ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸಾಂಪ್ರದಾಯಿಕ ಬದ್ಧವಾಗಿ ಮೈಸೂರು ದಸರಾ Mysore Dasara ಆಚರಿಸಲಾಗುತ್ತಿದ್ದು, ಸಂಗೀತ ನಿರ್ದೇಶಕ ಹಂಸಲೇಖ Hamsalekha ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದ್ದಾರೆ.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್ಹೌಸ್ ವೃತ್ತ, ಎಲ್ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ, ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ ಎಂದರು.
Also read: Sree Charan Cooperative Bank registers a profit of Rs 2.85 Crores
ಅಕ್ಟೋಬರ್ 15ಕ್ಕೆ ದಸರಾ ಉದ್ಘಾಟನೆ:
ಅಕ್ಟೋಬರ್ 15ರ ಬೆಳಗ್ಗೆ 10.15ರಿಂದ 10.30ಕ್ಕೆ ಸಲ್ಲುವ ಮಹೂರ್ತದಲ್ಲಿ ದಸಾರ ಉದ್ಘಾಟನೆ ನೆರವೇರಲಿದ್ದು, ವಿಜಯದಶಮಿ ದಿನದಂದು ಪಂಜಿನ ಕವಾಯತು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ತಿಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















