ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಾಸನ ಕ್ಷೇತ್ರದ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ Prajwal Revanna ಅವರ ಆಯ್ಕೆಯನ್ನು ಅಸಿಂಧುಗೊಳಿಸಿರುವ ರಾಜ್ಯ ಹೈಕೋರ್ಟ್ High Court ಮಹತ್ವದ ಆದೇಶ ನೀಡಿದೆ.
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ HDDevegowda ಮೊಮ್ಮಗನಾದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯದ ಈ ಆದೇಶದಿಂದ ಭಾರೀ ಹಿನ್ನೆಡೆಯಾಗಿದೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಭ್ರಷ್ಟಾಚಾರದ ರೀತಿಯಲ್ಲಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದರು. ಪ್ರಜ್ವಲ್ ಆಯ್ಕೆಯನ್ನು ಪ್ರಶ್ನಿಸಿ ಪರಾಜಿತ ಬಿಜೆಪಿ ಅಭ್ಯರ್ಥಿ ಎ. ಮಂಜು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಮಹತ್ವದ ಆದೇಶ ಹೊರಡಿಸಿದೆ.
Also read: ಸೊರಬ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ಮನವಿ
ನಾಮಪತ್ರ ಸಲ್ಲಿಸುವ ವೇಳೆ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗದ ನಿಯಮಾವಳಿಗಳ ರೀತಿಯಲ್ಲಿ ದಾಖಲೆಗಳನ್ನು ಸಲ್ಲಿಸಿರಲಿಲ್ಲ. ಆಯೋಗ ಸೂಚಿಸಿದ ಮಾದರಿಯಲ್ಲಿ ಆಸ್ತಿ ಮತ್ತು ಹೊಣೆಗಾರಿಗಳನ್ನು ಬಹಿರಂಗಪಡಿಸಿಲ್ಲ ಎಂಬ ಆಧಾರದಲ್ಲಿ ಪ್ರಜ್ವಲ್ ರೇವಣ್ಣ ಸದಸ್ಯತ್ವ ಅನೂರ್ಜಿತಗೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post