ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಜ್ಞಾನ ದೀಪ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಎಸ್.ಎಸ್ .ಎಸ್. ಸಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಈ ನೃತ್ಯ ಸ್ಪರ್ಧೆಯಲ್ಲಿ 15 ಶಾಲೆಗಳು ಪಾಲ್ಗೊಂಡಿದ್ದು, ಅದರಲ್ಲಿ ಜೈನ್ ಪಬ್ಲಿಕ್ ಶಾಲೆಯ ಒಂಬತ್ತು ಮತ್ತು ಹತ್ತನೇ ತರಗತಿ ವಿದ್ಯಾರ್ಥಿನಿಯರು ಜಾನಪದದ ಸೊಗಡಾದ ಡೊಳ್ಳು ಕುಣಿತದಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
Also read: H.E Eng. Abdullah Al-Swaha, MCIT expressed his pride seeing Bengaluru Airport
ಪ್ರಶಸ್ತಿ ವಿಜೇತ ವಿದ್ಯಾರ್ಥಿನಿಯರಿಗೆ ಶಾಲಾ ಪ್ರಾಂಶುಪಾಲರಾದ ಪ್ರಿಯದರ್ಶಿ, ಸಂಯೋಜಕರಾದ ದಿವ್ಯ ಶೆಟ್ಟಿ ಮತ್ತು ಶಾಲಾ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















