ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಮಂಡ್ಯ-ಮದ್ದೂರಿನಲ್ಲಿ Mandya Bandh ರೈತ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದಿನೇ-ದಿನೇ ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ದು, ಆಟೋ ಚಾಲಕರು, ಖಾಸಗಿ ವಾಹನ ಮಾಲೀಕರು, ಸ್ಟುಡಿಯೋ ಮಾಲೀಕರು, ಜಿಲ್ಲೆಯ ಎಲ್ಲಾ ವರ್ಗದ ಜನತೆ, ವಿದ್ಯಾರ್ಥಿ ಸಮೂಹ, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬಂದ್‌ನಲ್ಲಿ ಭಾಗವಹಿಸಿ ಬೆಂಬಲ ಸೂಚಿಸುತ್ತಿವೆ.
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಶನಿವಾರ ಬಂದ್‌ಗೆ ಕರೆ ನೀಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಇನ್ನು ಮದ್ದೂರಿನಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದು, ಟಿಬಿ ಸರ್ಕಲ್ ನಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















