ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ನಗರದಿಂದ ಹೆಬ್ಬಳ್ಳಿ ಗ್ರಾಮಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ಸಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಶಿವಳ್ಳಿ ರಸ್ತೆಯ ಟೈಯರ್ ಗೋಡೌನ್ ಬಳಿ ಘಟನೆ ಸಂಭವಿಸಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ.
ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಸಂಪೂರ್ಣ ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಸ್ಥಿತಿಯನ್ನ ನಿಭಾಯಿಸುತ್ತಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















