ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದ್ದು, ಹೀಗಾಗಿ ಎಲ್ಲದಕ್ಕೂ ಕೇಂದ್ರದ ಕಡೆ ಬೆರಳು ತೋರಿಸುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Basavaraja Bommai ಚಾಟಿ ಬೀಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ. ಬರ ಆದರೂ ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರ. ಕಡೆಗೆ ಬೆರಳು ತೋರಿಸುತ್ತಾರೆ ಎಂದರು.
ಈಗ ವಿದ್ಯುತ್ ಅಭಾವದ ಹಿನ್ನೆಲೆ ಕೇಂದ್ರಕ್ಕೆ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸರಿಯಾದ ಕಲ್ಲಿದ್ದಲುಗಳನ್ನು ಒದಗಿಸಿ. ವಿದ್ಯುತ್ ಉತ್ಪಾದನೆ ಮಾಡಿದರೆ ಈ ಸಮಸ್ಯೆ ಬರುತ್ತಿರಲಿಲ್ಲ ಎಂದರು.
Also read: ಚಂದ್ರಗುತ್ತಿ ದೇಗುಲದ ಹುಂಡಿ ಹಣ ಎಣಿಕೆ | ಸಂಗ್ರಹವಾದ ಮೊತ್ತವೆಷ್ಟು?
ತಮ್ಮ ಹಣಕಾಸಿನ ದುಸ್ಥಿತಿಗೆ ಅಸಮರ್ಪಕ ಕೆಲಸದಿಂದ ವಿದ್ಯುತ್ ಅಭಾವ ಬಿಗಡಾಯಿಸಿದೆ. ಸರಿಯಾದ ವಿದ್ಯುತ್ತನ್ನು ಪೂರೈಸುವುದು ರಾಜ್ಯ ಸರ್ಕಾರದ ಕರ್ತವ್ಯ. ವಿದ್ಯುತ್ ಉತ್ಪಾದನೆಗೆ ಕೇಂದ್ರ ಏನು ಸಹಾಯ ಮಾಡಬೇಕು ಎಂದು ಪ್ರಶ್ನಿಸಿದರು.
ಎಲ್ಲ ಕಾಮಗಾರಿಗಳ ತನಿಖೆ ನಡೆಸಲಿ
ನರಗುಂದ ಸೇರಿದಂತೆ ಕೆಲ ಕ್ಷೇತ್ರಗಳ ಹಿಂದಿನ ಕಾಮಗಾರಿಗಳ ತನಿಖೆ ಮಾಡಲು ಸಿಎಂ ಶಿಫಾರಸ್ಸು ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನರಗುಂದ ಸೇರಿದಂತೆ ಯಾವುದೇ ಕ್ಷೇತ್ರವಾಗಲಿ, ಕಾಮಗಾರಿಗಳ ತನಿಖೆ ಮಾಡಲಿ ಎಂದರು.
ಲೋಕೋಪಯೋಗಿ ಇಲಾಖೆ, ನೀರಾವರಿ ಇಲಾಖೆ ಎಲ್ಲ ಇಲಾಖೆ ತನಿಖೆಯಾಗಲಿ, ಬೇಡ ಅಂದವರು ಯಾರು? ಕಾಮಗಾರಿ ಎಲ್ಲವೂ ಮುಗಿದಿದೆ, ಬಿಲ್ ಗಳನ್ನು ಸಹ ಕೊಡಲಾಗಿದೆ. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲಿನ ಕಾಮಗಾರಿಗಳ ಬಿಲ್ಲನ್ನು ಸರ್ಕಾರ ಇನ್ನೂ ಕೊಟ್ಟಿಲ್ಲ. ಮೊದಲು ಬಿಲ್ಲುಗಳನ್ನು ಕೊಡಲಿ, ನಂತರ ಎಲ್ಲೆಲ್ಲಿ ತಪ್ಪುಗಳು ನಡೆದಿದೆ ಇದರ ಬಗ್ಗೆ ತನಿಖೆಯಾಗಲಿ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















