No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹಿಂದುಳಿದ ಜಾತಿ ಮಹಿಳೆಯರಿಗೆ ಉಪಮೀಸಲಾತಿ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
September 22, 2023
in ಬೆಂಗಳೂರು ನಗರ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಾಗಲೇ ರಾಜಕೀಯ ಮೀಸಲಾತಿ ಇರುವುದರಿಂದ ಆ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ನೀಡುವುದು ಸಮಸ್ಯೆಯಾಗಲಾರದು.
ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾಮೀಸಲಾತಿಯ ಮಸೂದೆಯನ್ನು ವಿವರವಾಗಿ ಪರಿಶೀಲಿಸಿದರೆ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡಿಸುವುದಕ್ಕಿಂತಲೂ ಹೆಚ್ಚಾಗಿ ರಾಜಕೀಯ ಲಾಭ ಪಡೆಯುವ ಸ್ವಾರ್ಥವೇ ಕಾಣುತ್ತಿದೆ. ಈಗಿನ ಮಸೂದೆಯನ್ನು ಇದೇ ರೂಪದಲ್ಲಿ ಜಾರಿಗೆ ತರಲು ಹೊರಟರೆ ಮಹಿಳೆಯರು ರಾಜಕೀಯ ಮೀಸಲಾತಿ ಪಡೆಯಲು ಇನ್ನೆರಡು ದಶಕಗಳ ಕಾಲ ಕಾಯಬೇಕಾಗಬಹುದು.

ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೊಂದಿದ್ದರೆ 2010ರಲ್ಲಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. 2010ರಲ್ಲಿ ಮಸೂದೆಗೆ ರಾಜ್ಯಸಭೆ ನೀಡಿರುವ ಅಂಗೀಕಾರ ಇನ್ನೂ ಚಾಲ್ತಿಯಲ್ಲಿರುವ ಕಾರಣ ಲೋಕಸಭೆಯಲ್ಲಿ ಅಂಗೀಕಾರ ಪಡೆದ ಕೂಡಲೇ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳುವ ಪ್ರಕ್ರಿಯೆ ಪ್ರಾರಂಭವಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಉದ್ದೇಶಪೂರ್ವಕವಾಗಿ ಮಸೂದೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿರುವುದರಿಂದ ಅದನ್ನು ಮತ್ತೆ ರಾಜ್ಯಸಭೆಯಲ್ಲಿ ಮಂಡಿಸಬೇಕಾಗಿದೆ.
ಮುಂದಿನ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆದ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆಯಲ್ಲಿಯೇ ಹೇಳಿರುವುದರಿಂದ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ 20 ವರ್ಷ ಬೇಕಾಗಬಹುದು. ಮುಂದಿನ ಜನಗಣತಿ 2026ರಲ್ಲಿ ಮತ್ತು ಕ್ಷೇತ್ರಮರುವಿಂಗಡಣೆ 2031ರಲ್ಲಿ ನಡೆಯುವ ಸಾಧ್ಯತೆ ಇದೆ.

ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆ ಮೂಲತ: ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ಈ ಕನಸನ್ನು ನನಸು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ನಮ್ಮ ಹೆಮ್ಮೆಯ ನಾಯಕರಾದ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳಬೇಕಾಗಿದೆ.

http://kalpa.news/wp-content/uploads/2023/05/Jain-Public-School-Advt-5.mp4

ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆಯನ್ನು ಮೊದಲ ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1989ರಲ್ಲಿಯೇ ಲೋಕಸಭೆಯಲ್ಲಿ ಮಂಡಿಸಿದ್ದರು. ಆದರೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲು ಸಾಧ್ಯವಾಗಿರಲಿಲ್ಲ.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸ್ಥಾನಗಳಲ್ಲಿ ಶೇಕಡಾ 33ರಷ್ಟನ್ನು ಮಹಿಳೆಯರಿಗೆ ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ 1993ರಲ್ಲಿ ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಂಡಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದು ಕೂಡಾ ಇತಿಹಾಸದ ಪುಟದಲ್ಲಿ ದಾಖಲಾಗಿದೆ.
2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಮಹಿಳಾ ಮೀಸಲಾತಿಯನ್ನೂ ಸೇರಿಸಿಕೊಂಡಿತ್ತು. 2010ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಂಗೀಕಾರ ಪಡೆಯಲು ಯಶಸ್ವಿಯಾಗಿತ್ತು.

Also read: ಅಕ್ರಮವಾಗಿ ಗೆದ್ದಿರುವ ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಸಂಸತ್ ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾಯ್ದೆಯನ್ನು ಜಾರಿಗೆ ತರುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಬಂದಿದೆ. ರಾಜಕೀಯ ಭಿನ್ನಮತಗಳನ್ನು ಮೀರಿ ಮಹಿಳಾ ಮೀಸಲಾತಿ ಮಸೂದೆ ಸಂಸತ್ ನಲ್ಲಿ ಅಂಗೀಕಾರವಾಗುವಂತೆ ಪ್ರಯತ್ನ ಮಾಡಿ ಎಂದು 2018ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಲೋಕಸಭೆಯಲ್ಲಿಯೇ ಮನವಿ ಮಾಡಿದ್ದರು.
2019ರ ಲೋಕಸಭಾ ಚುನಾವಣೆಯ ಕಾಲದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಸೇರಿಸಲಾಗಿದ್ದು ಅದಕ್ಕೆ ನಾವು ಸದಾ ಬದ್ದರಾಗಿದ್ದೇವೆ.

ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ್‌ ಅವರ ಅಭಿಪ್ರಾಯವೇನಿತ್ತು ಎನ್ನುವುದು ಇಡೀ ದೇಶಕ್ಕೇ ಗೊತ್ತಿರುವ ವಿಚಾರವಾಗಿದೆ. ಸಂಸದರಾಗಿದ್ದ ವೇಳೆ ಆದಿತ್ಯನಾತ್‌ ಅವರು ಈ ವಿಚಾರವಾಗಿ ಅಭಿಪ್ರಾಯಭೇದ ವ್ಯಕ್ತಪಡಿಸಿದ್ದರು. ಮೊದಲು ಈ ವಿಷಯದಲ್ಲಿ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯಾಗಿ ಸಹಮತ ಮೂಡಬೇಕು ಎಂದಿದ್ದರು. “ಕಾಂಗ್ರೆಸ್‌ ನ ಪಾಪವನ್ನು ನಾವೇಕೆ ತಲೆಯ ಮೇಲೆ ಹೊರಬೇಕು” ಎಂದು ಹೀಗಳೆದಿದ್ದರು. ಈಗಲೂ ಅವರ ಅಭಿಪ್ರಾಯ ಇದೇ ಇದೆಯೋ ಅಥವಾ ಬದಲಾಗಿದೆಯೋ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಕ್ರಮವಾಗಿ ಗೆದ್ದಿರುವ ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

Next Post

ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ   

kalpa News

kalpa News

Next Post
ಮಾರ್ಚ್ 14ರಿಂದ ಶಿವಮೊಗ್ಗ ಎಫ್’ಎಂನಲ್ಲಿ ಎಸ್ಎಸ್ಎಲ್’ಸಿ ಪಾಠ: ಎಂದು ಯಾವ ಪಾಠ? ಇಲ್ಲಿದೆ ಮಾಹಿತಿ

ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ   

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL