ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ Eid-Milad ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗೆ ಕಾರಣಕರ್ತರಾಗಿರುವ 43 ದುಷ್ಕರ್ಮಿಗಳನ್ನು ಬಂಧಿಸಿದ್ದು, ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಘಟನೆಯಲ್ಲಿ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.
Also read: ಅಹಿತಕರ ಘಟನೆ ಪೂರ್ವನಿಯೋಜಿತ | ಶಾಸಕ ಚೆನ್ನಬಸಪ್ಪ ವ್ಯಕ್ತಪಡಿಸಿದ ಗಂಭೀರ ಅನುಮಾನಗಳಿವು
ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದಾರೆ ಹಾಗೂ ಶಾಂತಿ ಕಾಪಾಡಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಅದನ್ನು ಹತ್ತಿಕ್ಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post