ಕ್ರೀಡಾಕೂಟಗಳಲ್ಲಿ ಸೋಲು ಮತ್ತು ಗೆಲುವುಗಳನ್ನು ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಗೆದ್ದವರು ಬೀಗದೇ, ಸೋತವರು ಅನುಭವವೆಂದು ಭಾವಿಸಿ ಕ್ರೀಡಾಮನೋಭಾವವನ್ನು ವೃದ್ಧಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಪಿಯು ವಿಭಾಗದ ಉಪನಿರ್ದೇಶಕ ಬಿ. ಕೃಷ್ಣಪ್ಪ ಹೇಳಿದರು.
ನಿರಂತರ ಅಭ್ಯಾಸ ಮತ್ತು ಕಠಿಣ ಶ್ರಮ ಪಡುವ ಕ್ರೀಡಾಪಟುಗಳು ಕ್ರೀಡಾಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುವುದರಲ್ಲಿ ಸಂದೇಹವಿಲ್ಲ. ಗ್ರಾಮೀಣ ಭಾಗದ ಅನೇಕ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅಂತಹ ಕ್ರೀಡಾಪಟುಗಳು ನಮ್ಮಲ್ಲಿಯೂ ಇದ್ದು, ಅವರನ್ನು ಗುರುತಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿದೆ. ಕ್ರೀಡಾಪಟುಗಳು ಕ್ರೀಡಾಮನೋಭಾವದಿಂದ ಕ್ರೀಡೆಗಳಲ್ಲಿ ಸ್ಪರ್ಧಿಸುವ ಮೂಲಕ ತಾವು ಪ್ರತಿನಿಧಿಸಿದ ಶಿಕ್ಷಣ ಸಂಸ್ಥೆಗೂ ಉತ್ತಮ ಹೆಸರು ತರುವಂತೆ ತಿಳಿಸಿದರು.
Also read: ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ: ಡಿಸಿಎಂ ಶಿವಕುಮಾರ್
ಅಧ್ಯಕ್ಷತೆ ವಹಿಸಿದ್ದ ಅಮರಜ್ಯೋತಿ ಪಿಯು ಕಾಲೇಜ್‌ನ ಪ್ರಾಂಶುಪಾಲರಾದ ಸಿಸ್ಟರ್ ಸಿಲ್ವಿಯಾ ಮಾತನಾಡಿ, ಕ್ರೀಡಾಕೂಟಗಳು ಸಹೋದರತೆ ಭಾವನೆಯನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸುವ ಕೆಲಸ ಶಿಕ್ಷಕರು ಮತ್ತು ಪೋಷಕರ ಮೇಲಿರುತ್ತದೆ. ಕ್ರೀಡೆ ಎಂದರೆ ಶಿಸ್ತು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮುಬೇಕು ಎಂದರು.
ಅಮರಜ್ಯೋತಿ ಪಿಯು ಕಾಲೇಜ್ ಸಂಚಾಲಕಿ ಸಿಸ್ಟರ್ ಲೆನಿಟ ಕ್ರೀಡಾಜ್ಯೋತಿ ಸ್ಥಾಪಿಸಿದರು. ಕ್ರೀಡಾಕೂಟಕ್ಕೆ ಪುರಸಭೆ ಸದಸ್ಯ ಎಂ.ಡಿ. ಉಮೇಶ್ ಚಾಲನೆ ನೀಡಿದರು.ವರದಿ: ಮಧುರಾಮ್, ಸೊರಬ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








