No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶದ ಸಮಗ್ರ ಅಭಿವೃದ್ಧಿಗೆ ಯುವಕರ ಕೊಡುಗೆ ಅಗತ್ಯ: ಡಾ.ರಮಾನಂದ ಗಾರ್ಗೆ

ಪಿಇಎಸ್‌ಐಟಿಎಮ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಶಿಷ್ಯೋಪನಯನ ಪ್ರಾರಂಭೋತ್ಸವ ಕಾರ್ಯಕ್ರಮ

kalpa News by kalpa News
September 23, 2023
in ಶಿವಮೊಗ್ಗ
0
ದೇಶದ ಸಮಗ್ರ ಅಭಿವೃದ್ಧಿಗೆ ಯುವಕರ ಕೊಡುಗೆ ಅಗತ್ಯ: ಡಾ.ರಮಾನಂದ ಗಾರ್ಗೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಅಂತರರಾಷ್ಟ್ರೀಯ ಮಟ್ಟದಲ್ಲಿ ಒಂದು ದೇಶವು ಸರ್ವತೋಮುಖ ಸಾರ್ವಕಾಲಿಕ ಅಭಿವೃದ್ಧಿಯನ್ನು ಹೊಂದಲು ಯುವ ಸಮೂಹವು ತನ್ನದೇ ಆದ ಅಸಾಧಾರಣ ಕೊಡುಗೆಗಳನ್ನು ನೀಡುವುದು ಅತ್ಯವಶ್ಯಕವಾಗಿದೆ ಎಂದು ಶಿವಮೊಗ್ಗದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ರಮಾನಂದ ಗಾರ್ಗೆ ನುಡಿದರು.

ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ PESITM ಪ್ರಸಕ್ತ ಶೈಕ್ಷಣಿಕ ಸಾಲಿನ 17ನೇ ಬ್ಯಾಚ್ ನ ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್ ನ ಶಿಷ್ಯೋಪನಯನ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂಜಿನಿಯರಿಂಗ್ ತಾಂತ್ರಿಕ ಶಿಕ್ಷಣವು ವಿದ್ಯಾರ್ಥಿ ಸಮೂಹದಲ್ಲಿ ಸೃಷ್ಟಿಸುವ ಪ್ರಾಯೋಗಿಕ ಚಾಣಾಕ್ಷತನ, ಚಾಕಚಕ್ಯತೆ ಮತ್ತು ನವ ನವೀನ ರೀತಿಯಲ್ಲಿ ಉದ್ಭವಿಸುವ ಸಮಸ್ಯೆಗಳಿಗೆ ಪರಿಹಾರಗಳನ್ನು ಕಾರ್ಯಗತರೂಪಕ್ಕೆ ತರುವ ಮನಸ್ಥಿತಿಯನ್ನು ತ್ವರಿತ ಗತಿಯಲ್ಲಿ ಸೃಷ್ಟಿಸುವ ಕಾರ್ಯತತ್ಪರತೆಯ ಬಗ್ಗೆ ಪ್ರಯತ್ನಿಸಬೇಕೆಂದು ಎಂದರು.

ಉನ್ನತ ಶಿಕ್ಷಣವನ್ನು ಪಡೆಯುವ ನಿಟ್ಟಿನಲ್ಲಿ ಇಂಜಿನಿಯರಿಂಗ್ ವಿಭಾಗವು ತನ್ನದೇ ಆದ ಛಾಪನ್ನು ಸಾಮಾಜಿಕವಾಗಿ ಸೃಷ್ಟಿಸಿದ್ದು ತಾಂತ್ರಿಕ ಕ್ಷೇತ್ರ ಮತ್ತು ಔದ್ಯೋಗಿಕ ಕ್ಷೇತ್ರವು ತಂದೊಟ್ಟುವ ಹೊಚ್ಚ ಹೊಸ ರೀತಿಯ ಸವಾಲುಗಳನ್ನು ತಾರ್ಕಿಕವಾಗಿ ಪ್ರಾಯೋಗಿಕ ಮಟ್ಟದಲ್ಲಿ ಪರಿಹರಿಸುವ ಸಂಶೋಧನೆಗಳನ್ನು ಮಾಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ದೇಶದ ಯುವ ಸಮೂಹವು ಇಂಜಿನಿಯರಿಂಗ್ ಜೀವನದಲ್ಲಿ ನಾವಿನ್ಯತೆಯಿಂದ ಕೂಡಿದ ಪ್ರಾಯೋಗಿಕ ಚಾಕಚಕ್ಯತೆಯನ್ನು ಅಳವಡಿಸಿಕೊಂಡು ದೇಶದ ಹಾಗೂ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಪರಿಶ್ರಮಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಪ್ರಮುಖವಾಗಿ ಇಂಜಿನಿಯರಿಂಗ್ ತಾಂತ್ರಿಕ ಶಿಕ್ಷಣದಲ್ಲಿ ದೇಶದ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಒಟ್ಟಾರೆಯಾಗಿ ಬಂದು ಒಂದು ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಪಡೆಯುವ ಅವಕಾಶಗಳು ವಿಪುಲವಾಗಿದ್ದು, ತನ್ಮೂಲಕ ವಿದ್ಯಾರ್ಥಿ ಸಮೂಹದಲ್ಲಿ ಸಂಶೋಧನಾತ್ಮಕ ಚಾಕಚಕ್ಯತೆ, ಸಮಸ್ಯೆಗಳನ್ನು ತ್ವರಿತ ಗತಿಯಲ್ಲಿ ಪರಿಹರಿಸುವ ಅಸಾಮಾನ್ಯ ಸಾಮರ್ಥ್ಯವನ್ನು ಸೃಷ್ಟಿಸುವಲ್ಲಿ ಒಂದು ಭದ್ರ ಬುನಾದಿಯಾಗಿ ಇಂಜಿನಿಯರಿಂಗ್ ಶಿಕ್ಷಣವು ಪ್ರಸ್ತುತತೆಯನ್ನು ಪಡೆದಿದೆ ಎಂಬುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

Also read: ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಐತಿಹಾಸಿಕ ತೀರ್ಮಾನ: ಸಂಸದ ರಾಘವೇಂದ್ರ

ಕಾರ್ಯಕ್ರಮದ ಗೌರವಾನ್ವಿತ ಅತಿಥಿಯಾಗಿ ಆಹ್ವಾನಿತರಾಗಿದ್ದ ಶಿವಮೊಗ್ಗದ ಪಿಇಎಸ್ ಟ್ರಸ್ಟ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಅನ್ವೇಷಣ ಸಂಸ್ಥೆಯ ನಿರ್ದೇಶಕ ಸುಭಾಷ್ ಮಾತನಾಡಿ, ದೇಶವು ಸರ್ವಾಂಗೀಣ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಯುವ ಸಮೂಹವು ತನ್ನದೇ ಆದ ವಿಶಿಷ್ಟ ರೀತಿಯಲ್ಲಿ ಅದ್ವಿತೀಯ ಕೊಡುಗೆಗಳನ್ನು ನೀಡುವುದು ಎಲ್ಲಾ ಕಾಲಕ್ಕೂ ಪ್ರಸ್ತುತತೆಯನ್ನು ಪಡೆದಿದೆ ಎಂದರು.
ಈ ನಿಟ್ಟಿನಲ್ಲಿ ದೇಶದ ಯುವ ಜನಾಂಗವು ಔದ್ಯೋಗಿಕ, ಕೈಗಾರಿಕಾ, ಶೈಕ್ಷಣಿಕ ಮತ್ತು ತಾಂತ್ರಿಕ ಕ್ಷೇತ್ರವು ತಂದೊಡ್ಡುವ ಸವಾಲುಗಳನ್ನು ಪರಿಹರಿಸುವ ಚಾಕಚಕ್ಯತೆ ಮತ್ತು ಪರಿಹಾರಾತ್ಮಕ ಮನೋಸ್ಥಿತಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ ತಮ್ಮದೇ ಆದ ಕೊಡುಗೆಗಳನ್ನು ನೀಡುವಲ್ಲಿ ಶ್ರಮಿಸಬೇಕೆಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಕಾಲೇಜು ಒದಗಿಸಿರುವ ಎಲ್ಲಾ ರೀತಿಯ ಸವಲತ್ತುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಉತ್ತುಂಗದ ಮಟ್ಟವನ್ನು ತಲುಪುವಂತೆ ಪ್ರೇರೇಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಕಾರಿಪುರ ಶಾಸಕ ಮತ್ತು ಶಿವಮೊಗ್ಗದ ಪಿಇಎಸ್ ಟ್ರಸ್ಟ್ ನ ಟ್ರಸ್ಟಿ ವಿಜಯೇಂದ್ರ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಶಿಕ್ಷಣವೆಂಬುದು ಮಹತ್ತರವಾದ ಸ್ಥಾನವನ್ನು ಪಡೆದಿದ್ದು ತನ್ಮೂಲಕ ಅದ್ವಿತೀಯ ಸಾಧನೆಗಳನ್ನು ಮಾಡುವಲ್ಲಿ ತಾಂತ್ರಿಕ ಶಿಕ್ಷಣವು ಪ್ರೇರಣಾ ಶಕ್ತಿಯಾಗಿ ಪ್ರಸ್ತುತತೆಯನ್ನು ಪಡೆದಿದೆ ಎಂಬುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ಎಂದು  ತಿಳಿಸಿದರು.

ಇಂಜಿನಿಯರಿಂಗ್ ಶೈಕ್ಷಣಿಕ ಜೀವನದಲ್ಲಿ ಅದ್ವಿತೀಯ ಮಟ್ಟದಲ್ಲಿ ಫಲಿತಾಂಶವನ್ನು ಪಡೆಯುವ ಮೂಲಕ ತಾವು ಕಲಿತ ಎಲ್ಲಾ ವಿಷಯಗಳ ಬಗ್ಗೆ ವೈಚಾರಿಕ ಮನೋ ದೃಷ್ಟಿಯನ್ನು ಬೆಳೆಸಿಕೊಳ್ಳುವ ಮೂಲಕ ತಮ್ಮ ಪೋಷಕರು, ಶಿಕ್ಷಣವನ್ನು ನೀಡಿದ ಪ್ರಾಧ್ಯಾಪಕರು ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಮ್ಮ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಎಲ್ಲರಿಗೂ ಋಣಿಯಾಗಿರುವಂತೆ ತಿಳಿಸಿದರು.
ಪ್ರಮುಖವಾಗಿ ಇಂಜಿನಿಯರಿಂಗ್ ತಾಂತ್ರಿಕ ಶಿಕ್ಷಣವು ಪ್ರಸ್ತುತ ಕಾಲಘಟ್ಟದಲ್ಲಿ ಸಂಪರ್ಕ ಸೇತುವೆಯ ನಿರ್ಮಾಣದಿಂದ ಪ್ರಾರಂಭಗೊಂಡು ಅಂತರಾಷ್ಟ್ರೀಯ ಸ್ಪೇಸ್ ಸ್ಟೇಷನ್ ವರೆಗಿನ ನಿರ್ಮಾಣ ಕಾರ್ಯದಲ್ಲಿ ಅಸಂಖ್ಯಾತ, ಅಸಾಧಾರಣ ಹಾಗೂ ಅದ್ವಿತೀಯ ಕೊಡುಗೆಗಳನ್ನು ಸಾಮಾಜಿಕ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನೀಡುತ್ತಾ ಬಂದಿದ್ದು, ಒಂದು ದೇಶವು ಸಾರ್ವಕಾಲಿಕ ಅಖಂಡತೆಯನ್ನು ಮತ್ತು ಯಶಸ್ಸಿನ ಉನ್ನತ ಶ್ರೇಣಿಯನ್ನು ಪಡೆಯುವಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎನ್ನುವ ವಿಚಾರವನ್ನು ಹಲವಾರು ಪ್ರಾಯೋಗಿಕ ನಿದರ್ಶನಗಳ ಮೂಲಕ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸ್ಪೂರ್ತಿಯ ಚಿಲುಮೆಯನ್ನು ಉದ್ಭವಿಸುವಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಪಿಇಎಸ್ ಟ್ರಸ್ಟ್ ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ ಆರ್ ಸ್ವಾಗತಿಸಿದರು. ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ್ ಹೆಚ್ ಆರ್ ವಂದಿಸಿದರು. ಪಿಇಎಸ್ಐಟಿಎಂ ನ ವಿದ್ಯಾರ್ಥಿನಿ ಸುನಿಧಿ ಪ್ರಾರ್ಥಿಸಿದರು. ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಮತ್ತು ಮಷೀನ್ ಲರ್ನಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಲೈಕ್ವಿನ್ ಥಾಮಸ್ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ – ಬೋಧಕೇತರ ಸಿಬ್ಬಂದಿ ಹಾಗೂ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಷನ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮೆಕಾನಿಕಲ್, ಸಿವಿಲ್, ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಮತ್ತು ಮಷೀನ್ ಲರ್ನಿಂಗ್, ಕಂಪ್ಯೂಟರ್ ಸೈನ್ಸ್ – ಡಿಸೈನ್, ಕಂಪ್ಯೂಟರ್ ಸೈನ್ಸ್ ಇನ್ ಡೇಟಾ ಸೈನ್ಸ್ ಮತ್ತು ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗಗಳ 850ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪೋಷಕವೃಂದವು ಉಪಸ್ಥಿತರಿದ್ದರು.
http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಐತಿಹಾಸಿಕ ತೀರ್ಮಾನ: ಸಂಸದ ರಾಘವೇಂದ್ರ

Next Post

ಗಣೇಶೋತ್ಸವ ಪ್ರಯುಕ್ತ: ಸೆ.23-30 ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

kalpa News

kalpa News

Next Post
ಗಣೇಶೋತ್ಸವ ಪ್ರಯುಕ್ತ: ಸೆ.23-30 ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಗಣೇಶೋತ್ಸವ ಪ್ರಯುಕ್ತ: ಸೆ.23-30 ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL