ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮುಂಬರುವ ನವೆಂಬರ್ 4 ಹಾಗೂ 5ರಂದು ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹಿರಿಯ ನಟ ಹಾಗೂ ಕಾರ್ಖಾನೆಯ ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ Doddanna ಹೇಳಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಸರ್.ಎಂ. ವಿಶ್ವೇಶ್ವರಯ್ಯನವರ ನಿಸ್ವಾರ್ಥ ಸೇವೆ ಮತ್ತು ಮುಂದಾಲೋಚನೆಯಿಂದ ಕ್ಷೇತ್ರದ ಜೀವನಾಡಿಯಾಗಿ ಉಳಿದು ಲಕ್ಷಾಂತರ ಜನರಿಗೆ ಬದುಕು ನಿರ್ಮಿಸಿಕೊಟ್ಟ ನಾಡಿನ ಹೆಮ್ಮೆಯ ಈ ಕಾರ್ಖಾನೆ ಇದೀಗ 100 ವರ್ಷಗಳನ್ನು ಪೂರೈಸಿದೆ. ಈ ಹಿನ್ನಲೆಯಲ್ಲಿ ಶತಮಾನೋತ್ಸವದ ಸಂಭ್ರಮಾಚರಣೆ ನಡೆಸಲಾಗುತ್ತಿದೆ ಎಂದರು.
ಭವಿಷ್ಯದ ಪೀಳಿಗೆಗೆ ನಮ್ಮ ಕಾರ್ಖಾನೆಯನ್ನು ಉಳಿಸಿಕೊಂಡಬೇಕೆAಬ ಮುಖ್ಯ ಉದ್ದೇಶದೊಂದಿಗೆ ಶತಮಾನೋತ್ಸವ ಸಂಭ್ರಮ ಆಯೋಜಿಸಲಾಗುತ್ತಿದೆ ಎಂದರು.
ಮೈಸೂರಿನ ಮಹಾರಾಜರಾಗಿದ್ದ ಯದುವಂಶದ ರಾಜಋಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹದ್ದೂರ್ ಅವರ ಸುವರ್ಣ ಆಡಳಿತ ಕಾಲದಲ್ಲಿ ದಿವಾನರಾಗಿದ್ದ ಸರ್.ಎಂ. ವಿಶ್ವೇಶ್ವರಯ್ಯ ಅವರ ಮಾರ್ಗದರ್ಶನದಂತೆ ಈ ಬೃಹತ್ ಉದ್ಯಮವನ್ನು 1923 ರಲ್ಲಿ ಸ್ಥಾಪಿಸಲಾಯಿತು. ಬಾಬಬುಡನಗಿರಿ ಹಾಗೂ ಕೆಮ್ಮಣ್ಣು ಗುಂಡಿಗಳಲ್ಲಿ ಇದ್ದ ಅಪಾರ ಖನಿಜ ನಿಕ್ಷೇಪಗಳನ್ನು ಬಳಸಿಕೊಂಡು ಕಬ್ಬಿಣ, ಉಕ್ಕು ಹಾಗೂ ಇತರ ಉತ್ಪನ್ನಗಳನ್ನು ತಯಾರಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು. ಎರಕಹೊಯ್ದ ಕಬ್ಬಿಣ, ಕಬ್ಬಿಣದ ಕೊಳವೆ ಹಾಗೂ ರೋಲಿಂಗ್ ಮಿಕ್ಸ್ ಮತ್ತು ಸಿಮೆಂಟ್ ಪ್ಲಾಂಟ್ ಅನ್ನು ನಂತರ ಆರಂಭಿಸಲಾಯಿತು. ಪ್ರಾರಂಭದಲ್ಲಿ ಕಾರ್ಖಾನೆಗೆ ಮೈಸೂರು ಐರನ್ ಅಂಡ್ ಸ್ಟೀಲ್ ವರ್ಕ್ಸ್ ಎಂದು ನಾಮಕರಣ ಮಾಡಲಾಯಿತು ಎಂದರು.
ಈ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿರುವ ಅಧಿಕಾರಿ ವರ್ಗ, ಕಾರ್ಮಿಕ ವರ್ಗ, ಗುತ್ತಿಗೆದಾರರು ಮತ್ತು ಇವರೆಲ್ಲರ ಕುಟುಂಬಗಳು ಒಂದೆಡೆ ಸೇರಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಅಧಿಕಾರಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಮತ್ತು ರಾಜ್ಯ ಸಚಿವರು ಸೇರಿದಂತೆ ಪ್ರತಿಯೊಬ್ಬರು ಸಂತೋಷದಿAದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವ ಮೂಲಕ ನಾಡಿನ ಸಂತ ಶ್ರೇಷ್ಠರ ಸಾನ್ನಿಧ್ಯದಲ್ಲಿ ಮೈಸೂರು ಸಂಸ್ಥಾನದ ಇಂದಿನ ಮಹಾರಾಜರನ್ನು ಗೌರವದಿಂದ ಆಹ್ವಾನಿಸಿ ಅವರ ವಂಶಸ್ಥರ ಕೊಡುಗೆಯನ್ನು ಸ್ಮರಿಸೋಣ ಎಂದರು.
Also read: ಕಾವೇರಿ ಹೋರಾಟಕ್ಕೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಬೃಹತ್ ಬೆಂಬಲ
ದೇಶದ ಮತ್ತು ರಾಜ್ಯದ ಹಲವಾರು ಪ್ರತಿಷ್ಠಿತರು ಮತ್ತು ಜಿಲ್ಲೆಯ ಪುರಜನರು ಒಂದೆಡೆ ಆಚರಿಸುವ ಕಾರ್ಯಕ್ರಮದಲ್ಲಿ ನಾಡಿನ ಶ್ರೇಷ್ಠ ಕಲಾವಿದರಿಂದ ವೈಭವದ ಸಾಂಸ್ಕೃತಿಕ ಕಾರ್ಯಕ್ರಮ, ದಸರಾ ಮಾದರಿಯ ಮೆರವಣಿಗೆ ಹಾಗೂ ಕಾರ್ಖಾನೆಯ ಗತವೈಭವ ಸಾರುವ ವಸ್ತು ಪ್ರದರ್ಶನ ವ್ಯವಸ್ಥೆ ಮಾಡಲಾಗಿದೆ. ಇದು ಬಹುವೆಚ್ಚದ ಸಮಾರಂಭವಾಗಿದ್ದು, ಪ್ರತಿಯೊಬ್ಬರು ಈ ಕಾರ್ಯಕ್ರಮ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದರು.
ಈ ಕಾರ್ಯಕ್ರಮ ಭದ್ರಾವತಿಯ ದೊಡ್ಡ ಹಬ್ಬದಂತೆ ಆಗಬೇಕು. ಅಂದಾಜು 25 ಸಾವಿರ ಮಂದಿ ಸೇರುವ ನಿರೀಕ್ಷೆಯಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.
ವಿಐಎಸ್’ಎಲ್ ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ವಿ. ರೇವಣ್ಣ ಸಿದ್ದಯ್ಯ, ಕಾರ್ಯದರ್ಶಿ ಜಿ. ಅಮೃತ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಎನ್. ರಘುರಾಂ, ಎನ್.ಟಿ. ಸತ್ಯನಾರಾಯಣ, ಎಸ್. ಅಡವೀಶಯ್ಯ, ಬಿ.ಜಿ. ರಾಮಲಿಂಗಯ್ಯ, ಬಿ. ಮಂಜುನಾಥ್, ಎಸ್. ನರಸಿಂಹಚಾರ್, ಜೆ. ಜಗದೀಶ್, ಯು.ಎ. ಬಸಂತ್ ಕುಮಾರ್, ಬಿ.ಸಿ. ಶೈಲಶ್ರೀ, ಡಿ. ಕುಮಾರ್, ಎಚ್.ಜಿ. ಸುರೇಶ್, ಕುಮಾರಸ್ವಾಮಿ, ಪಿ. ರಾಕೇಶ್, ಡಿ. ತ್ರಿವೇಣಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post