No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಗಮನಿಸಿ! ಭದ್ರಾವತಿಯ ಮಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ನೊಂದಾವಣಿಗೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 4, 2023
in ಭದ್ರಾವತಿ
0
ಗಮನಿಸಿ! ಭದ್ರಾವತಿಯ ಮಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ನೊಂದಾವಣಿಗೆ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಸಂಸ್ಥಾಪಕ ನಾಯಕ ಡಾ.ಟಿ.ಎಂ.ಎ. ಪೈ ಅವರ 125ನೆಯ ಜನ್ಮದಿನಾಚರಣೆ ಅಂಗವಾಗಿ ನಗರದ ಜನರಿಗಾಗಿ ಮಣಿಪಾಲ ಆರೋಗ್ಯ ಕಾರ್ಡ್ #ManipalHealthCard ನೊಂದಾವಣಿಗೆ ಇಂದು ಚಾಲನೆ ನೀಡಲಾಗಿದೆ.

ಈ ಕುರಿತಂತೆ ಮಾತನಾಡಿದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ #Manipal ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ, ಈ ವರ್ಷ ನಮ್ಮ ದೂರದೃಷ್ಟಿಯ ಸಂಸ್ಥಾಪಕ ನಾಯಕ ಡಾ.ಟಿ.ಎಂ.ಎ. ಪೈ #DRTMAPai ಅವರ 125ನೇ ವರ್ಷದ ಜನ್ಮದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಅವರ ಉದಾತ್ತ ಕಾರ್ಯವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತೀಯ ಆರೋಗ್ಯ ವ್ಯವಸ್ಥೆಯನ್ನು ಸಮಾಜಕ್ಕೆ ಸುಲಭವಾಗಿ ದೊರೆಯುವಂತೆ ಮಾಡಿದ ಸ್ಪೂರ್ತಿದಾಯಕ ಅಪರೂಪದ ನಾಯಕ ಡಾ. ಟಿ.ಎಂ.ಎ. ಪೈ. ಮಣಿಪಾಲ್ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಾರಂಭವಾಗಿದೆ ಎಂದರು.ಮಣಿಪಾಲ್ ಆರೋಗ್ಯಕಾರ್ಡ್ #ManipalHealthCard ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯ್ತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು ಎಂದರು.

ಕಾರ್ಡ್ ಪಡೆಯುವುದು ಹೇಗೆ?
ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯ್ತಿಯ ರೂಪದಲ್ಲಿ ಹಿಂಪಡೆಯಬಹುದು. ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬುದು ಮಣಿಪಾಲ್ ಆರೋಗ್ಯಕಾರ್ಡ್’ನ ಧ್ಯೇಯ ವಾಕ್ಯ.
ಮಾಹೆ ಮಣಿಪಾಲದ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಮಣಿಪಾಲ ಆರೋಗ್ಯ ಕಾರ್ಡ್ ಅನ್ನು 2000 ರಲ್ಲಿ ಪ್ರಾರಂಭಿಸಲಾಯಿತು. ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯ ವಾಗದಿದ್ದರೂ ಎಲ್ಲರಿಗೂ ರಿಯಾಯ್ತಿ ದರದಲ್ಲಿ ಲಭ್ಯವಾಗಬೇಕು ಎಂಬುದು ಇದರ ಉದ್ದೇಶವಾಗಿತ್ತು. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ.

ಆರೋಗ್ಯ ಕಾರ್ಡ್’ನ ಶುಲ್ಕ ಎಷ್ಟು?
ಮಣಿಪಾಲ್ ಆರೋಗ್ಯ ಕಾರ್ಡ್ 2023ರ ಯೋಜನೆಯು ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ 300/-, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ 600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) 750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ 500-, ಕುಟುಂಬಕ್ಕೆ 800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ 950/- ಆಗಿರುತ್ತದೆ.
ಈ ಕಾರ್ಡುದಾರರಿಗೆ ಏನೆಲ್ಲ ಸೌಲಭ್ಯವಿದೆ?

  • ಹೊರ ರೋಗಿ ವಿಭಾಗದಲ್ಲಿ, ಒಳ ರೋಗಿ ವಿಭಾಗದಲ್ಲಿ, ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇಕಡಾ 50 ರಿಯಾಯ್ತಿ
  • ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ 30 ರಿಯಾಯ್ತಿ
  • ಸಿಟಿಎಂಆರ್’ಐ, ಅಲ್ಟ್ರಾಸೌಂಡ್’ಗಳಲ್ಲಿ ಶೇಕಡಾ 20 ರಿಯಾಯ್ತಿ
  • ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯ್ತಿ
  • ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯ್ತಿ
  • ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯ್ತಿ

ಯಾರಿಗೆಲ್ಲಾ ಅನ್ವಯಿಸುತ್ತದೆ?
ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ, ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ, ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯ್ತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು.
ಕಾರ್ಡ್ ನೋಂದಾಯಿಸಿದ ಮೊಬೈಲ್ ಸಂಖ್ಯೆಯಿಂದ 8867579797 ಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಣಿ ಮಾಡಿದ ಆರೋಗ್ಯ ಕಾರ್ಡ್ ನ ಮಾಹಿತಿ ಪಡೆಯಬಹುದು. ಕಳೆದ 22 ವರ್ಷಗಳಲ್ಲಿ, ಸಾಮಾಜಿಕ ಕಾಳಜಿಯೊಂದಿಗೆ ನಾವು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ರಿಯಾಯ್ತಿ ದರದಲ್ಲಿ ಒದಗಿಸುತ್ತಿದ್ದೇವೆ. ಇತರ ಆಸ್ಪತ್ರೆಗಳ ರಿಯಾಯ್ತಿ ಮಾದರಿಗಳನ್ನು ತಿಳಿಯಲು ಮತ್ತು ಹೆಚ್ಚಿನ ವಿವರಗಳನ್ನು www.manipalhealthcard.com ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳಬಹುದು.

ಸಾರ್ವಜನಿಕರು ಮಣಿಪಾಲ್ ಆರೋಗ್ಯಕಾರ್ಡ್ ಅನ್ನು ಎಲ್ಲಾ ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ. 9980854700/ 08202923748 ಗೆ ಸಂಪರ್ಕಿಸಬಹುದು. ಪ್ರತಿನಿಧಿಯಾದ ಪ್ರವೀಣ್ ಇದ್ದರು.
2023ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ: ಭದ್ರಾವತಿ: ರಾಜೇಶ್ 9448062523 (ಕಸ್ತೂರಬಾ ಆಸ್ಪತ್ರೆಮಾಹಿತಿ ಕೇಂದ್ರ, ಭದ್ರಾವತಿ) ವಿಪ್ರ ಸೌಹಾರ್ದ: 9739080599, ಡಿ ಶಬರಿವಾಸನ್: 9035616188, ಶಿವಮೊಗ್ಗ: ವೈದ್ಯಕೀಯ ಅಧೀಕ್ಷಕರಾದ ನವೀನ್: 7829540338 ಅವರುಗಳನ್ನು ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: BhadravathiKannada News WebsiteLatest News KannadaManipalManipal Health CardShimogaShivamoggaShivamogga NewsUdupiಕಸ್ತೂರ್ಬಾ ಆಸ್ಪತ್ರೆಡಾ.ಟಿ.ಎಂ.ಎ. ಪೈಭದ್ರಾವತಿಮಣಿಪಾಲಮಣಿಪಾಲ ಆರೋಗ್ಯ ಕಾರ್ಡ್
Share197Tweet123Send
Previous Post

ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್‌ಪೋರ್ಸ್ ರಚನೆಗೆ ಚಿಂತನೆ: ಸಚಿವ ಸಂತೋಷ್ ಲಾಡ್

Next Post

ಬಸ್ ಟಿಕೇಟ್ ತಗೊಳಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಪುಂಡರಿಂದ ಹಲ್ಲೆ: ಚಾಲಾಕಿ ಡ್ರೈವರ್ ಮಾಡಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್’ಆರ್’ಟಿಸಿ ಬಸ್ಸನ್ನೇ ಕದ್ದ ಕಳ್ಳರು

ಬಸ್ ಟಿಕೇಟ್ ತಗೊಳಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಪುಂಡರಿಂದ ಹಲ್ಲೆ: ಚಾಲಾಕಿ ಡ್ರೈವರ್ ಮಾಡಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

April 20, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL