ಕಲ್ಪ ಮೀಡಿಯಾ ಹೌಸ್ | ಮನಾಮ (ಬಹರೇನ್) |
ಬಹರೇನ್ ಕನ್ನಡ ಭವನದಲ್ಲಿ ಹೊಸದಾಗಿ ನಿರ್ಮಿಸಿರುವ ಮೊಗಸಾಲೆಯ (ಹಜಾರ) ಲೋಕಾರ್ಪಣೆ ಶುಕ್ರವಾರ ನಡೆಯಲಿದೆ.
ಇಲ್ಲಿನ “ಕನ್ನಡ ಭವನ”ದಲ್ಲಿ Kannada Bhavana in Bahrain ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ‘ರೊನಾಲ್ಡ್ ಕೊಲಾಸೊ ಮೊಗಸಾಲೆ’ಯ (ಲೌಂಜ್) ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಬಹರೇನ್ ಕನ್ನಡ ಸಂಘದ ಅಧ್ಯಕ್ಷ ಅಮರನಾಥ ರೈ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದೇ ದಿನ ಸಂಜೆ ಕನ್ನಡ ಸಂಘದ ಹೊಸ ಆಡಳಿತ ಮಂಡಳಿಯ ವಿದ್ಯುಕ್ತ ಪದಗ್ರಹಣ ಖಾಸಗಿ ಹೋಟೆಲ್ ನಲ್ಲಿ ನಡೆಯಲಿದ್ದು, ಇದರ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
Also read: ವಿಶ್ವ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಶಿವಮೊಗ್ಗದ ಡಾ. ವರುಣ್‌ಕುಮಾರ್‌ಗೆ ಸ್ಥಾನ
ಬಹರೇನ್ ನಲ್ಲಿನ ಭಾರತೀಯ ರಾಯಭಾರಿ ವಿನೋದ್ ಕೆ. ಜೇಕಬ್ ಮತ್ತು ಜಿ.ಪರಮೇಶ್ವರ ಈ ಕಾರ್ಯಕ್ರಮದ
ಮತ್ತು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಶಾಸಕರಾದ ರವಿಕುಮಾರ್ ಗೌಡ, ಎಐಸಿಸಿ ಕಾರ್ಯದರ್ಶಿ ಡಾ.ಆರತಿ ಕೃಷ್ಣ,, ಉದ್ಯಮಿ ಹಾಗೂ ಸಮಾಜ ಸೇವಕ ಡಾ. ರೊನಾಲ್ಡ್ ಕೊಲಾಸೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬಹರೇನ್ ಕನ್ನಡ ಭವನ ನಿರ್ಮಾಣಕ್ಕೆ ಡಾ. ರೊನಾಲ್ಡ್ ಕೊಲಾಸೊ ಅವರು ದೊಡ್ಡ ಮೊತ್ತದ ಕೊಡುಗೆ ನೀಡಿರುವುದನ್ನು ಗೌರವಿಸಿ ಇಲ್ಲಿನ ಮೊಗಸಾಲೆಗೆ ಅವರ ಹೆಸರನ್ನು ಇರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post