ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಈಗಾಗಲೇ ರಾಜ್ಯದಲ್ಲಿ ಕಾವೇರಿ ನದಿ Kaveri Water ನೀರು ಹಂಚಿಕೆ ವಿಚಾರದಲ್ಲಿ ಆಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟಿನಲ್ಲೂ Supreme Court ಸಹ ಕರ್ನಾಟಕ್ಕೆ ಭಾರೀ ಹಿನ್ನಡೆಯಾಗಿದೆ.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು Tamilnadu ಪರ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸಬೇಕು ಎಂದು ಸೂಚನೆ ನೀಡಿದೆ.
ಈ ಕುರಿತಂತೆ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಿದ್ದು, ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಸೂಚಿಸಿದೆ.
Also read: ಶಿವಮೊಗ್ಗ: ಮಧುಕೃಪಾ ಗಣಪತಿ ವೈಭವದ ರಾಜಬೀದಿ ಉತ್ಸವ
ತಮಿಳುನಾಡು ಪರ ವಕೀಲರಾದ ಮುಕುಲ್ ರೋಹಟಗಿ, ಸದ್ಯ ನೀರಿನ ಸಂಕಷ್ಟ ಇದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ನಡುವೆ ಕರ್ನಾಟಕ ಸಂಕಷ್ಟು ಸೂತ್ರವನ್ನು ಪಾಲಿಸುತ್ತಿಲ್ಲ. ಹೀಗಾಗಿ, ನಮ್ಮ ರಾಜ್ಯಕ್ಕೆ ಕಡಿಮೆ ನೀರು ದೊರೆಯುತ್ತಿದೆ ಎಂದರು.
ಕರ್ನಾಟಕದ ಪರವಾಗಿ ವಾದ ಮಂಡಿಸಿದ ಶ್ಯಾಮ್ ದಿವಾನ್, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post