No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಫೋರ್ಟಿಸ್‌ ಆಸ್ಪತ್ರೆಯ ಸಾಧನೆ | ತಿರುಚಿದ್ದ ಹೃದಯ ಕವಾಟವನ್ನು ಟಿಎವಿಆರ್ ಮೂಲಕ ಬದಲಾವಣೆ

kalpa News by kalpa News
September 29, 2023
in ಬೆಂಗಳೂರು ನಗರ
0
ಫೋರ್ಟಿಸ್‌ ಆಸ್ಪತ್ರೆಯ ಸಾಧನೆ | ತಿರುಚಿದ್ದ ಹೃದಯ ಕವಾಟವನ್ನು ಟಿಎವಿಆರ್ ಮೂಲಕ ಬದಲಾವಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹೃದಯದಿಂದ ರಕ್ತಸಾಗಿಸುವ ಮಹಾಪಧನಿಯ ಕವಾಟವು ಸಂಪೂರ್ಣ ತಿರುಚಿಕೊಂಡು, ಹೃದಯ ವೈಫಲ್ಯದಿಂದ ಬಳಲುತ್ತಿದ್ದ 64 ವರ್ಷದ ಮಹಿಳೆಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ Fortis Hospital ಯಶಸ್ವಿಯಾಗಿ ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ರಿಪ್ಲೇಸ್‌ಮೆಂಟ್ ( TAVR) ವಿಧಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದು ಭಾರತದಲ್ಲೇ ಮೊದಲ ಬಾರಿಗೆ ಹೈಬ್ರಿಡ್‌ TAVR ವಿಧಾನದ ಮೂಲಕ ನಡೆಸಿದ ಶಸ್ತ್ರಚಿಕಿತ್ಸೆಯಾಗಿದೆ.

ಅತ್ಯಂತ ಸವಾಲಿನ ಹಾಗೂ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಲು ಹೃದ್ರೋಗ ತಜ್ಞರು, ಹೃದಯ ಶಸ್ತ್ರಚಿಕಿತ್ಸಕರು, ಸಾಮಾನ್ಯ ಶಸ್ತ್ರಚಿಕಿತ್ಸಕರು, ಆಂತರಿಕ ಔಷಧ ತಜ್ಞರು, ಗ್ಯಾಸ್ಟ್ರೋಎಂಟರಾಲಜಿಸ್ಟ್‌, ನೆಫ್ರಾಲಜಿಸ್ಟ್‌ ಮತ್ತು ಅರಿವಳಿಕೆಶಾಸ್ತ್ರಜ್ಞ ಸೇರಿದಂತೆ ಬಹುದೊಡ್ಡ ತಂಡವೇ ಶ್ರಮಿಸಿದೆ. ಈ ಕುರಿತು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡವು ಈ ವಿಶೇಷ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಫೋರ್ಟಿಸ್ ಆಸ್ಪತ್ರೆ ಹಿರಿಯ ಹೃದಯತಜ್ಞ ಡಾ ವಿವೇಕ್ ಜವಲಿ ಮಾತನಾಡಿ, ೬೪ ವರ್ಷದ ಹಂಸವೇಣಿ ಎಂಬ ಮಹಿಳೆ ಹತ್ತು ವರ್ಷದಿಂದ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಇದಲ್ಲದೆ, ಜನ್ಮಜಾತ ಹೃದಯ ಕವಾಟದ ಅಸ್ವಸ್ಥತೆಯಿಂದ ಬಳಲಿ, ಮಹಾಪಧಮನಿಯ ಕವಾಟ ಬದಲಾವಣೆ ಮತ್ತು ಸಿಎಬಿಜಿ (ಕೊರೊನರಿ ಆರ್ಟರಿ ಬೈಪಾಸ್ ಗ್ರಾಫ್ಟ್) ಶಸ್ತ್ರಚಿಕಿತ್ಸೆಗೆ ಒಳಗೊಂಡಿದ್ದರು. ಇತ್ತೀಚಿಗೆ ಆಕೆಯು ಎದೆಯ ಅಸ್ವಸ್ಥತೆ ಮತ್ತು ಉಸಿರಾಟದ ತೊಂದರೆಗೆ ಒಳಗಾದರು.

ಈ ವೇಳೆ ಆಕೆಯನ್ನು ಪರೀಕ್ಷೆಗೆ ಒಳಪಡಿಸಿದಾಗ ಏಕನಾಳದ ಪರಿಧಮನಿಯ ಕಾಯಿಲೆ ಇರುವುದು ಪತ್ತೆಯಾಯಿತು. ಆಕೆಯ ಹಿಂದಿನ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅಳವಡಿಸಲಾದ ಪ್ರಾಸ್ಥೆಟಿಕ್ ಕವಾಟವು ವಿಫಲವಾಗಿದ್ದರಿಂದ, ರಕ್ತನಾಳವು ತೀವ್ರವಾಗಿ ಹಾನಿಗೊಳಗಾಗಿತ್ತು. ಇದರಿಂದ ಆಕೆಯ ಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು, ಈಗಾಗಲೇ ಪ್ರಾಸ್ಥೆಟಿಕ್‌ ಕವಾಟವು ವಿಫಲವಾಗಿದ್ದರಿಂದ. ಮತ್ತೊಮ್ಮೆ ಕವಾಟ ಬದಲಾವಣೆ ಅಸಾಧ್ಯವಾದ್ದರಿಂದ ಸಾಕಷ್ಟು ಆಸ್ಪತ್ರೆಯು ಆಕೆಗೆ ಚಿಕಿತ್ಸೆ ನೀಡಲು ನಿರಾಕರಿಸಿದವು. ಮೂರು ತಿಂಗಳುಗಳ ಕಾಲ ಆಕೆಗೆ ಎಲ್ಲೂ ಚಿಕಿತ್ಸೆ ದೊರೆತಿರಲಿಲ್ಲ, ಇದರಿಂದ ಆಕೆಗೆ ಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು. ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು, ಸಾಕಷ್ಟು ಪರೀಕ್ಷೆಗಳ ಬಳಿಕ ಆಕೆಗೆ ಬಹು ಅಂಗಾಂಗಳ ವೈಫಲ್ಯವಾಗತೊಡಗಿತ್ತು. ಜೊತೆಗೆ, ಆಕೆಗೆ ಮಹಾಪಧಮನಿ (ಹೃದಯದಿಂದ ರಕ್ತವನ್ನು ಸಾಗಿಸುವ ದೇಹದಲ್ಲಿನ ಅತಿದೊಡ್ಡ ಅಪಧಮನಿ) ಅಸಹಜವಾಗಿ ದಪ್ಪವಾಗಿರುವುದು ಮತ್ತು ಕ್ಯಾಲ್ಸಿಫೈಡ್ (ಕ್ಯಾಲ್ಸಿಯಂ ನಿಕ್ಷೇಪಗಳಿಂದ ಗಟ್ಟಿಯಾಗುತ್ತದೆ) ಆಗಿರುವುದು ತೀಳಿದು ಬಂತು. ಇದರಿಂದ ಹೃದಯದ ಮಹಾಪಧನಿಯ ಕವಾಟವು ಸಂಪೂರ್ಣ ತಿರುಚಿಕೊಂಡಿತ್ತು. ಇದಲ್ಲದೆ, ಈ ಹಿಂದೆ ಬದಲಾಯಿಸಲಾದ ಪ್ರಾಸ್ಥೆಟಿಕ್ ಕವಾಟವನ್ನು ಅಸಹಜವಾಗಿ ಓರೆಯಾಗಿ ಬದಲಾಗಿತ್ತು, ಹೊಸ ಕವಾಟವನ್ನು ಪತ್ತೆಹಚ್ಚುವುದು ಹೆಚ್ಚು ಸವಾಲಿನ ಸಂಗತಿಯಾಗಿತ್ತು. ಅಲ್ಲದೆ, ಆಪರೇಟಿಂಗ್ ಟೇಬಲ್‌ನಲ್ಲಿ ಹೃದಯಾಘಾತಕ್ಕೆ ಕಾರಣವಾಗುವ ಪರಿಧಮನಿಯ ರಕ್ತನಾಳವನ್ನು ತಡೆಯುವ ಹೆಚ್ಚಿನ ಅಪಾಯವನ್ನು ಇದು ಒಡ್ಡಿತು. ಹೀಗಾಗಿ ಆಕೆಗೆ ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ರಿಪ್ಲೇಸ್‌ಮೆಂಟ್ ( TAVR) ಮೂಲಕ ಶಸ್ತ್ರಚಿಕಿತ್ಸೆ ನಡೆಸಲಾಗಿತು ಎಂದು ವಿವರಿಸಿದರು.
ಇಂಟರ್ವೆನ್ಷನಲ್ ಕಾರ್ಡಿಯಾಲಜಿಯ ಹಿರಿಯ ಸಲಹೆಗಾರ ಡಾ ಶ್ರೀನಿವಾಸ್ ಪ್ರಸಾದ್ ಮಾತನಾಡಿ, ರೋಗಿಯ ಸಂಕೀರ್ಣ ಪರಿಸ್ಥಿತಿಯನ್ನು ಪರಿಗಣಿಸಿ, ನಾವು ಆರಂಭದಲ್ಲಿ ಹೈಬ್ರಿಡ್ TAVR (ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ರಿಪ್ಲೇಸ್‌ಮೆಂಟ್) ಕಾರ್ಯವಿಧಾನದ ಮೂಲಕ ಚಿಕಿತ್ಸೆ ನೀಡಲು ಯೋಜಿಸಿದೆವು, ಇದರಲ್ಲಿ MIDCAB (ಕನಿಷ್ಠವಾಗಿ), TAVR ನಂತರ ಬಲ ಪರಿಧಮನಿಯನ್ನು (RCA) ಕಸಿಮಾಡಲು ತೀರ್ಮಾನಿಸಿದೆವು. ಕೂಡಲೇ ಆಕೆಯನ್ನು ತುರ್ತು TAVR ಗಾಗಿ ಕ್ಯಾಥ್ ಲ್ಯಾಬ್‌ಗೆ ಸ್ಥಳಾಂತರಿಸಲಾಯಿತು, ಸಾಕಷ್ಟು ಪ್ರಯತ್ನದ ನಂತರ ಆಕೆಗೆ TAVR ವಿಧಾನದ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡಿದೆವು, ಕೇವಲ 10 ದಿನಗಳ ಬಳಿಕೆ ಆಕೆಯನ್ನು ಆಸ್ಪತ್ಸೆಯಿಂದ ಬಿಡುಗಡೆ ಮಾಡಲಾಯಿತು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರದ ವೈಫಲ್ಯವನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

Next Post

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ಧೂರಿ ಚಾಲನೆ

kalpa News

kalpa News

Next Post
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ಧೂರಿ ಚಾಲನೆ

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ಧೂರಿ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL