ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮೆಸ್ಕಾಂ ಕೂಡ್ಲಿಗೆರೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾರ್ಯವಿರುವುದರಿಂದ ಅ.17ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದನೇರಲಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಕೆರೆ, ಅರಬಿಳಚಿ, ತಿಮ್ಲಾಪುರಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
Also read: ಕಾಂಗ್ರೆಸ್ ಸರ್ಕಾರದ ಭ್ರಷ್ಟತೆ ವಿರುದ್ಧ ಜನರು ಬೀದಿಗಿಳಿಯಲಿದ್ದಾರೆ: ಮಾಜಿ ಸಚಿವ ಈಶ್ವರಪ್ಪ ಗುಡುಗು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















