ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈದ್ ಮಿಲಾದ್ Eid Milad ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ನಡೆದ ಘಟನೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ CMSiddaramaiah ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ MadhuBangarappa ಅವರ ನಿರ್ಲಕ್ಷದ ಹೇಳಿಕೆಗೆ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಸ್. ದತ್ತಾತ್ರಿ SDattatri ಕಿಡಿ ಕಾರಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದಲ್ಲಿ ನಡೆದ ಈದ್-ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಅಸಂಬದ್ಧ ಹೇಳಿಕೆ ಅತ್ಯಂತ ಹಾಸ್ಯಾಸ್ಪದವಾಗಿದೆ ಎಂದು ಕಿಡಿ ಕಾರಿದ್ದಾರೆ.
ಘಟನೆ ಕುರಿತಂತೆ ಮಾತನಾಡಿದ ಸಚಿವರು, ಶಿವಮೊಗ್ಗದಲ್ಲಿ ನಡೆದಿದ್ದು ಹಿಂದೂ ಮುಸ್ಲಿಂ ಗಲಭೆಯಲ್ಲ. ಬದಲಾಗಿ ಅದು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಘಟನೆ ಎಂದು ಹೇಳಿರುವುದು ಖಂಡನೀಯ ವಿಚಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈದ್-ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ತಲ್ವಾರ್‌ಗಳನ್ನು ಉಪಯೋಗಿಸಿರುವುದರ ಬಗ್ಗೆ ಮಾತನಾಡಿ ಅದು ಕಾರ್ಡ್ಬೋರ್ಡ್ ತಲ್ವಾರ್ ಎಂದು ಹೇಳುವುದರ ಮೂಲಕ ತಲ್ವಾರ್ ಪ್ರದರ್ಶಿಸಿರುವುದನ್ನು ಪರೋಕ್ಷವಾಗಿ ಸಮರ್ಥಿಸಿ ಕೊಂಡಿರುವುದು ಅತ್ಯಂತ ವಿಷಾದನೀಯ ಎಂದಿದ್ದಾರೆ.
ಇನ್ನು ಕಲ್ಲಿನ ಹೊಡೆತ ತಿಂದು ಮನೆಯ ಆಸ್ತಿ-ಪಾಸ್ತಿಗಳು ಹಾಳಾದ ಕುಟುಂಬಕ್ಕೆ ಹಾಗೂ ಮೆಗ್ಗಾನ್’ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಿಗೆ ಪರಿಹಾರ ನೀಡುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಸರ್ಕಾರದಿಂದ ಪರಿಹಾರ ನೀಡುವ ಬಗ್ಗೆ ಸ್ಪಷ್ಟವಾದ ಮಾತುಗಳನ್ನಾಡದೇ ನಾವೆಲ್ಲರೂ ಸೇರಿ ಕೊಡೋಣ ಎಂದು ಹಗುರವಾಗಿ ಮಾತನಾಡಿರುವುದು ಅತ್ಯಂತ ನೋವಿನ ಸಂಗತಿ ಎಂದಿದ್ದಾರೆ.
Also read: ಆರ್.ಎಂ. ಮಂಜುನಾಥ್ ಗೌಡ ಅವರ ನಿವಾಸಗಳ ಮೇಲೆ ಇಡಿ ದಾಳಿ | ಏನೆಲ್ಲಾ ಆಯ್ತು?
ಇಡೀ ರಾಜ್ಯವನ್ನೇ ತಲ್ಲಣಗೊಳಿಸುವಂತಹ ಟಿಪ್ಪು ಮತ್ತು ಔರಂಗಜೇಬರ ಕಟೌಟ್’ಗಳನ್ನು ಹಾಕಿ ವೈ¨sವೀಕರಿಸುವುದರ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿರುವುದಲ್ಲದೆ, ಇತ್ತ ಜಿಲ್ಲಾ ಉಸ್ತುವಾರಿ ಸಚಿವರ ಈ ವರ್ತನೆ ನಿಜಕ್ಕೂ ಖಂಡನೀಯವಾಗಿದೆ ಎಂದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಹಿಂದೂ ಸಮಾಜದ ಬಗ್ಗೆ ಈ ರೀತಿಯ ನಿರ್ಲಕ್ಷ ಭಾವನೆ ವ್ಯಕ್ತಪಡಿಸಿರುವುದನ್ನು ಹಿಂದಕ್ಕೆ ಪಡೆಯಬೇಕು. ಅಲ್ಲದೇ, ಸಚಿವರು ನಾಗರಿಕರ ಬಹಿರಂಗ ಕ್ಷಮೆ ಕೋರಬೇಕು. ಪ್ರಮುಖವಾಗಿ ದುಷ್ಕರ್ಮಿಗಳಿಂದ ದಾಳಿಗೊಳಗಾದ ಮನೆಗಳ ಮಾಲೀಕರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post