No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Saturday, April 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಜಿಲ್ಲೆಯ ಜನರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 26, 2023
in ಉಡುಪಿ
0
ಜಿಲ್ಲೆಯ ಜನರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಉಡುಪಿ  |

ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಸ್ಪಂದಿಸಿ, ಅವರುಗಳ ಆಶೋತ್ತರಗಳನ್ನು ಈಡೇರಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಇದಕ್ಕನುಗುಣವಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ Lakshmi Hebalkar ತಿಳಿಸಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ Atal Bihari Vajapeyi ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜನರು ನಮ್ಮನ್ನು ನಂಬಿ ಸರ್ಕಾರ ನಡೆಸಲು ಅವಕಾಶ ನೀಡಿದ್ದಾರೆ. ಚುನಾವಣಾ ಪೂರ್ವದಲ್ಲಿ ಅವರಿಗೆ ನೀಡಿರುವ ಭರವಸೆಗಳನ್ನು ಹಂತಹಂತವಾಗಿ ನೂರು ದಿನಗಳಲ್ಲಿ ಈಡೇರಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಅದರ ಜೊತೆಯಲ್ಲಿ ಜನರ ಕುಂದು ಕೊರತೆಗಳನ್ನು ಆಲಿಸಿ, ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಇಡೀ ರಾಜ್ಯದಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ. ಇದರ ಭಾಗವಾಗಿ ಇಂದು ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸ್ಪಂದಿಸಲು ಮುಂದಾಗಲಾಗುವುದು ಎಂದರು.

ಸರ್ಕಾರ ಹಾಗೂ ಅಧಿಕಾರಿಗಳಿರುವುದು ಜನರ ಸಮಸ್ಯೆಗಳನ್ನು ಪರಿಹರಿಸಲು. ಇವುಗಳನ್ನು ಅರಿತು ನಾವುಗಳು ಕೆಲಸ ಮಾಡಬೇಕಿದೆ. ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿರುವವರೆಗೂ ಇಲ್ಲಿನ ಜನರ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ತಿಳಿಸಿದರು.
ಮುಖ್ಯಮಂತ್ರಿಗಳು ಜನ ಸಾಮಾನ್ಯರ ಸಮಸ್ಯೆಗಳನ್ನು ಸ್ಥಳೀಯವಾಗಿ ಆಲಿಸಿ, ಅವುಗಳನ್ನು ಸ್ಥಳೀಯ ಮಟ್ಟದಲ್ಲಿ ಪರಿಹರಿಸಬೇಕೆಂಬ ಉದ್ದೇಶದಿಂದ ಮಹತ್ವಾಕಾಂಕ್ಷಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುವುದರೊಂದಿಗೆ ಇದಕ್ಕೆ ಸ್ಪಂದಿಸಬೇಕು ಎಂದರು.

ಸಾಮಾನ್ಯವಾಗಿ ಪೊಲೀಸ್, ಅರಣ್ಯ, ಆರೋಗ್ಯ, ಕಂದಾಯ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ದಿನನಿತ್ಯ ಜನರು ಕೆಲಸಗಳನ್ನು ಅರಸಿ, ಬರುತ್ತಾರೆ. ಈ ರೀತಿ ತಮ್ಮ ಕೆಲಸಗಳಿಗಾಗಿ ಕಚೇರಿಗೆ ಬಂದಾಗ ಅವರನ್ನು ಅಲೆಯುವಂತೆ ಮಾಡುವುದು ಸರಿಯಲ್ಲ. ಅಧಿಕಾರಿಗಳು ತಮ್ಮ ಅಹಂ ಅನ್ನು ಬಿಟ್ಟು ಜನಸಾಮಾನ್ಯರ ಕಷ್ಟಗಳಿಗೆ ಹೃದಯವಂತರಾಗಿ ಸ್ಪಂದಿಸಬೇಕು ಎಂದರು.
ಇಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸಗಳನ್ನು ಅರಸಿ, 145 ಅರ್ಜಿಗಳು ಬಂದಿದ್ದು, ಇವುಗಳನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಬಗೆಹರಿಸಲಾಗುವುದು. ಕೆಲವು ಅರ್ಜಿಗಳು ಸ್ಥಳದಲ್ಲಿಯೇ ಬಗೆಹರಿಸಲು ಸಾಧ್ಯವಾಗದಿದ್ದಲ್ಲಿ ಕಾಲಮಿತಿಯೊಳಗೆ ಸ್ಪಂದಿಸಲು ಸೂಚಿಸಲಾಗುವುದು ಎಂದ ಅವರು, ಮುಂದಿನ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಈ ದಿನ ಬಂದಿರುವ ಎಲ್ಲಾ ಅರ್ಜಿಗಳ ವಿಲೇವಾರಿ ಆಗಿರುವ ಬಗ್ಗೆ ಕೂಲಂಕುಷವಾಗಿ ಮೊದಲ ಒಂದು ಗಂಟೆಯಲ್ಲಿ ಪರಿಶೀಲಿಸಿ, ಅರ್ಜಿದಾರರಿಂದ ತಮ್ಮ ಸಮಸ್ಯೆಗಳಿಗೆ ಸ್ಪಂದಿಸಿರುವ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.

Also read: ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಜನಸ್ನೇಹಿಯಾಗಿ ವ್ಯವಹರಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಸಾರ್ವಜನಿಕರಿಂದ ವಿವಿಧ ಅಹವಾಲು ಅರ್ಜಿ ಸ್ವೀಕರಿಸಲು ಕೌಂಟರ್‌ಗಳನ್ನು ತೆರೆಯಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿ ಮನ್ನಾ ಜಾಗದ ಹಕ್ಕುಪತ್ರಗಳನ್ನು ವಿವಿಧ ಫಲಾನುಭವಿಗಳಿಗೆ ವಿತರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ವಸ್ತು ಪ್ರದರ್ಶನದ ಮಳಿಗೆಯನ್ನು ತೆರೆಯಲಾಗಿತ್ತು. ಜನತಾ ದರ್ಶನಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಅಹವಾಲು ಹೊತ್ತು ತಂದ ಸಾವಿರಾರು ಸಾರ್ವಜನಿಕರು, ಸಂಘ-ಸAಸ್ಥೆಗಳು, ಸ್ವಯಂ-ಸೇವಕರು, ಮಹಿಳಾ ಮಂಡಳಗಳು ತಮ್ಮ ಸಮಸ್ಯೆಗಳ ಬಗೆಹರಿಸಲು ಅಹವಾಲುಗಳನ್ನು ಸಲ್ಲಿಸಿ, ಕೆಲವೊಂದು ತಕ್ಷಣದಲ್ಲಿಯೇ ಸ್ಥಳೀಯವಾಗಿ ಬಗೆಹರಿಸಲಾಯಿತು. ಕೆಲವುಗಳನ್ನು ಕಾಲಮಿತಿಯೊಳಗೆ ಬಗೆಹರಿಸಲು ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತಿ ಸಿಇಒ ಡಾ.ಪ್ರಸನ್ನ ಎಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಕುಂದಾಪುರ ಉಪವಿಭಾಗಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaKannadaNewsKannadaNewsLiveKannadaNewsOnlineKannadaWebsiteKarawali NewsMangaloreNewsinKannadaNewsKannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Share207Tweet123Send
Previous Post

ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಜನಸ್ನೇಹಿಯಾಗಿ ವ್ಯವಹರಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Next Post

ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಆನ್‌ಲೈನ್ ಆಪ್‌ಗೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಆನ್‌ಲೈನ್ ಆಪ್‌ಗೆ ಚಾಲನೆ

ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಆನ್‌ಲೈನ್ ಆಪ್‌ಗೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚಾಮರಾಜನಗರ | ಸೀತಾಕಲ್ಯಾಣ ಮಹೋತ್ಸವ ಅದ್ದೂರಿ ಸಂಪನ್ನ

ಚಾಮರಾಜನಗರ | ಸೀತಾಕಲ್ಯಾಣ ಮಹೋತ್ಸವ ಅದ್ದೂರಿ ಸಂಪನ್ನ

April 4, 2026
ಒಂದೇ ವರ್ಷದಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಗಳಿಸಿದ ಆದಾಯವೆಷ್ಟು ಗೊತ್ತಾ?

ಒಂದೇ ವರ್ಷದಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಗಳಿಸಿದ ಆದಾಯವೆಷ್ಟು ಗೊತ್ತಾ?

April 4, 2026
SWR to run special trains for Good Friday, Easter rush

ಗಮನಿಸಿ! ಚಿತ್ರದುರ್ಗ-ಚಿಕ್ಕಜಾಜೂರು ರೈಲುಗಳು ಭಾಗಶಃ ರದ್ದು | ಇಲ್ಲಿದೆ ಡೀಟೇಲ್ಸ್

April 4, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಈ 8 ದಿನ ತಾಳಗುಪ್ಪ-ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ | ಹುಬ್ಬಳ್ಳಿ-ಅರಸೀಕೆರೆ ರೈಲು ರದ್ದು

April 4, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಎಪ್ರಿಲ್ 4ರ ಶನಿವಾರ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL