No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

kalpa News by kalpa News
September 28, 2023
in ಶಿವಮೊಗ್ಗ
0
ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ಕೋಟೆ ಶ್ರೀ ಭೀಮೇಶ್ವರ ದೇವಾಲಯದಲ್ಲಿ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯ ShivamoggaHindumahasabhaGanapathi ವಿಸರ್ಜನಾಪೂರ್ವ ಮೆರವಣಿಗೆಗೆ ಇಂದು ವೈಭವದ ಚಾಲನೆ ದೊರೆಯಿತು.

ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಶಾಸಕ ಎಸ್.ಎನ್. ಚನ್ನಬಸಪ್ಪ, MLAChannabasappa ಆರ್‍ಎಸ್‍ಎಸ್ RSS ಪ್ರಮುಖ್ ಪಟ್ಟಾಭಿ, ಹಿಂದೂ ಮಹಾಸಭಾ ಸಂಘಟನೆಯ ಪ್ರಮುಖ ಆರ್. ಸುರೇಶ್‍ಕುಮಾರ್ ಸೇರಿದಂತೆ ಸಮಿತಿಯ ಮುಖಂಡರು ಮೆರವಣಿಗೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಇದ್ದರು.
ಇಂದು ಬೆಳಿಗ್ಗೆ 10:45ಕ್ಕೆ ಗಣಪತಿಗೆ ಮಹಾ ಮಂಗಳಾರತಿ ಪೂಜೆ ನೆರವೇರಿಸುವುದರೊಂದಿಗೆ ರಾಜಬೀದಿ ಉತ್ಸವ ಆರಂಭವಾಯಿತು. ಪೊಲೀಸರ ಬಿಗಿ ಬಂದೋ ಬಸ್ತ್, ಯುವಕರ ಸಂಭ್ರಮೋತ್ಸವ, ಕಲಾತಂಡಗಳ ಸಡಗರಗಳ ನಡುವೆ ಮೆರವಣಿಗೆ ಶಾಂತಿಯುತವಾಗಿ ಸಾಗುತ್ತಿದೆ.
ಮಾರಿಕಾಂಬಾ ದೇವಾಲಯದ ಬಳಿ ಹರಿಗೆಯ ಕೆ.ಕೆ. ಗೌಡ ಕುಟುಂಬದವರಿಂದ 150 ಕೆ.ಜಿ. ತೂಕದ ಸೇಬಿನ ಹಾರ ಅರ್ಪಿಸಲಾಯಿತು.  ಸುಮಾರು ಮೂರು ದಶಕಗಳಿಂದ ಹಿಂದೂಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ದಲ್ಲಿ ಸಾರಥಿ ಧನಂಜಯ ಅವರೇ ಈ ಬಾರಿಯೂ ಟ್ರ್ಯಾಕ್ಟರ್ ಚಾಲನೆ ಮಾಡಿದರು.
ಹಿಂದೂ ಮಹಾಸಭಾ ಸಂಘಟನೆಯ ವತಿಯಿಂದ ಗಣೇಶೋತ್ಸವದ ಅಂಗವಾಗಿ ಈ ಬಾರಿ ಅದ್ದೂರಿ ಮೆರವಣಿಗೆಗೆ ರಂಗು ತಂದಿದ್ದು, ಇಡೀ ನಗರವೇ ಕೇಸರಿಮಯವಾಗಿದೆ. ಇಂದಿನ ಅದ್ದೂರಿ ಮೆರವಣಿಗೆಯಲ್ಲಿ ಕಲಾತಂಡಗಳು, ಮಂಗಳ ವಾದ್ಯ, ಚಂಡೆಮೇಳ, ಡೊಳ್ಳು ಕುಣಿತ, ಕಹಳೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ರಂಗು ತಂದಿದ್ದು, ಕುಣಿತದೊಂದಿಗಿನ ಘೋಷಣೆಗಳು ಮುಗಿಲು ಮುಟ್ಟಿವೆ. ಗಣಪತಿಯ ರಾಜಬೀದಿ ಉತ್ಸವ ಸಾಗುವ ಎಸ್.ಪಿಎಂ. ರಸ್ತೆ, ರಾಮಣ್ಣ ಶ್ರೇಷ್ಟಿ ಪಾರ್ಕ್‍ಬಳಿ ಮನೆ ಮುಂದೆ ರಂಗೋಲಿ ಹಾಕಿ ಚಿತ್ತಾಕರ್ಷಕ ಬಣ್ಣ ಹಾಕಲಾಗಿತ್ತು. ಮಾರ್ಗದುದ್ದಕ್ಕೂ ಅಪಾರ ಸಂಖ್ಯೆಯ ಜನ ವೀಕ್ಷಿಸಲು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

