ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ ನೀಡುವ ಎಲ್’ಪಿಜಿ #LPG ಸಿಲಿಂಡರ್ ಸಬ್ಸಿಡಿ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ #PMNarendraModi ಸರ್ಕಾರ ಏರಿಕೆ ಮಾಡಿದ್ದು, ಈ ಮೂಲಕ ದೇಶದ ಜನತೆಗೆ ಬಿಗ್ ಗಿಫ್ಟ್ ನೀಡಿದೆ.
ಈ ಕುರಿತಂತೆ ಕೇಂದ್ರ ಸಂಪುಟ ಸಭೆಯ ನಂತರ ಮಾತನಾಡಿರುವ ಸಚಿವ ಅನುರಾಗ್ ಠಾಕೂರ್ #AnuragTakur ಅವರು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ #Ujwala ಫಲಾನುಭವಿಗಳಿಗೆ ಸರ್ಕಾರವು ಪ್ರತಿ ಎಲ್’ಪಿಜಿ ಸಿಲಿಂಡರ್’ಗೆ ರೂ. 200 ರಿಂದ ರೂ. 300ಕ್ಕೆ ಸಬ್ಸಿಡಿ ಮೊತ್ತವನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.
ಮೇ 2016 ರಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ಗ್ರಾಮೀಣ ಮತ್ತು ವಂಚಿತ ಕುಟುಂಬಗಳಿಗೆ ಎಲ್’ಪಿಜಿಯಂತಹ ಶುದ್ಧ ಅಡುಗೆ ಇಂಧನವನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದೊಂದಿಗೆ `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (ಪಿಎಂಯುವೈ) ಅನ್ನು ಪ್ರಮುಖ ಯೋಜನೆಯಾಗಿ ಪರಿಚಯಿಸಿತು.
ಸಾಂಪ್ರದಾಯಿಕ ಅಡುಗೆ ಇಂಧನಗಳ ಬಳಕೆಯು ಗ್ರಾಮೀಣ ಮಹಿಳೆಯರ ಆರೋಗ್ಯದ ಮೇಲೆ ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರಿವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿತು.
ಈ ಯೋಜನೆಯನ್ನು ಮೇ 1, 2016 ರಂದು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು.


















