No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Tuesday, March 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ಮಾರ್ಟ್ ಸಿಟಿಯ 2.5 ಕೋಟಿ ಗಿಡಗಳು ಎಲ್ಲಿ? ಕಾಮಗಾರಿ ನಿರ್ವಹಣೆ ಎಲ್ಲಿ? ಫುಟ್’ಪಾತ್’ಗಳು ಎಲ್ಲಿ?

ಶಿವಮೊಗ್ಗದ ಸ್ಮಾರ್ಟ್ ಸಿಟಿ ಸಮಸ್ಯೆಗಳ ಕುರಿತು ಅಹವಾಲು ಸ್ವೀಕಾರ ಸಭೆಯಲ್ಲಿ ಪ್ರಶ್ನೆಗಳ ಸುರಿಮಳೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 13, 2023
in ಶಿವಮೊಗ್ಗ
0
ಸ್ಮಾರ್ಟ್ ಸಿಟಿಯ 2.5 ಕೋಟಿ ಗಿಡಗಳು ಎಲ್ಲಿ? ಕಾಮಗಾರಿ ನಿರ್ವಹಣೆ ಎಲ್ಲಿ? ಫುಟ್’ಪಾತ್’ಗಳು ಎಲ್ಲಿ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಸ್ಮಾರ್ಟ್ ಸಿಟಿಯಿಂದ ನಗರದಲ್ಲಿ ಅನುಷ್ಟಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳ ಕುರಿತಾಗಿ ಆಯೋಜಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಹಾಗೂ ಪರಿಹಾರಾತ್ಮಕ ಕ್ರಮಗಳ ಸಭೆಯಲ್ಲಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಪ್ರಶ್ನೆಗಳ ಸುರಿಮಳೆಯೇ ತೂರಿಬಂದವು.

ಸಭೆಯಲ್ಲಿ ಮಾತನಾಡಿದ, ಶಿವಮೊಗ್ಗ ಸ್ಮಾರ್ಟ್ ಸಿಟಿ Shivamogga Smart City ವ್ಯವಸ್ಥಾಪಕ ನಿರ್ದೇಶಕ ಕೆ. ಮಾಯಣ್ಣ ಗೌಡ, ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಗೆ 930 ಕೋಟಿ ಮಂಜೂರಾಗಿದ್ದು, 71 ಕಾಮಗಾರಿಗಳ ಪೈಕಿ 66 ಕಾಮಗಾರಿಗಳು ಭೌತಿಕವಾಗಿ ಮತ್ತು ಆರ್ಥಿಕವಾಗಿ ಪೂರ್ಣಗೊಂಡಿದೆ. 5 ಕಾಮಗಾರಿಗಳು ಪ್ರಗತಿಯಲ್ಲಿವೆ. 6.0 ಚ.ಕಿ.ಮೀ ನ್ನು ಎಬಿಡಿ ಏರಿಯಾ ಅಭಿವೃದ್ದಿಗೆ ಪರಿಗಣಿಸಲಾಗಿದೆ.
2020ರ ಜುಲೈ 3ರಿಂದ 2022ರ ಜೂನ್ 1 ರವರೆಗೆ ಒಟ್ಟು 952 ಅಹವಾಲು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ. 2022ರ ಜೂನ್ 1 ರಿಂದ ಪ್ರಸ್ತುತದವರೆಗೆ 1408 ಅಹಲವಾಲು ಸ್ವೀಕರಿಸಿದ್ದು, 1385 ವಿಲೇವಾರಿಯಾಗಿದ್ದು 23 ಬಾಕಿ ಉಳಿದಿದೆ. ಇಂದಿನ ಸಭೆಯಲ್ಲಿ ಸ್ವೀಕರಿಸಲಾಗುವ ಅಹವಾಲುಗಳನ್ನು ವರ್ಗೀಕರಿಸಿ ಕ್ರಿಯಾಯೋಜನೆ ರೂಪಿಸಿ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಗ್ರಾಹಕ ಹಿತರಕ್ಷಣೆ ಒಕ್ಕೂಟದ ಅಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ಸ್ಮಾರ್ಟ್ ಸಿಟಿ ಕಾಮಗಾರಿಗಳ ಕುರಿತು ನಾಗರೀಕರಲ್ಲಿ ಅನೇಕ ದೂರುಗಳಿವೆ. ಸಮಸ್ಯೆ ಪರಿಹಾರಕ್ಕೆ ಮೊದಲು ಸ್ಥಳವೀಕ್ಷಣೆ ಆಗಬೇಕು. ಹಲವಾರು ವಿಷಯಗಳಲ್ಲಿ ಸ್ಪಷ್ಟತೆ ಇಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಸ್ಮಾರ್ಟ್ ಸಿಟಿಯಿಂದ 5 ವರ್ಷಗಳ ನಿರ್ವಹಣೆ ಇದೆ ಎಂದಿದ್ದು, ಕಾಲಾವಧಿಯನ್ನು ತಿಳಿಸಬೇಕು. ಹಾಗೂ ಭಾಗೀದಾರರ ಸಭೆಗಳು ನಡೆದಿಲ್ಲ. ಆದ್ದರಿಂದ ಅನೇಕ ಸಮಸ್ಯೆಗಳು ತಲೆದೋರಿವೆ ಎಂದರು.

