No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೇಂದ್ರದ ಬರನಿರ್ವಹಣೆ ಕೈಪಿಡಿಯ ಮಾನದಂಡಗಳಿಂದಲೇ ಬರಗಾಲ ಘೋಷಣೆ ವಿಳಂಬ: ಸಿಎಂ ಸಿದ್ಧರಾಮಯ್ಯ

kalpa News by kalpa News
September 20, 2023
in ಬೆಂಗಳೂರು ನಗರ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಹೇಳಿದ್ದಾರೆ.

ಬರ ಘೋಷಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿಯ ವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬರಘೋಷಣೆಯ ಮಾನದಂಡಗಳ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡಹೇರಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಕೆಲಸವನ್ನು ಮಾಡದೆ ರಾಜ್ಯದ ಬರ ಪರಿಸ್ಥಿತಿಯ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಸರ್ಕಾರದ ವಿರುದ್ದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

ಕರ್ನಾಟಕವು ವೈವಿಧ್ಯಮಯವಾದ 14 ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಪ್ರತಿಯೊಂದು ವಲಯವೂ ತನ್ನದೇ ಆದ ಸವಾಲುಗಳನ್ನು ಹೊಂದಿದೆ. ಪ್ರಸಕ್ತ ಇರುವ ಮಾನದಂಡಗಳು ಎಲ್ಲ ವಲಯಗಳಿಗೂ ಏಕರೂಪವಾಗಿದ್ದು, ಇದು ಬರ ಘೋಷಣೆಗೆ ಅಗತ್ಯವಾದ ಸೂಕ್ಷ್ಮಗಳು ಮತ್ತು ಬದಲಾವಣೆಗಳನ್ನು ಒಳಗೊಳ್ಳುವುದಿಲ್ಲ. ಹಾಗಾಗಿ, ವಲಯವಾರು ನಿರ್ದಿಷ್ಟವಾದ ಸೂಚ್ಯಂಕಗಳನ್ನು ಬರ ಘೋಷಣೆಗೆ ರೂಪಿಸುವುದು ಅಗತ್ಯವಾಗಿರುತ್ತದೆ.
ಪ್ರಸಕ್ತ ಬರ ಘೋಷಣೆಯ ಮಾನದಂಡಗಳು ಹವಾಮಾನಶಾಸ್ತ್ರೀಯ, ಕೃಷಿ ಹಾಗೂ ಜಲಶಾಸ್ತ್ರೀಯ ಬರಗಳ ಸೂಚ್ಯಂಕಗಳನ್ನು ತನ್ನ ಮಾನದಂಡಗಳಲ್ಲಿ ಕ್ರೋಢೀಕರಿಸಿಕೊಂಡಿದೆ. ಆದರೆ, ಸದಾಕಾಲವೂ ಇದು ಅನ್ವಯಯೋಗ್ಯವೆಂದೇನೂ ಅಲ್ಲ. ಹವಾಮಾನ ಶಾಸ್ತ್ರೀಯ ಬರವನ್ನು ಪರಿಗಣಿಸಿಯೇ ನೋಡುವುದಾದರೆ, ಮುಂಗಾರಿನಲ್ಲಿ ಆರಂಭದಲ್ಲಿ ಮಳೆ ಕೊರತೆ ಇದ್ದದ್ದು ಆನಂತರ ಪ್ರಬಲ ಮಾರುತಗಳ ಪರಿಣಾಮ ಸುದಾರಿಸಬಹುದು. ಇತ್ತೀಚಿನ ವರ್ಷಗಳಲ್ಲಿ ಇದು ಹೆಚ್ಚು ಘಟಿಸಿದೆ. ಆಗಸ್ಟ್-ಸೆಪ್ಟೆಂಬರ್‌ ಅವಧಿಯಲ್ಲಿ ಮಳೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ, ಮುಂಗಾರು ಆರಂಭದಲ್ಲಿ ಮಳೆ ಕೊರತೆಯ ಕಾರಣಕ್ಕೆ ಬಿತ್ತನೆ ಪ್ರಮಾಣ ಇಳಿಕೆಯಾಗಿರುತ್ತದೆ. ಪರಿಣಾಮ ಬೆಳೆಯಲ್ಲಿ ಕೊರತೆಯುಂಟಾಗಿ ಕೃಷಿ ಆಧರಿತ ಬರದ ಸನ್ನಿವೇಶ ಉದ್ಭವಿಸುತ್ತದೆ. ಅದರೆ, ಇದೇ ವೇಳೆ ಸುಧಾರಿಸಿದ ಮಳೆಯ ಮಾರುತಗಳಿಂದಾಗಿ ಹವಾಮಾನ ಮತ್ತು ಜಲಶಾಸ್ತ್ರೀಯ ಬರ ಕಾಣದೆ ಹೋಗಬಹುದು. ಈ ಸೂಕ್ಷ್ಮವನ್ನು ಬರ ಘೋಷಣೆಗೆ ಕಡ್ಡಾಯವಾಗಿರುವ ಮಾನದಂಡಗಳು ಒಳಗೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

