No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಾಗಲಕೋಟೆ

ಶೀಘ್ರದಲ್ಲೇ ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯ ಸ್ಪೋಟ: ಬಸವರಾಜ ಬೊಮ್ಮಾಯಿ ಲೇವಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 11, 2023
in ಬಾಗಲಕೋಟೆ
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬಾಗಲಕೋಟೆ ( ಜಮಖಂಡಿ) |

ಕಾಂಗ್ರೆಸ್ ನಾಯಕರ ನಡುವಿನ‌ ಭಿನ್ನಾಭಿಪ್ರಾಯ ಶೀಘ್ರವೇ ಸ್ಪೋಟಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದ್ದಾರೆ.

ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರು , ಶಾಸಕರು ಒಗ್ಗಟ್ಟಿಲ್ಲದೆ ವಿಭಿನ್ನ ಹೇಳಿಕೆ ಕೊಡುತ್ತಿದ್ದು, ಈ ಸರ್ಕಾರದಲ್ಲಿ ಸಿಎಂ ನೇಮಕ ಪ್ರಕ್ರಿಯೆಯಿಂದಲೇ ಭಿನ್ನಾಭಿಪ್ರಾಯ ಶುರುವಾಗಿದೆ. ಸಿಎಂ ಆಯ್ಕೆ ವೇಳೆಯೇ ಸಿದ್ದರಾಮಯ್ಯ ಅವರು ತಮ್ಮನ್ನು ಸಿಎಂ ಮಾಡಲಿಲ್ಲ ಎಂದು ಕೋಪಗೊಂಡು ದೆಹಲಿಯಿಂದ ಮರಳಿ ಬರುತ್ತಿದ್ದರು. ನಂತರ ಸಿದ್ದರಾಮಯ್ಯ Siddaramaiah ಅವರಿಗೆ ಕರಾರು ಖಂಡಿಷನ್ ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಐದು ವರ್ಷ ಪೂರ್ಣಾವಧಿ‌ ಸಿಎಂ ಎಂದು ಅನುಮಾನ ಬರುವ ರೀತಿಯಲ್ಲಿ ಅವರ ಸಂಪುಟದ ಹಿರಿಯ ಸಚಿವರೇ ಮಾತನಾಡಿದರು. ಇದೂವರೆಗೂ ಸಿದ್ದರಾಮಯ್ಯ ಸಹ 5 ವರ್ಷ ನಾನೇ ಸಿಎಂ ಅಂತ ಎಲ್ಲೂ ಹೇಳಿಲ್ಲ. ಏನಿದರರ್ಥ, ಏನು ಒಳಗಡೆ ನಡೆದಿದೆ ? ಇದು ರಾಜ್ಯದ ಜನತೆಗೆ ಗೊತ್ತಾಗಬೇಕು, ಇದು ಕಾಂಗ್ರೆಸ್ ಆಂತರಿಕ ವಿಷಯ ಅಲ್ಲ. ರಾಜ್ಯದ ಆಡಳಿತ ರಾಜ್ಯದ ಜನರಿಗೆ ಬೇಕಾದ ವಿಷಯ ಇದು ಎಂದು ಹೇಳಿದರು.

ಇನ್ನು ಮೂರು ಜನ ಉಪಮುಖ್ಯಮಂತ್ರಿಗಳ ವಿಚಾರದಲ್ಲಿ ಅವರ ಬುಡಕ್ಕೆ ಇವರು, ಇವರ ಬುಡಕ್ಕೆ ಅವರು ಇಡಲು ನೋಡುತ್ತಿದ್ದಾರೆ. ಈ ಮಧ್ಯೆ ಶಾಸಕರು ನಮ್ಮ ಮಾತು ಕೇಳುವವರಿಲ್ಲ, ಅಭಿವೃದ್ಧಿ ಇಲ್ಲ ಅಂತಿದ್ದಾರೆ. ಹೀಗಾಗಿ ಈ ಸರ್ಕಾರ ಗೊಂದಲದ ಗೂಡಾಗಿದೆ. ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಇನ್ನು ಸ್ವಲ್ಪ ದಿನದಲ್ಲಿ ಸ್ಪೋಟವಾಗಲಿದೆ ಎಂದು ಭವಿಷ್ಯ ನುಡಿದರು.‌
ನಾನು ಬಿಜೆಪಿಗೆ ಬಂದ ಬಳಿಕವೇ ಸೋತಿದ್ದು ಎಂಬ ಮಾಜಿ ಸಚಿವ ವಿ.ಸೋಮಣ್ಣ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ಅನುಭವ, ಅದು ಸತ್ಯ ಕೂಡ ಇದೆ. ಅದಕ್ಕೆ ಕಾರಣಗಳು ಬೇರೆ ಬೇರೆ ಇವೆ. ವಿ. ಸೋಮಣ್ಣ ಅವರು ಕ್ಷೇತ್ರ ಬದಲಾವಣೆ ಮಾಡಿರುವ ಕಾರಣಗಳೂ ಇವೆ ಎಂದರು.

Also read: ಗಾಜಾಪಟ್ಟಿ ವಶಕ್ಕೆ ಪಡೆದ ಇಸ್ರೇಲ್ ಸೇನೆ

ಶೀಘ್ರ ವಿಪಕ್ಷ ನಾಯಕನ ಆಯ್ಮೆ
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಪಕ್ಷ ನಾಯಕನ ಆಯ್ಕೆ ವಿಳಂಬದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ರಾಜ್ಯಾಧ್ಯಕ್ಷ ಇದ್ದಾರೆ, ಕೆಲಸ ಮಾಡುತ್ತಿದ್ದಾರೆ. ಅಧ್ಯಕ್ಷ, ವಿಪಕ್ಷ ನಾಯಕ ಎರಡನ್ನೂ ಒಟ್ಟಿಗೆ ನೇಮಕ ಮಾಡಲು ವಿಳಂಬ ಆಗಿರುವುದು ನಿಜ. ಆದರೆ, ನಾನು ಈಗಾಗಲೇ ದೆಹಲಿ ನಾಯಕರೊಟ್ಟಿಗೆ ಮಾತಾಡಿದ್ದೇನೆ. ಐದು ರಾಜ್ಯಗಳ ಟಿಕೆಟ್ ಫೈನಲ್ ಆದ ನಂತರ ಮಾಡುದಾಗಿ ತಿಳಿಸಿದ್ದಾರೆ. ಆದಷ್ಟು ಬೇಗ ವಿಪಕ್ಷ ನಾಯಕ ಆಯ್ಕೆ ಆಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಬರ ಪರಿಹಾರ ಇಚ್ಚಾಶಕ್ತಿ ಕೊರತೆ
ಬರ ಪರಿಹಾರ ವಿಚಾರಕ್ಕೆ ಆಗಲೇ ಕೇಂದ್ರ ಸರ್ಕಾರ ಮೊದಲ ಕಂತಿನ ಹಣ, ಎರಡು ತಿಂಗಳ ಹಿಂದೆಯೇ 350 ಕೋಟಿ ರೂ. ರಿಲೀಸ್ ಮಾಡಿದೆ. ಜಿಲ್ಲಾಧಿಕಾರಿಗಳ ಅಕೌಂಟ್‌ನಲ್ಲೂ ದುಡ್ಡಿದೆ. ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಮನಸ್ಸಿಲ್ಲ. ಈಗ ಬರದಲ್ಲಿರುವವರಿಗೆ ಕೊಟ್ಟರೆ ಮತ್ತೆ ಮುಂದೆ ಏನಾದರೂ ಕೇಳಿದರೆ ಕಷ್ಟ ಅಂತ. ಗ್ಯಾರಂಟಿಗಳಿಗೆ ದುಡ್ಡು ಕೊಟ್ಟಿರುವುದರಿಂದ, ಮೀನಾ, ಮೇಷ ನೋಡುತ್ತಿದ್ದಾರೆ ಎಂದು ಹೇಳಿದರು.

ಮೂರು ತಿಂಗಳಿಗೆ ಗೃಹ ಲಕ್ಷ್ಮೀ ಮುಕ್ತಾಯ
ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ದುಡ್ಡು ಬರದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲ ತಿಂಗಳಲ್ಲಿ ಬಂದವರಿಗೆ ಎರಡನೇ ತಿಂಗಳದ್ದು ದುಡ್ಡು ಬಂದಿಲ್ಲ. ಇದರಲ್ಲಿ ಬಹಳಷ್ಟು ಗೊಂದಲ ಇದೆ. ಇನ್ನೊಂದು ತಿಂಗಳಾದರೆ ಮೂರು ತಿಂಗಳಲ್ಲೇ ಗೃಹಲಕ್ಷ್ಮಿ ಯೋಜನೆ ಮುಕ್ತಾಯ ಆಗುತ್ತದೆ. ಗೃಹಲಕ್ಷ್ಮಿ ಕೊಟ್ಟು ಮತ ಬ್ಯಾಂಕ್ ಮಾಡಬೇಕು ಅಂದುಕೊಂಡಿದ್ದರು. ಅದೆ ಕಾಂಗ್ರೆಸ್ ಸರ್ಕಾರಕ್ಕೆ ತಿರುಗುಬಾಣ ಆಗುತ್ತದೆ ಎಂದು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

 

 

Tags: Bagalakote (Jamakandi)Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಾಗಲಕೋಟೆ ( ಜಮಖಂಡಿ)
Share197Tweet123Send
Previous Post

ಗಾಜಾಪಟ್ಟಿ ವಶಕ್ಕೆ ಪಡೆದ ಇಸ್ರೇಲ್ ಸೇನೆ

Next Post

ಗಣಿ ಗುತ್ತಿಗೆ ಸಮಸ್ಯೆ ನಿವಾರಣೆಗೆ ಸಿಎಂ ಸೂಚಿಸಿರುವ ಪರಿಹಾರವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಣಿ ಗುತ್ತಿಗೆ ಸಮಸ್ಯೆ ನಿವಾರಣೆಗೆ ಸಿಎಂ ಸೂಚಿಸಿರುವ ಪರಿಹಾರವೇನು?

ಗಣಿ ಗುತ್ತಿಗೆ ಸಮಸ್ಯೆ ನಿವಾರಣೆಗೆ ಸಿಎಂ ಸೂಚಿಸಿರುವ ಪರಿಹಾರವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL