ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ BMTC ಬಸ್ ಡಿಕ್ಕಿ ಹೊಡೆದ ಪರಿಣಾಮ ಇಂಜಿನಿಯರ್ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಂಗಾಧರ್ (21) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಗಾಧರ್ಗೆ ಹೂವಿನ ಮಾರ್ಕೆಟ್ ಸಮೀಪ ಹಿಂಬಂದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಯಶವಂತಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್ ಅಪಘಾತದಲ್ಲಿ ಮೂರನೇ ಬಲಿ ಇದಾಗಿದೆ.
Also read: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post