Also read: ಕಾಲುಬಾಯಿ ರೋಗ ನಿಯಂತ್ರಣಕ್ಕೆ ಕಡ್ಡಾಯವಾಗಿ ಲಸಿಕೆ ಹಾಕಿಸಿ: ಡಿಸಿ ಸೆಲ್ವಮಣಿ

ಭಾರತೀಯ ಹವಾಮಾನ ಇಲಾಖೆಯು ದೇಶಾದ್ಯಂತ ಶೇ.10 ಮಳೆಯ ಕೊರತೆಯನ್ನೂ ಸಹ ಬರದ ವರ್ಷ ಎಂದು ತೀರ್ಮಾನಿಸಿ ಘೋಷಿಸುತ್ತದೆ. ಆದರೆ, ಮಾನದಂಡಗಳ ಪ್ರಕಾರ ರಾಜ್ಯಗಳು ಬರ ಘೋಷಣೆಯನ್ನು ಮಾಡಬೇಕಾದರೆ ಮಳೆಯ ವ್ಯತ್ಯಯ ಸೂಚ್ಯಂಕವು ಶೇ.60ಕ್ಕಿಂತ ಹೆಚ್ಚಿರಬೇಕು ಎನ್ನಲಾಗಿದೆ. ನಾವು ಈ ಎರಡರ ನಡುವಿನ ಅಂತರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ಮಳೆಯ ವ್ಯತ್ಯಯ ಸೂಚ್ಯಂಕವು ಶೇ.20ರಿಂದ ಶೇ.59ರವರೆಗೆ ಇದ್ದರೂ ಅದು ಬರ ಘೋಷಣೆಗೆ ಅಗತ್ಯವಾದ ಕ್ರಿಯಾಕಾರಣ (ಟ್ರಿಗರ್‌) ಅಂಶವೆಂದು ಪರಿಗಣಿಸಬೇಕು.
ಶುಷ್ಕ ಅಥವಾ ಒಣ ಹವೆಯ ವಿಚಾರದಲ್ಲಿಯೂ ಕೈಪಿಡಿಯಲ್ಲಿ ಕಠಿಣವಾದ ನಿಯಮಾವಳಿ ಇದೆ. ಬರ ಘೋಷಿಸಲು ಮೂರು ವಾರಗಳ ಒಣಹವೆಯನ್ನು ಸೂಚ್ಯಂಕವಾಗಿ ಪರಿಗಣಿಸಲಾಗಿದೆ. ವಿಪರ್ಯಾಸವೆಂದರೆ, ಎರಡು ಮೂರು ವಾರಗಳ ಒಣಹವೆ ಕೂಡ ಬೆಳೆಯ ಮೇಲೆ ಗಂಭೀರ ದುಷ್ಪರಿಣಾಮ ಉಂಟು ಮಾಡಿ ಸರಿಪಡಿಸಲಾಗದ ಬೆಳೆಹಾನಿಗೆ ಕಾರಣವಾಗುತ್ತದೆ. ಹಾಗಾಗಿ ಮಳೆ ಕುರಿತಾದ ಸೂಚ್ಯಂಕದಲ್ಲಿ ಒಣಹವೆಯ ಅವಧಿಯನ್ನು ಎರಡು ವಾರಗಳಿಗಿಂತ ಕಡಿಮೆ ಎಂದು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ಬರ ಘೋಷಣೆಯ ವಿಳಂಬಕ್ಕೆ ಕಾರಣವಾಗುವ ಕೈಪಿಡಿಯಲ್ಲಿರುವ ಮತ್ತೊಂದು ಪ್ರಮುಖ ಮಾನದಂಡವೆಂದರೆ ಅದು ರಾಜ್ಯ ಸರ್ಕಾರವು ‘ಇನ್ನು ಯಾವುದೇ ಬಿತ್ತನೆ ಚಟುವಟಿಕೆ’ ನಡೆಯುವುದಿಲ್ಲ ಎಂದು ಬೆಳೆ ಹಂಗಾಮಿನ ವೇಳೆ ಕೇಂದ್ರ ಸರ್ಕಾರಕ್ಕೆ ಕಡ್ಡಾಯವಾಗಿ ಪ್ರಮಾಣಪತ್ರ ಸಲ್ಲಿಸಬೇಕಿರುವುದು. ಇದು ಇನ್‌ಪುಟ್‌ ಸಬ್ಸಿಡಿ ಪರಿಕಲ್ಪನೆಗೆ ವ್ಯತಿರಿಕ್ತವಾಗಿದೆ. ಇನ್‌ಪುಟ್‌ ಸಬ್ಸಿಡಿ ಪರಿಕಲ್ಪನೆಯು ತಕ್ಷಣದ ಪರಿಹಾರ ನೀಡುವ ಮೂಲಕ ಆರ್ಥಿಕ ಚಟುವಟಿಕೆಯನ್ನು ಪುನರಾರಂಭಿಸಬೇಕು ಎನ್ನುತ್ತದೆ. ಆದರೆ, ಮೇಲೆ ಹೇಳಿದ ಕೇಂದ್ರದ ನಿಯಮಾವಳಿಯಿಂದಾಗಿ ರಾಜ್ಯ ಸರ್ಕಾರವು ಬರ ಘೋಷಣೆ ಮಾಡಿ ತಕ್ಷಣ ಪರಿಹಾರಕ್ಕೆ ಮುಂದಾಗಲು ಸಾಧ್ಯವಾಗುವುದಿಲ್ಲ.
ಬರ ಘೋಷಣೆಗೆ ಪರಿಗಣಿಸಲಾಗುವ ಇತರ ಸೂಚ್ಯಂಕಗಳಾದ ಅಂತರ್ಜಲ ಮಟ್ಟ, ಜೈವಿಕ ಪರಿಸರದ (ಬಯೋಮಾಸ್‌) ಸೂಚ್ಯಂಕಗಳು ಸಹ ಪರಿಶೀಲನೆಗೆ ಒಳಪಡಬೇಕಾಗುತ್ತದೆ. ಅಂತರ್ಜಲದ ಮಟ್ಟ ಕುಸಿಯಲು ಅಥವಾ ಹೆಚ್ಚಳವಾಗಲು ಕನಿಷ್ಠ 2-3 ವಾರಗಳ ಅವಧಿಯ ಅಗತ್ಯವಿದೆ. ಹಾಗಾಗಿ ಇದರ ಪರಿಗಣನೆಯ ವೇಳೆ ವಿವೇಚನೆ ಅಗತ್ಯ. ಅದೇ ರೀತಿ, ಉಪಗ್ರಹ ಆಧರಿತ ಎನ್‌ಡಿವಿಐ ಸೂಚ್ಯಂಕವು ಕಳೆಯನ್ನೂ ಸಹ ಹಸಿರು ಜೈವಿಕ ಪರಿಸರವೆಂದು ಪರಿಗಣಿಸುವ ಸಾಧ್ಯತೆ ಇದೆ. ಈ ಅಂಶಗಳು ಬರ ಘೋಷಣೆಗೆ ಅಗತ್ಯವಾದ ಸೂಚ್ಯಂಕಗಳ ಪರಿಶೀಲನೆಯಲ್ಲಿ ನೇತ್ಯಾತ್ಮಕ ಪರಿಣಾಮಕ್ಕೆ ಕಾರಣವಾಗುತ್ತವೆ.

