ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮ್ಮ ಕಾರು ಅಪಘಾತದಲ್ಲಿ #Accident ಮಹಿಳೆಯೊಬ್ಬರ ಸಾವಿಗೆ ಕಾರಣವಾಗಿದ್ದಾರೆ ಎಂದ ಆರೋಪದಲ್ಲಿ ಖ್ಯಾತ ನಟ ನಾಗಭೂಷಣ್ #ActorNagabhushan ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ನಿನ್ನೆ ತಡರಾತ್ರಿ ಕುಮಾರಸ್ವಾಮಿ ಲೇಔಟ್ #KumaraswamyLayout ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎನ್ನಲಾಗಿದೆ.

ಘಟನೆ ಹಿನ್ನೆಲೆಯಲ್ಲಿ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದು, ಕೆಲವೇ ಗಂಟೆಗಳನ್ನು ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮುಂದೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇನ್ನು, ಘಟನೆ ಕುರಿತಂತೆ ಸ್ವತಃ ನಾಗಭೂಷಣ್ ಅವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.
ವರದಿಗಳಂತೆ, ನಿನ್ನ ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್’ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post