ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆ, ಕನ್ನಡಯ ವೈದ್ಯ ಬರಹಗಾರರ ಸಮಿತಿಯಿಂದ ನೀಡುವ ಶ್ರೇಷ್ಠ ವೈದ್ಯ ಸಾಹಿತಿ ಪ್ರಶಸ್ತಿಗೆ ರಾಜ್ಯದ ಇಬ್ಬರ ವೈದ್ಯರು ಪಾತ್ರರಾಗಿದ್ದಾರೆ.
ಬೆಂಗಳೂರಿನ ನಿಮ್ಹಾನ್ಸ್ ಮನೋವೈದ್ಯಕೀಯ ವಿಭಾಗದ ನಿವೃತ್ತ ಹಿರಿಯ ಪ್ರಾಧ್ಯಾಪಕ, ರಾಜ್ಯದ ಖ್ಯಾತ ಮನೋರೋಗ ತಜ್ಞ ಡಾ.ಸಿ.ಆರ್. ಚಂದ್ರಶೇಖರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸ್ತ್ರೀ ಆರೋಗ್ಯ ಮತ್ತು ಪ್ರಸೂತಿ ತಜ್ಞೆ ಡಾ.ವೀಣಾ ಎಸ್. ಸುಳ್ಯಾ ಅವರುಗಳು 2022-23ನೆಯ ಶ್ರೇಷ್ಠ ವೈದ್ಯ ಸಾಹಿತಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
Also read: ನೂಲು ಹುಣ್ಣಿಮೆ ಹಿನ್ನೆಲೆ: ಶ್ರೀ ರೇಣುಕಾಂಬ ದೇಗುಲದಲ್ಲಿ ಭಕ್ತರಿಂದ ವಿಶೇಷ ಪೂಜೆ ಸಲ್ಲಿಕೆ
ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ನಡೆಯುತ್ತಿರುವ ನೆಯ ಕನ್ನಡ ವೈದ್ಯ ಬರಹಗಾರರ ರಾಜ್ಯ ಸಮ್ಮೇಳನದ ಮೊದಲ ದಿನವಾದ ಇಂದು ಇಬ್ಬರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ, ಅಭಿನಂದಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post