Also read: ನಿಖರ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಆತ್ಮವಿಶ್ವಾಸ ತುಂಬಿ: ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ

ಬಜರಂಗದಳ, ವಿಶ್ವ ಹಿಂದು ಪರಿಷತ್, ಹಿಂದು ಮಹಾಸಭಾ ಸೇರಿದಂತೆ ಹಿಂದು ಪರ ಸಂಘಟನೆ ಗಳ ಕಾರ್ಯಕರ್ತರು, ಅಪಾರ ಸಂಖ್ಯೆಯಲ್ಲಿ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಭಗವಾಧ್ವಜ ಹಿಡಿದು ಯುವಕರು ಜೈ ಶ್ರೀರಾಮ್ ಘೋಷಣೆ ಕೂಗುತ್ತಿದ್ದರು.

ಇಡೀ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಎಸ್‍ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್ ಗಾಂಧಿಬಜಾರ್, ಶಿವಪ್ಪನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಬಿ.ಹೆಚ್.ರಸ್ತೆ, ಅಶೋಕವೃತ್ತ, ನೆಹರೂ ರಸ್ತೆ, ಗೋಪಿವೃತ್ತ, ದುರ್ಗಿಗುಡಿ, ಮಹಾವೀರ ವೃತ್ತ, ಬಾಲರಾಜ್ ಅರಸು ರಸ್ತೆ ಸೇರಿದಂತೆ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಕೇಸರಿ ಬಾವುಟ, ಬ್ಯಾನರ್, ಬಂಟಿಂಗ್ಸ್ ರಾರಾಜಿಸುತ್ತಿವೆ.

ಪ್ರಮುಖ ವೃತ್ತಗಳನ್ನು ಕೇಸರಿ ಧ್ವಜಗಳಿಂದ ಅಲಂಕರಿಸಲಾಗಿದೆ. ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ತಳಿರು ತೋರಣಗಳು ಕೇಸರಿ ಬಾವುಟಗಳನ್ನು ಕಟ್ಟಲಾಗಿದೆ.

ಗಾಂಧಿಬಜಾರ್‌ನನ ಪ್ರವೇಶ ದ್ವಾರದಲ್ಲಿ ಉಗ್ರ ನರಸಿಂಹ, ಶಿವಪ್ಪನಾಯಕ ವೃತ್ತದಲ್ಲಿ ಶಿವಾಜಿ ಮಹಾರಾಜರ, ಅಮೀರ್ ಅಹ್ಮದ್ ವೃತ್ತದಲ್ಲಿ ಚಂದ್ರಯಾನ-3ರ  ಪ್ರತಿಕೃತಿಯನ್ನು ಸ್ಥಾಪಿಸಲಾಗಿದ್ದು, ಇದು ಎಲ್ಲರ ಗಮನ ಸೆಳೆಯುತ್ತಿದೆ. ನಿನ್ನೆ ರಾತ್ರಿಯಿಂದಲೇ ಈ ದೃಶ್ಯವನ್ನು ಅಪಾರ ಸಂಖ್ಯೆ ಜನಸ್ತೋಮ ಸೇರಿ ಕಣ್ತುಂಬಿ ಕೊಳ್ಳುತ್ತಿದ್ದುದು ಕಂಡುಬಂತು. ಯುವಕ, ಯುವತಿಯರು ಫೋಟೋ, ಸೆಲ್ಪಿ ತೆಗೆದುಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಗಣಪತಿ ಸಾಗುವ ರಸ್ತೆಯಲ್ಲಿ, ಮಹಿಳೆಯರ, ಯುವಕರ ನೃತ್ಯ ಗಮನಸೆಳೆಯುತಿತ್ತು. ಯುವತಿಯರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಗೋಪಿ ವೃತ್ತದಲ್ಲಿ ಡಿಜೆ ಅಳವಡಿಸಲಾಗಿದ್ದು, ಸಂಗೀತಕ್ಕೆ ತಕ್ಕಂತೆ  ಯುವಕ ಯುವತಿಯರು ಕುಣಿದು ಕುಪ್ಪಳಿಸಿದರು.

ಮೆರವಣಿಗೆಯ ಮಾರ್ಗದುದ್ದಕ್ಕೂ ಭಕ್ತರು, ಯುವಕರು, ಸಾರ್ವಜನಿಕರಿಗೆ ಅಲ್ಲಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಲಘು ಉಪಾಹಾರ, ಪಾನೀಯ, ಸಿಹಿ ವಿತರಿಸಲಾಯಿತು. ಹೀಗೆ ಹಿಂದು ಮಹಾಸಭಾ ಗಣಪತಿ ಮೆರವಣಿಗೆ ವೈಭವದಿಂದ ಸಾಗಿದೆ.