ಸ್ಮಾರ್ಟ್ ಸಿಟಿ ಕಾರ್ಯಪಾಲಕ ಅಭಿಯಂತರ ಕೃಷ್ಣಪ್ಪ ಉತ್ತರಿಸಿ, 2023ರ ಜೂನ್ 3 ರಿಂದ 5 ವರ್ಷಗಳ ಕಾಲ ಪಾರ್ಕ್ ಹೊರತುಪಡಿಸಿ ಇನ್ನುಳಿದ ಕಾಮಗಾರಿಗಳಿಗೆ ಸ್ಮಾರ್ಟ್ ಸಿಟಿ ವತಿಯಿಂದ ನಿರ್ವಹಣೆ ಇದೆ ಎಂದರು.
ನಾಗರೀಕ ಹಿತ ರಕ್ಷಣಾ ವೇದಿಕೆಯ ಜನಾರ್ಧನ ಪೈ ಮಾತನಾಡಿ, ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ಗ್ರೀನ್ ಅರ್ಬನೈಸೇಷನ್ ಕೈಗೊಳ್ಳಲಾಗಿದೆ. ಎಲ್ಲಿ ಗಿಡಗಳನ್ನು ನೆಡಲಾಗಿದೆ. ಗಿಡಗಳು ಯಾವ ಸ್ಥಿತಿಯಲ್ಲಿವೆ. ಕಾರ್ಯಪಾಲಕ ಇಂಜಿನಿಯರ್ 8600 ಗಿಡಗಳು ಇವೆ ಎನ್ನುತ್ತಿದ್ದು, ಅದರ ಬಗ್ಗೆ ಭೌತಿಕ ಪರಿಶೀಲನೆ ಆಗಬೇಕು. ಲಕ್ಷ್ಮಿ ಟಾಕೀಸ್ ರಸ್ತೆಯಲ್ಲಿ ಸಾರ್ವಜನಿಕರು ಬೇಡವೆಂದರೂ ಉಪಯೋಗವಿಲ್ಲದ ಸೈಕಲ್ ಪಾಥ್ ನಿರ್ಮಿಸಲಾಗಿದೆ. ಸರ್ವೇ ವರದಿ ಪಡೆಯುವ ವೇಳೆ ಇಲ್ಲಿ ಪಾಥ್ ಬೇಡ ಎಂದಿದ್ದೆವು. ಹಾಗೂ ಸ್ಮಾರ್ಟ್ ಸಿಟಿ ಕೇಬಲ್ ಕೆಲಸದಲ್ಲಿ ಕಳಪೆ ವೈರ್ ಬಳಕೆಯಾಗಿದ್ದು, ಜನರು ಭಯದಲ್ಲಿದ್ದಾರೆ. ಅನಾಹುತಗಳು ಸಂಭವಿಸಿದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದರು.

