ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ Election for South west Graduate and Teachers Constituency ನಡೆಯಲಿರುವ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗುವ ಭರವಸೆ ಇದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ. ರಮೇಶ್ ಶೆಟ್ಟಿ ತಿಳಿಸಿದರು.
ಕಳೆದ ಬಾರಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಪಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಅತ್ಯಂತ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದೆ. ಆದರೆ ಈ ಬಾರಿ ಪಕ್ಷದಿಂದಲೇ ಟಿಕೆಟ್ ಸಿಗುವ ನಿರೀಕ್ಷೆ ಇರುವುದರಿಂದ ಗೆಲುವು ಕಾಣುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
Also read: ಶಿವಮೊಗ್ಗದಿಂದ ತಿರುಪತಿ, ಗೋವಾ, ಹೈದರಾಬಾದ್’ಗೆ ನೇರ ವಿಮಾನ: ಸಮಯವೇನು?
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಕೂಡ ಈ ಚುನಾವಣೆಯಲ್ಲಿ ಆಸಕ್ತಿ ವಹಿಸಿದೆ. ಜಿಲ್ಲಾ ಉಸ್ತುವರಿ ಸಚಿವ ಮಧು ಬಂಗಾರಪ್ಪ ಅವರು ಸೇರಿದಂತೆ ಮುಖಂಡರುಗಳಾದ ಹೆಚ್.ಎಸ್. ಸುಂದರೇಶ್, ಆರ್.ಎಂ. ಮಂಜುನಾಥ ಗೌಡ, ಕಿಮ್ಮನೆ ರತ್ನಾಕರ್, ಬಿ.ಕೆ. ಸಂಗಮೇಶ್, ಮಂಜುನಾಥ ಭಂಡಾರಿ ಹಾಗೂ ಹಿರಿಯರಾದ ಕಾಗೋಡು ತಿಮ್ಮಪ್ಪನವರ ಹಾರೈಕೆಯೊಡನೆ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಪದವಿ ಮತ್ತು ಶಿಕ್ಷಕರ ಕ್ಷೇತ್ರ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮೋಹನ್, ಯು. ಶಿವಾನಂದ್, ರಮೇಶ್ ಇಕ್ಕೇರಿ, ಜಿತೇಂದ್ರ ಗೌಡ, ರಾಮಚಂದ್ರ ನಾಯಕ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post