ಬೆಳೆಹಾನಿ ಸಹಾಯಧನಕ್ಕೆ ಅರ್ಹತೆ ಪಡೆಯಲು ಬರನಿರ್ವಹಣೆ ಕೈಪಿಡಿ 2016 ರಲ್ಲಿನ ನಿಯಮಗಳು ಹಾಗೂ ಎಸ್‌ ಡಿ ಆರ್‌ ಎಫ್‌ / ಎನ್‌ ಡಿ ಆರ್‌ ಎಫ್‌‌ ನಿಯಮಾವಳಿಗಳನ್ನು ಸಮೀಕರಿಸುವ ಅಗತ್ಯವಿದೆ. ಬರ ನಿರ್ವಹಣೆ ಕೈಪಿಡಿಯ ಮಾನದಂಡದಡಿ ಬೆಳೆಹಾನಿ ಸಹಾಯಧನಕ್ಕೆ ಅರ್ಹತೆಗೆ ಪಡೆಯಲು ಶೇ. 50 ರಷ್ಟು ಬೆಳೆಹಾನಿ ಪ್ರಮಾಣ ಅಗತ್ಯವಿರುತ್ತದೆ, ಈ ಪ್ರಮಾಣ ವಿಪತ್ತಿನ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಎಸ್ ‌ಡಿ ಆರ್ ‌ಎಫ್‌/ ಎನ್‌ ಡಿ ಆರ್‌ ಎಫ್‌ ಮಾನದಂಡಗಳ ಅಡಿ ಸೂಚಿಸಿರುವ ಶೇ.33 ಬೆಳೆ ನಾಶಕ್ಕೆ ವ್ಯತಿರಿಕ್ತವಾಗಿದೆ. ಹಾಗಾಗಿ, ಕೈಪಿಡಿಯಲ್ಲಿನ ಮಾನದಂಡವನ್ನು ಇದಕ್ಕೆ ಹೊಂದಾಣಿಕೆ ಮಾಡುವುದು ಸೂಕ್ತವಾಗಿದೆ.
ಬರದಿಂದ ಉಂಟಾಗುವ ಸಂಕಷ್ಟವನ್ನು ಎದುರಿಸುವಲ್ಲಿ ವಿಮೆಯ ಪಾತ್ರವು ಮಹತ್ವದ್ದಾಗಿದೆ. ಪ್ರಸಕ್ತ ವ್ಯವಸ್ಥೆಯಲ್ಲಿ ತಮ್ಮ ಹಕ್ಕಿನ ವಿಮೆಯ ಹಣವನ್ನು ಪಡೆಯುವಲ್ಲಿ ರೈತರು ಅನೇಕ ಸಂದರ್ಭಗಳಲ್ಲಿ ಸಮಸ್ಯೆಯನ್ನು ಎದುರಿಸುತ್ತಾರೆ. ಇದಕ್ಕೆ ಕಾರಣ ಜೋಡಣೆಯಿಲ್ಲದೆ ಚದುರಿರುವ ಪ್ರಸಕ್ತ ವ್ಯವಸ್ಥೆ. ಇನ್‌ಪುಟ್‌ ಸಬ್ಸಿಡಿಯ ವಿತರಣೆಯನ್ನು ವಿಮಾ ಕಂಪೆನಿಗಳು ಬೆಳೆ ನಾಶವಾಗಿರುವ ಸಂಬಂಧ ವಿಮಾ ಪರಿಹಾರ ನೀಡಲು ಪುರಾವೆಯಾಗಿ ಪರಿಗಣಿಸಬೇಕು. ಹೀಗೆ ವಿಮಾ ಪರಿಹಾರ ಹಾಗೂ ಇನ್‌ಪುಟ್‌ ಸಬ್ಸಿಡಿಗಳನ್ನು ಜೋಡಿಸುವುದರಿಂದ ರೈತರಿಗೆ ಸಂಕಷ್ಟದ ಸಮಯದಲ್ಲಿ ಅತ್ಯಗತ್ಯವಾದ ಆರ್ಥಿಕ ಬೆಂಬಲವು ತ್ವರಿತವಾಗಿ ಒದಗಿಸಲು ಸಾಧ್ಯವಾಗುತ್ತದೆ. ಇದರಿಂದ ವಿಮಾ ಪರಿಹಾರಕ್ಕೆ ಸಂಬಂಧಿಸಿದ ಸಂಕೀರ್ಣ ಪ್ರಕ್ರಿಯೆಯಲ್ಲಿ ಸರಳತೆ ಸಾಧ್ಯವಾಗುವುದಲ್ಲದೆ, ಪಾರದರ್ಶಕತೆಯೂ ಮೂಡುತ್ತದೆ. ವಿಮೆಯ ಪರಿಹಾರ ದೊರೆಯುವಲ್ಲಿನ ವಿಳಂಬ ಕಡಿಮೆಯಾಗುತ್ತದೆ.

ಈ ಮೇಲಿನ ಅಂಶಗಳ ಹಿನ್ನೆಲೆಯಲ್ಲಿ ಪ್ರಸಕ್ತ ಬರ ನಿರ್ವಹಣೆಯ ಕೈಪಿಡಿಯಲ್ಲಿರುವ ಮಾನದಂಡಗಳನ್ನು ಅನ್ವಯಿಸುವಾಗ, ಅದನ್ನು ಭೌಗೋಳಿಕವಾಗಿ, ಕೃಷಿ ಚಟುವಟಿಕೆ ಹಾಗೂ ಬೆಳೆಯ ವೈವಿಧ್ಯತೆಯ ಹಿನ್ನೆಲೆಯಲ್ಲಿ ಹೆಚ್ಚು ಹೊಂದಿಕೆಯಾಗುವಂತೆ, ಹೆಚ್ಚು ರೈತಸ್ನೇಹಿಯಾಗುವಂತೆ ಅಳವಡಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಸಕ್ತ ಇರುವ ಮಾನದಂಡಗಳಿಗೆ ಸೂಕ್ತ ಮಾರ್ಪಾಡುಗಳನ್ನು ಮಾಡಬೇಕಿದ್ದು, ಅವುಗಳನ್ನು ಮರುಪರಿಶೀಲನೆಗೆ ಒಡ್ಡಲು ಇದು ಸೂಕ್ತ ಸಮಯವಾಗಿದೆ ಎಂದು ತಿಳಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share240Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಲುಬಾಯಿ ರೋಗ ನಿಯಂತ್ರಣಕ್ಕೆ ಕಡ್ಡಾಯವಾಗಿ ಲಸಿಕೆ ಹಾಕಿಸಿ: ಡಿಸಿ ಸೆಲ್ವಮಣಿ

Next Post

Amit Shah hails PM Modi’s historic step to introduce Women’s Reservation Bill

kalpa News

kalpa News

Next Post
Amit Shah hails PM Modi’s historic step to introduce Women’s Reservation Bill

Amit Shah hails PM Modi’s historic step to introduce Women’s Reservation Bill

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL