ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ಕೌಟ್ ಅಂಡ್ ಗೈಡ್ ಜಿಲ್ಲಾ ಮಟ್ಟದ ಪರೀಕ್ಷೆಯಲ್ಲಿ ಜೈನ್ ಪಬ್ಲಿಕ್ Jain Public ಶಾಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಪ್ರಮಾಣ ಪತ್ರವನ್ನು ತಮ್ಮದಾಗಿಸಿಕೊಂಡಿದ್ದಾರೆ.
ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಜೈನ್ ಪಬ್ಲಿಕ್ ಶಾಲೆ ಸತತ 11 ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣ ದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ.
Also read: ಪ್ರತಿ ಮನೆಯ ಯಜಮಾನಿಯರೇ ಆ ಕುಟುಂಬದ ನಿಜವಾದ ಮುಖ್ಯಮಂತ್ರಿಗಳು: ಸಚಿವ ಮಧುಬಂಗಾರಪ್ಪ
ವಿದ್ಯಾರ್ಥಿಗಳಲ್ಲಿ ಸೃಜನಶೀಲ ವ್ಯಕ್ತಿತ್ವವನ್ನು ಮೈಗೂಡಿಸಿ, ಪ್ರಸ್ತುತ ಜಗತ್ತಿಗೆ ಅಗತ್ಯವಿರುವ ಕೌಶಲ್ಯಗಳನ್ನು ಒದಗಿಸಲು ಹಾಗೂ ವೈವಿಧ್ಯಮಯವಾದ ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ನೀಡುವ ಮೂಲಕ ಭಾರತೀಯ ಸ್ಕೌಟ್ ಅಂಡ್ ಗೈಡ್ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಪರೀಕ್ಷೆಗೆ ಸಿದ್ಧಪಡಿಸಿದ ದೈಹಿಕ ಶಿಕ್ಷಕರಾದ ಸಂತೋಷ್ ನಾಯ್ಕ್, ಶಿಕ್ಷಕೇತರ ವೃಂದ ಮತ್ತು ಪೋಷಕರಿಗೆ ಶಾಲಾ ಆಡಳಿತ ಮಂಡಳಿ ಅಂಬಿನಂದಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