ಚನ್ನಪ್ಪ ಲೇಔಟ್ ನಾಗರಿಕರು ಮಾತನಾಡಿ, ತಮ್ಮ ಭಾಗದಲ್ಲಿ ಒಂದು ಕಾಂಕ್ರಿಟ್ ಭರಿತವಾದ ಕಂಬ ಇದ್ದು ಅತ್ಯಂತ ಅಪಾಯಕಾರಿಯಾಗಿದೆ. ಹಾಗೂ ಯುಜಿಡಿ ಕಾಮಗಾರಿಗೆ ಮನೆ ಮುಂದೆ ನೆಲ ಅಗೆಯುತ್ತಾರೆ ಅದನ್ನು ಮುಚ್ಚುವುದಿಲ್ಲ. ಮತ್ತೆ 15 ದಿನಗಳಾದರೂ ಕಸ ತೆಗೆದಕೊಂಡು ಹೋಗುವುದಿಲ್ಲವೆಂದು ದೂರಿದರು.
ರವೀಂದ್ರನಗರದ ವಕೀಲರಾದ ಸೋಮಣ್ಣ ಮಾತನಾಡಿ, ತಮ್ಮ ವಾರ್ಡ್’ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಪೂರ್ಣಗೊಂಡಿಲ್ಲ. ಯುಜಿಡಿ ಕೆಲಸ ಅಪಾಯಕಾರಿಯಾಗಿದೆ. 24*7 ನೀರು ಇರಲಿ 2 ಗಂಟೆ ಕೂಡ ನೀರು ಬರುವುದಿಲ್ಲ ಎಂದರು.

ವಕೀಲರಾದ ಚಂದ್ರಕಾAತ್ ಮಾತನಾಡಿ, ಗಾರ್ಡನ್ ಏರಿಯಾದಲ್ಲಿ ಯಾವ ರಸ್ತೆಯೂ ಸರಿ ಇಲ್ಲ. ನೀರಿನ ಪೈಪ್’ಗಳು ಒಡೆದು ಹೋಗಿವೆ. ಇಲ್ಲಿ ಅಸಮರ್ಪಕವಾಗಿ ಚರಂಡಿ ಕೆಲಸ ಮಾಡಲಾಗಿದೆ. ಗುತ್ತಿಗೆದಾರರು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಣೆ ಮಾಡಿಲ್ಲವೆಂದರು.
12 ನೆಯ ವಾರ್ಡಿನಲ್ಲಿ ಮೂಲಭೂತ ಸೌಕರ್ಯದ ಕೊರತೆ ಹೆಚ್ಚಿದೆ. ಸಣ್ಣಪುಟ್ಟ ಮಳೆ ಬಂದರೂ ಜನರು ಪೇಚಾಡುವ ಸ್ಥಿತಿ ಇದೆ. ಅಂಗಳಯ್ಯನ ಕೇರಿಗೆ ಮೂಲಭೂತ ಸೌಕರ್ಯಗಳನ್ನು ಒಗದಿಸಬೇಕೆಂದರು.

Also read: ಹಿಂದೂ ಕಾರ್ಯಕರ್ತೆ, ವಾಗ್ಮಿ ಚೈತ್ರಾ ಕುಂದಾಪುರ ಅರೆಸ್ಟ್: ಕಾರಣವೇನು?

ಪಾಲಿಕೆ ಸದಸ್ಯೆ ಸುರೇಖಾ ಮುರಳಿಧರ್ ಮಾತನಾಡಿ, ಸದರಿ ವಾರ್ಡ್ ಶೇ.100 ಸ್ಮಾರ್ಟ್ ಸಿಟಿ ವ್ಯಾಪ್ತಿಗೆ ಬರುತ್ತದೆ. ಆದರೆ 3 ಮುಖ್ಯ ರಸ್ತೆಗಳ ಕೆಲಸ ಆಗದೆ ಬಾಕಿ ಇದೆ. ಇವುಗಳನ್ನು ಹೇಗೆ ಅಭಿವೃದ್ದಿಪಡಿಸಬೇಕು ಎಂದರು.
ರವಿ ಕಿಶನ್ ಮಾತನಾಡಿ, ಸೀನಪ್ಪಶೆಟ್ಟಿ ವೃತ್ತದಿಂದ ರೈಲ್ವೇ ಸ್ಟೇಷನ್’ವರೆಗಿನ ರಸ್ತೆ ತುಂಬ ಚೇಂಬರ್’ಗಳಿವೆ. ಹಲವಾರು ಕಡೆ ಬ್ಯಾರಿಕೇಡ್ ಹಾಕಿದ್ದು, ದಿನದಿಂದ ದಿನಕ್ಕೆ ಈ ಬ್ಯಾರಿಕೇಡ್ ಬದಲಾಯಿಸಲಾಗುತ್ತಿರುತ್ತದೆ. ದ್ವಿಚಕ್ರ ವಾಹನ ಸವಾರರಿಗೆ ಇದು ಸವಾಲಾಗಿದೆ ಎಂದರು.

