ಕಲ್ಪ ಮೀಡಿಯಾ ಹೌಸ್ | ಗಂಗಟೋಕ್ |
ಹಠಾತ್ ಸಂಭವಿಸಿದ ಮೇಘ ಸ್ಫೋಟದ #Cloudburst ಪ್ರವಾಹಕ್ಕೆ ಸಿಲುಕಿ ಭಾರತೀಯ ಸೇನೆಯ #IndianArmy 23 ಸೇನಾ ಸಿಬ್ಬಂದಿಗಳು ಕಾಣೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಉತ್ತರ ಸಿಕ್ಕಿಂನ ಲೋನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ #TeestaRiver ಹಠಾತ್ ಪ್ರವಾಹ ಉಂಟಾಗಿದೆ. ಇದರಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದೆ.
ಪ್ರವಾಹದ ನಂತರ ಚುಂಗ್ಥಾಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೆಳಭಾಗದ ಪ್ರದೇಶಗಳಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ 15-20 ಅಡಿ ಎತ್ತರಕ್ಕೆ ಏರಿದೆ ಎಂದು ವರದಿಯಾಗಿದೆ. ಇದರಲ್ಲಿ ಸಿಲುಕಿ 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.
ಇನ್ನು ಘಟನೆಯಲ್ಲಿ ಸಿಂಘ್ಥಾಮ್ ಬಳಿಯ ಬರ್ದಂಗ್’ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಮುಳುಗಿವೆ. ನದಿ ಉಕ್ಕಿ ಹರಿಯುತ್ತಿರುವ ಕಾರಣ ತೀಸ್ತಾ ನದಿಯ ಮೇಲಿನ ಸಿಂಥಮ್ ಕಾಲು ಸೇತುವೆ ಕುಸಿದಿದೆ.
ಪಶ್ಚಿಮ ಬಂಗಾಳದ ಜಲೈಗುರಿ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಕೆಳಗಿನ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುತ್ತಿದೆ. ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ. ತೀಸ್ತಾ ನದಿಯಿಂದ ದೂರ ಇರುವಂತೆ ಜನರಿಗೆ ತಿಳಿಸಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ನಾಪತ್ತೆಯಾಗಿರುವ ಸಿಬ್ಬಂದಿಯ ಪತ್ತೆಗೆ ಶೋಧಕಾರ್ಯ ನಡೆಸಲಾಗುತ್ತಿದೆ.
ನದಿ ಉಕ್ಕಿ ಹರಿಯುತ್ತಿರುವುದರಿಂದ ತೀಸ್ತಾ ನದಿಯ ಮೇಲಿನ ಸಿಂಗ್ತಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದಿಂದ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10ರ ಹಲವು ಭಾಗಗಳು ಕೊಚ್ಚಿ ಹೋಗಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















