ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ ಆಗಿದ್ದು, ತುಷ್ಟೀಕರಣ ರಾಜಕಾರಣಕ್ಕಾಗಿ ಇಲ್ಲಿನ ಕಾಂಗ್ರೆಸ್ ಪಕ್ಷ ಪ್ಯಾಲೆಸ್ಟೈನ್ ಉಗ್ರರಿಗೆ ಬೆಂಬಲ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇದೊಂದು ಅಂತಾರಾಷ್ಟ್ರೀಯ ವಿಚಾರ. ಇಸ್ರೇಲ್ ಹಾಗೂ ಪ್ಯಾಲೆಸ್ಟೈನ್ ನಡುವೆ ಬಹಳ ವರ್ಷದ ಸಂಘರ್ಷ ಇದೆ. ಪ್ಯಾಲೆಸ್ಟೈನ್ ಹಮಾಸರು ಉಗ್ರವಾದಿಗಳು, ಅವರು ಪ್ಯಾಲೆಸ್ಟೈನ್ ನಾಗರಿಕರಲ್ಲ. ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.
ಪ್ಯಾಲೆಸ್ಟೈನ್’ನಲ್ಲಿರುವಂತಹ ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ. ಅಮಾಯಕರು, ಹೆಣ್ಣುಮಕ್ಕಳು, ಮಕ್ಕಳ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ. ಇದನ್ನು ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತೆ ತುಷ್ಟಿಕರಣದ ರಾಜಕಾರಣಕ್ಕೆ ಇಳಿಯುತ್ತಿದೆ ಇದು ದೊಡ್ಡ ದುರಂತ ಎಂದರು.
(ವರದಿ: ಡಿ.ಎಲ್. ಹರೀಶ್)


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















