ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ |
ವಿದ್ಯುನ್ಮಾಲಿ ಮತ್ತು ಮಾಲಿನಿ ರಾಕ್ಷಸ ದಂಪತಿಗೆ ಬಹುಕಾಲ ಮಕ್ಕಳಿರಲಿಲ್ಲ. ಹೇಗಾದರೂ ಪುತ್ರ ಪ್ರಾಪ್ತಿಯಾಗಲೇಬೇಕೆಂದು ನಿರ್ಧರಿಸಿದ ಮಾಲಿನಿ ತಪಸ್ಸನ್ನಾಚರಿಸಲು ನಿರ್ಧರಿಸುತ್ತಾಳೆ. ಕಾಡಿಗೆ ತೆರಳಿ ಮಹಿಷಿ ಅಂದರೆ ಎಮ್ಮೆಯ ರೂಪದಲ್ಲಿ ತಪಸ್ಸಿಗೆ ತೊಡಗುತ್ತಾಳೆ.
ಆಕೆಯ ಕಠೋರ ತಪಸ್ಸಿನಿಂದ ಹೊಮ್ಮುವ ಶಾಖ ಋಷಿಯೊಬ್ಬನ ತಪಸ್ಸಿಗೆ ಭಂಗ ತರುತ್ತದೆ. ಇದರಿಂದ ಕೋಪಾವಿಷ್ಠನಾದ ಋಷಿ ಜ್ಞಾನದೃಷ್ಟಿಯಿಂದ ಮಾಲಿನಿ ತಪಸ್ಸನ್ನಾಚರಿಸುವುದನ್ನು ತಿಳಿದುಕೊಳ್ಳುತ್ತಾನೆ. ಮಹಿಷಿಯ ರೂಪದಲ್ಲಿ ತಪಸ್ಸಾನಚರಿಸುತ್ತಿರುವುದರಿಂದ ನಿನ್ನ ಹೊಟ್ಟೆಯಲ್ಲಿ ಮಹಿಷ ಅಂದರೆ ಕೋಣವೇ ಜನ್ಮತಾಳಲಿ ಎಂದು ಶಪಿಸುತ್ತಾನೆ. ಇದರ ಫಲವೇ ಮಹಿಷಾಸುರನ ಜನನ.
ಮಹಿಷಾಸುರ Mahishasura ಬೆಳಯುತ್ತಿದ್ದ. ಒಮ್ಮೆ ವಿದ್ಯುನ್ಮಾಲಿ ದೇವೇಂದ್ರನ ಮೇಲೆ ಯುದ್ಧ ಸಾರುತ್ತಾನೆ. ಯುದ್ಧದಲ್ಲಿ ವಿದ್ಯುನ್ಮಾಲಿಯ ಸೇನೆ ಸೋತು, ಆತ ಸಾವನ್ನಪ್ಪುತ್ತಾನೆ. ಇದರ ಸೇಡು ತೀರಿಸಿಕೊಳ್ಳಲು ಬಾಲಕ ಮಹಿಷ ಹೊರಟಾಗ ಮಾಲಿನಿ ತಡೆದು, ತಪಸ್ಸನ್ನಾಚರಿಸಿ ಶಕ್ತಿ ಸಂಪಾದಿಸಿಕೊಳ್ಳುವಂತೆ ಮಹಿಷನಿಗೆ ಸೂಚಿಸುತ್ತಾಳೆ.
Also read: ಮಾಜಿ ಡಿಸಿಎಂ ಈಶ್ವರಪ್ಪ ವಿರುದ್ಧ ಸುಮೋಟೊ ಪ್ರಕರಣ ದಾಖಲು ಹಿನ್ನೆಲೆ: ಬಿಜೆಪಿ ತೀವ್ರ ಖಂಡನೆ
ಅದರಂತೆ ತಪಸ್ಸನ್ನಾಚರಿಸಿ ಸಿಂಹವನ್ನು ಪಳಗಿಸಬಲ್ಲ ಹೆಣ್ಣಿನ ಹೊರತಾಗಿ ಬೇರಾರಿಂದಲೂ ಸಾವು ಬಾರದಂತಹ ವರ ಪಡೆಯುತ್ತಾನೆ. ವರಬಲದಿಂದ ಕೊಬ್ಬಿದ ಮಹಿಷ ದೇವಾದಿ ದೇವತೆಗಳನ್ನು ಸೋಲಿಸುತ್ತಾರೆ. ದೇವತೆಗಳು ಯಥಾಪ್ರಕಾರ ತ್ರಿಮೂರ್ತಿಗಳ ಮೊರೆ ಹೋಗುತ್ತಾರೆ. ತ್ರಿಮೂರ್ತಿಗಳು ಆದಿಮಾಯೆಯನ್ನು ಸ್ತುತಿಸಲು ಸೂಚಿಸುತ್ತಾರೆ.
ಸಿಂಹವಾಹಿನಿಯಾಗಿ ಪ್ರಕಟಗೊಳ್ಳುವ ಆದಿಮಾಯೆ ಮಹಿಷಾಸುರನನ್ನು ಕೊನೆಗಾಣಿಸುತ್ತಾಳೆ. ಅಲ್ಲಿಂದ ತರುವಾಯ ಆಕೆ, ಮಹಿಷಾಸುರಮರ್ದಿನಿಯಾಗಿ ಭಕ್ತರ ಹೃದಯಮಂದಿರದಲ್ಲಿ ನೆಲೆಸುತ್ತಾಳೆ.
ಇಲ್ಲಿ ಮಹಿಷ ಯಾವಾಗ ಬೌದ್ಧನಾದ?? ಇಲ್ಲಿ ಯಾವಾಗ ಮಹಿಷ ಒಂದು ಜಾತಿಯ ಮೂಲ ಪುರುಷನಾದ??
(ಸಂಗ್ರಹ: ಪುನೀತ್ ಜಿ.)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















