No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಗುರು ಶಿಷ್ಯ ಸಂಬಂಧಕ್ಕೆ ಶ್ರೇಷ್ಟ ಉದಾಹರಣೆ ಡಾ. ಎಸ್. ರಾಧಕೃಷ್ಣನ್: ವೈ. ಪಾಂಡುರಂಗ ನಾಯಕ್

ಕ್ರೈಸ್ಟ್ ಕಿಂಗ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ | ಲಿಡ್ವಿನ್ ಅರಾನ್ಹ ಅವರಿಗೆ 'ಕ್ರೈಸ್ಟ್ ಕಿಂಗ್ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2023
in ಉಡುಪಿ
0
ಗುರು ಶಿಷ್ಯ ಸಂಬಂಧಕ್ಕೆ ಶ್ರೇಷ್ಟ ಉದಾಹರಣೆ ಡಾ. ಎಸ್. ರಾಧಕೃಷ್ಣನ್: ವೈ. ಪಾಂಡುರಂಗ ನಾಯಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಕಾರ್ಕಳ |

ಗುರು ಶಿಷ್ಯ ಸಂಬಂಧಕ್ಕೆ ಶ್ರೇಷ್ಟ ಉದಾಹರಣೆ ಡಾ. ಎಸ್ ರಾಧಕೃಷ್ಣನ್, ಮಕ್ಕಳಿಗೆ ತಂದೆ-ತಾಯಿ, ಶಾಲಾ ಶಿಕ್ಷಕರು, ಆಧ್ಯಾತ್ಮಿಕ ಗುರು ಎಂಬ ಮೂವರು ಮಾರ್ಗದರ್ಶಕರಿದ್ದು ಈ ಮೂವರು ಶ್ರೇಷ್ಟರಾದರೆ ಮಕ್ಕಳ ಭವಿಷ್ಯ ಅತೀ ಶ್ರೇಷ್ಟವಾಗಿ ಮೂಡಿಬರುತ್ತದೆ ಎಂದು ಶ್ರೀ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಚಾರ್ಯ ವೈ. ಪಾಂಡುರಂಗ ನಾಯಕ್  ಹೇಳಿದರು.

ಶಿಕ್ಷಕ ರಕ್ಷಕ ಸಂಘದ ಆಶ್ರಯದಲ್ಲಿ ಇಲ್ಲಿನ ಕ್ರೈಸ್ಟ್ ಕಿಂಗ್ Christ King ಶಿಕ್ಷಣ ಸಂಸ್ಥೆಯ ‘ಫಾ.ಎಫ್.ಪಿ.ಎಸ್ ಮೋನಿಸ್’ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪೋಷಕರು ತಮ್ಮ ಮಕ್ಕಳ ಶಿಕ್ಷಕರಿಗೆ ಗೌರವ ನೀಡಿದರೆ ಮಕ್ಕಳ ಮನಸ್ಸಿನಲ್ಲಿಯೂ ತಮ್ಮ ಶಿಕ್ಷಕರ ಬಗ್ಗೆ ಗೌರವ ಮೂಡಲು ಸಾಧ್ಯ ಎಂದರು.
ಬೆಳ್ಮಣ್ಣುವಿನ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಲಿಡ್ವಿನ್ ಅರಾನ್ಹ ಅವರಿಗೆ ‘ಕ್ರೈಸ್ಟ್‌ಕಿಂಗ್ ಶಿಕ್ಷಕ ರತ್ನ’ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರೆಂಜಾಳ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಅಣ್ಣಿ.ಎಂ ಅವರಿಗೆ ‘ಕ್ರೈಸ್ಟ್‌ಕಿಂಗ್ ಕ್ರೀಡಾ ಶಿಕ್ಷಕಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅಣ್ಣಿ.ಎಂ ಅವರು ತಮ್ಮ ವಿದ್ಯಾರ್ಥಿಗಳ ಬಾಯಿಯಿಂದ ಗುರುಗಳ ಬಗ್ಗೆ ಸಾರ್ಥಕ್ಯದ ಮಾತುಗಳನ್ನು ಕೇಳಿದರೆ ಅದಕ್ಕಿಂತ ಮಿಗಿಲಾದ ಪ್ರಶಸ್ತಿ ಇನ್ನೊಂದಿಲ್ಲ. ಮಕ್ಕಳು ಕ್ರೀಡೆಯಲ್ಲಿ ಸಾಧನೆ ಮಾಡಲು ಪೋಷಕರ ಬೆಂಬಲ ಅತೀ ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ, ಒಂದು ದೇಶ ಸೂಪರ್ ಪವರ್ ಆಗುವುದಿದ್ದರೆ ಅದು ಶಿಕ್ಷಕರಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದು ಶಕ್ತಿ ಅಡಗಿದ್ದು ಅದನ್ನು ಗುರುತಿಸಿ ಹೊರಗೆಳೆಯುವುದು ಶಿಕ್ಷಕರ ಕಾರ್ಯ. ಸಮಾಜದ ಕೆಡುಕುಗಳನ್ನು ಗುಣಪಡಿಸಲು ಇರುವ ಒಂದೇ ಮದ್ದು ಶಿಕ್ಷಣ. ವಿದ್ಯಾವಂತ, ಬುದ್ಧಿವಂತ ಹಾಗೂ ಪ್ರಜ್ಞಾವಂತ ಜನರು ಇರುವ ದೇಶ ಸಮೃದ್ಧವಾಗಿರುತ್ತದೆ ಎಂದು ಹೇಳಿದರು.
ಸಂಸ್ಥೆಯ ಪದವಿಪೂರ್ವ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ ಹಾಗೂ ಶಿಕ್ಷಕ ರಕ್ಷಕ ಸಂಘದ ಪದವಿಪೂರ್ವ ವಿಭಾಗದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿದರು.

Also read: Films with native flavor is Pan Indian: Ashok Kashyap

ಸಂಸ್ಥೆಯ ಹಿಂದಿ ಉಪನ್ಯಾಸಕಿ ಸುನೀತ ಸಾಲಿಯಾನ್ ಹಾಗೂ ಪ್ರಾಥಮಿಕ ಶಾಲಾ ಸಹಶಿಕ್ಷಕಿ ಶಾಜಿದಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಂಸ್ಥೆಯ ಎಲ್ಲಾ ಶಿಕ್ಷಕರು, ಉಪನ್ಯಾಸಕರು ಹಾಗೂ ಬೋಧಕೇತರ ವೃಂದದವರನ್ನು ಈ ಸಂದರ್ಭದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ವಾಲ್ಟರ್ ಡಿಸೋಜ, ಉಪಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಶಿಕ್ಷಕ ರಕ್ಷಕ ಸಂಘದ ಪ್ರಾಥಮಿಕ ವಿಭಾಗದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಸುಪ್ರಿಯಾ, ಜ್ಯೋತಿ ಬಬಿತಾ, ಶಕೀಲಾ ಶೆಟ್ಟಿ, ಸರಿಟಾ ನೊರೋನ್ಹ, ಗ್ರೆಟ್ಟಾ ತಾವ್ರೋ, ಒಲಿವಿಯಾ, ಕವಿತಾ ಪಾಯಸ್, ವನಿತಾ, ಲವಿಟಾ ಡಿಸೋಜ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ – ರಕ್ಷಕ ಸಂಘದ ಸದಸ್ಯ ಉದಯರವಿ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಅಧ್ಯಕ್ಷೆ ಹೇಮಲತಾ ವಂದಿಸಿದರು. ಸದಸ್ಯ ರಾಜೇಶ್ ಹಾಗೂ ವಿದ್ಯಾರ್ಥಿನಿ ಜಿಯಾ ಆಂಟೋನಿಯಾ ಕುಟಿನ್ಹೊ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

 

Tags: coastal newsDakshina KannadaKannadaNewsKannadaNewsLiveKannadaNewsOnlineKannadaWebsiteKarawali NewsKarkalaMangaloreNewsinKannadaNewsKannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Films with native flavor is Pan Indian: Ashok Kashyap

Next Post

ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು: ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು: ಸಿಎಂ ಸಿದ್ದರಾಮಯ್ಯ

ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

June 20, 2026
Crowd in Shivamogga Taluk Office

ಶಿವಮೊಗ್ಗ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಜನವೋ… ಜನ..! ಪ್ರಮಾಣಪತ್ರಕ್ಕಾಗಿ ಜನರ ಪರದಾಟ

June 20, 2026
Indian Railway Special Trains

ಮೈಸೂರು – ಮದಾರ್ ಜಂಕ್ಷನ್ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

June 20, 2026
ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

June 20, 2026
Youth Brutally Murdered Inside House in Shivamogga Village

ಶಿವಮೊಗ್ಗ | ಸುತ್ತುಕೋಟೆ ಗ್ರಾಮದ ಮನೆಯಲ್ಲೇ ಯುವಕನ ಭೀಕರ ಹತ್ಯೆ

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL