ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಪದ್ಮಾಕ್ಷಿ (40) ಮೃತ ದುರ್ದೈವಿ. ಆಕೆಯ ಪತಿ ಚಂದ್ರು ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು ಮನೆಯಿಂದ ಹೊರ ತಳ್ಳಿದ್ದಾನೆ. ಪದ್ಮಾಕ್ಷಿ ತನ್ನ ಮನೆಯ ಮುಂಭಾಗದಲ್ಲಿ ಬಿದ್ದಿದ್ದು, ಇಂದು ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಇದನ್ನು ಗಮನಿಸಿ ಪರಿಶೀಲಿಸಿದಾಗ ಆಕೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಆಕೆಯ ಪತಿ ಚಂದ್ರು ಮನೆಯೊಳಗೆ ಮಲಗಿರುವುದು ಕಂಡು ಬಂದಿದ್ದು, ಗೋಣಿಬೀಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
Also read: ಆನಂದಪುರಂ | ಕಂಚಿಕಾಳಮ್ಮ ಸನ್ನಿಧಿಯಲ್ಲಿ ಅ.15ರಿಂದ ನವರಾತ್ರಿ ಉತ್ಸವ: ಏನೆಲ್ಲಾ ಕಾರ್ಯಕ್ರಮ ನಡೆಯಲಿವೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post