ಸಂಬಂಧಿಸಿದ ಅಧಿಕಾರಿ ಮನೋಜ್ ಮಾತನಾಡಿ, ಸದರಿ ರಸ್ತೆಯಲ್ಲಿ 55 ಚೇಂಬರ್’ಗಳಿದ್ದು, 20 ಚೇಂಬರ್ ಸಮಸ್ಯೆ ಇತ್ತು. 8 ನ್ನು ಸರಿಪಡಿಸಲಾಗಿದ್ದು, ಉಳಿದವನ್ನು ಸರಿಪಡಿಸಲಾಗುತ್ತಿದೆ ಎಂದರು.

ಡಾ. ಶ್ರೀನಿವಾಸನ್ ಮಾತನಾಡಿ, ವಿನೋಬನಗರದಲ್ಲಿ ರಸ್ತೆಯಲ್ಲಿ ಅಂಗಡಿ ಮುಗ್ಗಟ್ಟಿನವರು ತಮ್ಮ ವಸ್ತು ಪ್ರದರ್ಶನಕ್ಕೆ ಇಟ್ಟಿದ್ದು, ನಡೆಯಲಿಕ್ಕೆ ದಾರಿ ಇಲ್ಲದಂತಾಗಿದೆ ಎಂದರು.
ಬಸವನಗುಡಿಯ ರೇಖಾ ಮಾತನಾಡಿ, ತಮ್ಮ ಪ್ರದೇಶದಲ್ಲಿ ಯುಜಿಡಿ ಕೆಲಸ ಕಳಪೆಯಾಗಿದೆ ಹಾಗೂ ಅವೈಜ್ಞಾನಿಕವಾಗಿದೆ. ಮಳೆ ಬಂದರೆ ನೀರು ಮನೆ ಒಳಗೆ ನುಗ್ಗುತ್ತದೆ. ಸ್ಮಾರ್ಟ್ ಸಿಟಿ ಕಾಮಗಾರಿಗೂ ಮುನ್ನ ಈ ರೀತಿ ಆಗುತ್ತಿರಲಿಲ್ಲ. ಹಾಗೂ ಕನ್ಸರ್ವೆನ್ಸಿಯೂ ಅವೈಜ್ಞಾನಿವಕಾಗಿ ಆಗಿದ್ದು ಹೊಸದಾಗಿ ಮಾಡಬೇಕಿದೆ. ಸಮರ್ಪಕ ಯೋಜನೆ ಇಲ್ಲದೆ ಕೆಲಸ ಮಾಡಿದ್ದಾರೆ. ಸಮಸ್ಯೆ ಕುರಿತು ಇಂಜಿನಿಯರ್’ಗಳಿಗೆ ಕರೆ ಮಾಡಿದರೆ ಮತ್ತೊಬ್ಬರ ಮೇಲೆ ಹೇಳುತ್ತಾರೆ. ಸರಿಯಾದ ಸ್ಪಂದನೆ ಇಲ್ಲ ಎಂದು ದೂರಿದ ಅವರು ಮುಂದೆ ಮಾಡುವ ಕೆಲಸವನ್ನಾದರೂ ಸಮರ್ಪಕವಾಗಿ ಮಾಡುವಂತೆ ಹಾಗೂ ತಪ್ಪುಗಳನ್ನು ಸರಿಪಡಿಸುವಂತೆ ಆಗ್ರಹಿಸಿದರು.

ಬಾಪೂಜಿನಗರದ ನಾಗರೀಕರು ತಮ್ಮ ವಾರ್ಡ್’ನಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. 24×7 ನೀರಿನ ಸಂಪರ್ಕ ಹಾಳಾಗಿದೆ. ನೀರಿನ ಸಂಪರ್ಕವಿಲ್ಲದೆ 6 ತಿಂಗಳಾಯಿತು. ಅತ್ಯಂತ ಸಮಸ್ಯೆಯಾಗಿದೆ ಎಂದರು.

http://kalpa.news/wp-content/uploads/2023/05/VID-20230516-WA0005.mp4

ಮೋಹನ್ ಮಾತನಾಡಿ, ಸ್ಮಾರ್ಟ್ ಸಿಟಿ ಅನುಷ್ಟಾನಗೊಂಡಿರುವ ಪ್ರತಿ ವಾರ್ಡಿನಲ್ಲಿ ಸ್ಥಳ ಪರಿಶೀಲನೆ ಆಗಬೇಕೆಂದರು. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಟಾನಗೊಂಡಿರುವ ವ್ಯಾಪ್ತಿಯ ಜನರು ಅನೇಕ ದೂರುಗಳನ್ನು ಸಲ್ಲಿಸಿದರು.

ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಕೆ. ಮಾಯಣ್ಣ ಗೌಡ ಮಾತನಾಡಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಜನರ ಅಭಿಪ್ರಾಯ ಸಂಗ್ರಹಿಸಿ ಪೂರ್ಣಗೊಳಿಸಲಾಗುವುದು. ತೊಂದರೆ ಇರುವೆಡೆ ಸಾಧ್ಯವಾದಷ್ಟು ಸ್ಥಳ ಪರಿಶೀಲನೆ ನಡೆಸಿ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿ ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು, ನಾಗರೀಕರು ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ವರ್ಗದ ಅಭಿಯಂತರರು, ತಾಂತ್ರಿಕ ಅಧಿಕಾರಿಗಳು, ಪಾಲಿಕೆ, ಮೆಸ್ಕಾಂ ಅಧಿಕಾರಿಗಳು, ನೀರು ಸರಬರಾಜು ಮತ್ತು ಒಳಚರಂಡಿ, ಜಲ ಮಂಡಳಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಪಾಲ್ಗೊಂಡು ಪರಿಹಾರಾತ್ಮಕ ಕ್ರಮಗಳ ಕುರಿತು ಚರ್ಚಿಸಿದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Previous Post

ಹಿಂದೂ ಕಾರ್ಯಕರ್ತೆ, ವಾಗ್ಮಿ ಚೈತ್ರಾ ಕುಂದಾಪುರ ಅರೆಸ್ಟ್: ಕಾರಣವೇನು?

Next Post

ಮಂತ್ರಾಲಯದಲ್ಲಿ ಗುರುರಾಯರ ದರ್ಶನ ಪಡೆದ ಬ್ರಿಟನ್ ಪ್ರಧಾನಿ ಪೋಷಕರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂತ್ರಾಲಯದಲ್ಲಿ ಗುರುರಾಯರ ದರ್ಶನ ಪಡೆದ ಬ್ರಿಟನ್ ಪ್ರಧಾನಿ ಪೋಷಕರು

ಮಂತ್ರಾಲಯದಲ್ಲಿ ಗುರುರಾಯರ ದರ್ಶನ ಪಡೆದ ಬ್ರಿಟನ್ ಪ್ರಧಾನಿ ಪೋಷಕರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತಾಯಿಯ ಕೈಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವು

ಘೋರ ಘಟನೆ | ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ದಾರುಣ ಸಾವು

March 31, 2026
ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

March 31, 2026
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

March 31, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗದ ಸಾಂಸ್ಕೃತಿಕ ವೈಭವ, ಅಭಿವೃದ್ಧಿ ಕಾರ್ಯಗಳನ್ನು ಜಗತ್ತಿಗೆ ಪರಿಚಯಿಸಿ: ಶಾಸಕ ಚನ್ನಬಸಪ್ಪ

March 31, 2026
ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

March 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL