚ್ಛೆಯಿಂದ ರಕ್ತದಾನ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post