ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನೋಡಿದರೆ ರಾಜ್ಯ ಸರ್ಕಾರ ಬದುಕಿದೆಯೇ ಎಂಬ ಪ್ರಶ್ನೆ ಮೂಡುತ್ತದೆ ಎಂದು ಮಾಜಿ ಸಚಿವ ಅಶ್ವತ್ ನಾರಾಯಣ್ Ashwathnarayan ಹೇಳಿದರು.
ಬಿಜೆಪಿ ಸತ್ಯಶೋಧನಾ ಸಮಿತಿ ಗಲಭೆ ಪೀಡಿತ ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯರಿಂದ ಘಟನೆ ಕುರಿತು ಮಾಹಿತಿ ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

Also read: ಅ.8ರಂದು ಕೆಡ್ಲ್ಯೂಜೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ, ಸರ್ವ ಸದಸ್ಯರ ಸಭೆ
ರಾಗಿಗುಡ್ಡದಲ್ಲಿ Shivamogga Raagigudda ಅಮಾಯಕರ ಮೇಲೆ ಹಲ್ಲೆ ನಡೆಸಿದ್ದಾರೆ. ಜನರು ಭಯಗೊಂಡಿದ್ದಾರೆ. ರಾಜ್ಯ ಸರ್ಕಾರ ಬದುಕಿದೆಯಾ ಎಂದು ಪ್ರಶ್ನಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲ ಸಚಿವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಇದು ನಿಜಕ್ಕೂ ಖಂಡನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.












Discussion about this post