ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಹನುಮಂತನಗರದಲ್ಲಿ ಯುವಕನೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದ್ದು, ಘಟನೆ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಏನಿದು ಘಟನೆ?
ಹನುಮಂತನಗರದಲ್ಲಿ ನಡೆದುಕೊಂಡು ಹೋಗುತ್ತಿದ್ದ ನಂದ ಕುಮಾರ್ ಎಂಬ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಹರಿತವಾದ ಆಯುಧದಿಂದ ಆತನ ಬೆನ್ನಿಗೆ ಇರಿಯಲಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಎಸ್’ಪಿ ಹೇಳಿಕೆಯೇನು?
ಇನ್ನು, ಘಟನೆ ಕುರಿತಂತೆ ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಮೊಬೈಲ್ ಅಡವಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೃತ್ಯ ನಡೆದಿದೆ ಎಂದಿದ್ದಾರೆ.
ಘಟನೆ ಕುರಿತಂತೆ 9 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆದಿದೆ. ಈ ಘಟನೆ ಕೋಮು ದ್ವೇಷದ ಹಿನ್ನೆಲೆಯಲ್ಲಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