ಇನ್ನು ರಾಜಬೀದಿಯ ಮಾರ್ಗದಲ್ಲಿ ಯುವಕರ ದಂಡು ಬೈಕ್‍ಗಳಲ್ಲಿ ‘ಜೈ ಶ್ರೀರಾಮ್’ ಎಂದು ಕೂಗುತ್ತಾ ಸಾಗುತ್ತಿದ್ದರು. ಇನ್ನೂ ವಿಶೇಷವೆಂದರೆ ಗಣಪತಿಯ ರಾಜಬೀದಿ ಉತ್ಸವಕ್ಕೆ ಸ್ವಾಗತ ಕೋರುವ ಬ್ಯಾನರ್‍ಗಳನ್ನು ಮಾರ್ಗದುದ್ದಕ್ಕೂ ಪುನಿತ್‍ರಾಜ್‍ಕುಮಾರ್ ಭಾವಚಿತ್ರ ಹಾಕಲಾಗಿದೆ. ಮಾರ್ಗದುದ್ದಕ್ಕೂ ವಿವಿಧ ಸಂಘಟನೆಗಳವರು ಗಣಪತಿಗೆ ಬೃಹತ್ ಹಾರಗಳನ್ನು ಹಾಕಲು ಸಿದ್ಧತೆ ನಡೆಸಿದ್ದರು

ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ನಗರದ ಎಲ್ಲೆಡೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಸಿಸಿ ಟಿವಿ, ದಿವ್ಯದೃಷ್ಟಿ ಕಣ್ಗಾವಲು ಹಾಗೂ ಡ್ರೋಣ್ ಕ್ಯಾಮೆರಾಗಳಲ್ಲಿ ಪ್ರತಿ ಹಂತದಲ್ಲೂ ಎಚ್ಚರಿಕೆ ವಹಿಸಲಾಗಿದೆ.

ಎಎ ಸರ್ಕಲ್‍ನಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಆರ್‍ಎಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ. ಪೊಲೀಸರು ವಿಶೇಷವಾಗಿ ಮಫ್ತಿಯಲ್ಲಿ ಇದ್ದು ನಿಗಾ ವಹಿಸುತ್ತಿದ್ದುದು ಕಂಡು ಬಂದಿತು. ಈ ಬಾರಿ ಪೊಲೀಸರು ವಿವಿಧ ವೇಷಧಾರಿಗಳಾಗಿ ಮುಫ್ತಿಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡದ್ದು ವಿಶೇಷವಾಗಿತ್ತು.

Also read: ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

ಈದ್‍ಮಿಲಾದ್ Eid milad ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಸಹ ಇದ್ದು,  ಶಾಲಾ ಕಾಲೇಜುಗಳಿಗೆ, ಕಚೇರಿಗಳಿಗೆ ರಜೆ ಇರುವುದರಿಂದ ಹೆಚ್ಚಿನ ಜನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಅದರಲ್ಲೂ ಮಕ್ಕಳು, ಹೆಣ್ಣುಮಕ್ಕಳು, ಭಾಗವಹಿಸಿದ್ದರು ವಿಶೇಷವಾಗಿತ್ತು. ಪುಟ್ಟ ಮಕ್ಕಳು ತಮ್ಮ ಪೋಷಕರ ಹೆಗಲೇರಿ ಮೆರವಣಿಗೆ ವೀಕ್ಷಿಸಿದ್ದು ವಿಶೇಷವಾಗಿತ್ತು. ಒಟ್ಟಾರೆಯಾಗಿ ಹಿಂದೆಂದಿಗಿಂತಲೂ ಅದ್ಧೂರಿಯಾಗಿ ನಡೆಯುತ್ತಿರುವ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಪತ್ರಿಕೆ ಮುದ್ರಣಕ್ಕೆ ಹೋಗುವವರೆಗೂ ಶಾಂತಿಯುತವಾಗಿ ಸಾಗಿತ್ತು.
ಈ ಬಾರಿ ವಿಶೇಷತೆಗಳು:

  • ಕೆಎ-14 ಕನ್ನಡಿಗ ಸಂಘಟನೆಯಿಂದ ಕಾವೇರಿ ನಮ್ಮ ಸ್ವಾಭಿಮಾನ, ಮಹದಾಯಿ ಜೀವದಾನ, ಗಡಿನಾಡು ನಮ್ಮ ಪ್ರಾಣ ಎಂಬ ಬರಹವುಳ್ಳ ಬ್ಯಾನರ್ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
  • ಮುಫ್ತಿಯಲ್ಲಿ ಇದ್ದ ಪೊಲೀಸರು ಈ ಬಾರಿ ವಿವಿಧ ವೇಷಧಾರಿಗಳಾಗಿ ಮೆರವಣಿಗೆ ಮೇಲೆ ಹದ್ದಿನ ಕಣ್ಣಿಟ್ಟಿದ್ದರು.
  • ಸಂಘ-ಸಂಸ್ಥೆಗಳಿಂದ ಮೆರವಣಿಗೆಯಲ್ಲಿ ಸಾಗಿಬಂದವರಿಗೆ ನೀರು, ಮಜ್ಜಿಗೆ, ಲಘು ಉಪಾಹಾರ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
  • ಮಹಿಳೆಯರು, ಮಕ್ಕಳು, ಯುವಕ ಯುವತಿಯರು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಲ್ಲದೆ ನೃತ್ಯ ಕೂಡ ಮಾಡಿದರು.
https://kalpa.news/wp-content/uploads/2023/05/VID-20230516-WA0005.mp4
  • ವಿವಿಧ ಜಾನಪದ ಕಲಾತಂಡಗಳು ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದ ಮೆರವಣಿಗೆಗೆ ಮೆರುಗು ತಂದವು.
  • ಪೊಲೀಸ್ ಇಲಾಖೆ ಇಡೀ ನಗರದಲ್ಲಿ, ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಸರ್ಪಗಾವಲು ಹಾಕಿತ್ತು. ಮೆರವಣಿಗೆ ಸಾಗುವ ಮುಖ್ಯ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಸಂಪರ್ಕ ರಸ್ತೆಗಳಿಂದ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿತ್ತು.
  • ಪೊಲೀಸರೊಂದಿಗೆ ಈ ಬಾರಿ ಸಾರ್ವಜನಿಕರು ಕೂಡ ಬಂದೋಬಸ್ತ್ ಕಾರ್ಯದಲ್ಲಿ ಕೈಜೋಡಿಸಿದ್ದರು.
  • ಶಿವಪ್ಪ ನಾಯಕ ವೃತ್ತದಲ್ಲಿ ನಿರ್ಮಿಸಿರುವ ಹನುಮಂತನ ಪ್ರತಿಮೆಗೆ ಫ್ಲವರ್ ಡೆಕೋರೇಷನ್ ಸಂಘದ ವತಿಯಿಂದ ಅತ್ಯಾಕರ್ಷಕ ಹೂವಿನ ಅಲಂಕಾರ ಮಾಡಲಾಗಿತ್ತು.

  • ಎಎ ಸರ್ಕಲ್‍ನಲ್ಲಿ ನಿರ್ಮಿಸಿದ್ದ ಚಂದ್ರಯಾನ-3 ಪ್ರತಿಕೃತಿಯ ಮೇಲೆ ಹಿಂದೂ ರಾಷ್ಟ್ರ ಹೆಸರಿನ ಕೇಸರಿ ಧ್ವಜ ರಾರಾಜಿಸುತ್ತಿತ್ತು.
  • ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಮತ್ತು ಸಂಗಡಿಗರು ಬಸವೇಶ್ವರ ದೇವಸ್ಥಾನದ ಬಳಿ ಅನ್ನ ಸಂತರ್ಪಣೆ ಏರ್ಪಡಿಸಿದ್ದರು. ಸದಸ್ಯ ಹೆಚ್.ಸಿ.ಯೋಗೇಶ್ 350ಕೆಜಿ ತೂಕದ ಕೊಬ್ಬರಿ ಹಾರವನ್ನು ಗಣಪನಿಗೆ ಅರ್ಪಿಸಿದರು.
  • ಎಎ ಸರ್ಕಲ್‍ನಲ್ಲಿ ವೀರ ಸಾವರ್ಕರ್ ಸೇನೆ ವತಿಯಿಂದ ವೀರ ಸಾವರ್ಕರ್ ಭಾವಚಿತ್ರದ ವಿಶೇಷ ಬ್ಯಾನರ್ ಹಾಕಲಾಗಿತ್ತು. ಕೇಸರಿ ಪೇಟ ಮತ್ತು ಶಾಲಿಗೆ ಭಾರೀ ಡಿಮ್ಯಾಂಡ್ ಇದ್ದು, ಮಾರಾಟ ಜೋರಾಗಿತ್ತು.
  • ಮುಫ್ತಿಯಲ್ಲಿದ್ದ ಮಹಿಳಾ ಮತ್ತು ಪುರುಷ ಪೊಲೀಸರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರ ಜೊತೆಯೇ ತಾವೂ ಸಾಗಿ ನೃತ್ಯ ಮಾಡುತ್ತಾ ಮೆರವಣಿಗೆ ಮುಂದೆ ಸಾಗಲು ಅನುವು ಮಾಡಿಕೊಡುತ್ತಿದ್ದರು.

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

Next Post

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

kalpa News

kalpa News

Next Post
ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೋನಾ: ಮಣಿಪಾಲ್ ಆಸ್ಪತ್ರೆಗೆ ದಾಖಲು!

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL