ಕಲ್ಪ ಮೀಡಿಯಾ ಹೌಸ್ | ಮೈಸೂರು |
ರಾಜ್ಯದಲ್ಲಿ ರಾಕ್ಷಸರ ರಾಜ್ಯಭಾರ ನಡೆಯುತ್ತಿದ್ದ ಶಿವಮೊಗ್ಗದಲ್ಲಿ ಭಾನುವಾರ ನಡೆದ ಗಲಭೆಗೆ ಸಿದ್ದರಾಮಯ್ಯನವರೇ ಕಾರಣ ಎಂದು ಸಂಸದ ಪ್ರತಾಪ್ ಸಿಂಹ MP Prathap Simha ಆರೋಪಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ತಿಳಿದಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬದಿಯಿಂದ ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ. ಚುಕ್ಕಾಣಿ ಹಿಡಿದವರು ಮನಃಸ್ಥಿತಿಯಂತೆ ಉಳಿದವರು ಇರುತ್ತಾರೆ. ಸಿದ್ದರಾಮಯ್ಯ CMSiddaramaiah ಎಲ್ಲಾ ನೋಡಿ ಕಣ್ಮುಂಚಿ ಕುಳಿತಿದ್ದಾರೆ ಎಂದು ಕಿಡಿ ಕಾರಿದರು.

Also read: ವಿಶ್ವ ಮಟ್ಟದಲ್ಲಿ ಮಿಂಚಿದ ಕುವೆಂಪು ವಿವಿ: ಸ್ಟ್ಯಾನ್ ಫೋರ್ಡ್ ವಿವಿ ಪಟ್ಟಿಯಲ್ಲಿ ಗಿರೀಶ್ & ಕುಮಾರಸ್ವಾಮಿ
ಪಿಎಫ್’ಐ, PFI ಕೆಎಫ್’ಡಿ ಮೇಲಿನ ಕೇಸ್ ವಾಪಾಸ್ ಪಡೆದ ಕಾರಣ ಇವತ್ತು ವಿಕೃತಿಗಳು ವಿಜೃಂಭಿಸುತ್ತಿವೆ. ಸಿದ್ದರಾಮಯ್ಯ ಇದಕ್ಕೆ ಕಾರಣ. ಅವರು ಬಿಗಿ ಆಗಿ ಇದ್ದರೆ ಈ ರೀತಿ ಆಗುತ್ತಿರಲಿಲ್ಲ. ಈ ಸಂಘಟನೆಗಳು ಈಗ ಎದ್ದು ನಿಂತಿದ್ದು, ಸರ್ಕಾರಕ್ಕೆ ಲಂಗು ಲಾಗಾಮು ಇಲ್ಲ. ಪೊಲೀಸ್ ಅಧಿಕಾರಿಗಳ ಮೇಲೆಯೇ ಕಲ್ಲು ತೂರಾಟ ನಡೆಸುವ ಮಟ್ಟಕ್ಕೆ ಇವರ ಉಪಟಳ ಹೋಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.











Discussion about this post