ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ KSRTC13 ಸಾವಿರ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ Minister Ramalingareddy ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಬಹಳಷ್ಟು ಸಿಬ್ಬಂದಿಗಳ ಕೊರತೆಯಿದೆ. ಹೀಗಾಗಿ, ಶೀಘ್ರದಲ್ಲೇ 13 ಸಾವಿರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದಿದ್ದಾರೆ.
ಇನ್ನು, ಖಾಸಗಿ ಬಸ್’ಗಳು ಹೆಚ್ಚಿನ ದರ ತೆಗೆದುಕೊಳ್ಳುತ್ತಿರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದು ಮುಂದುವದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
Also read: ನದಿಯಲ್ಲಿ ಮಗುಚಿಬಿದ್ದ ದೋಣಿ: 20 ಮಕ್ಕಳ ರಕ್ಷಣೆ, ಉಳಿದವರಿಗಾಗಿ ಶೋಧ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post