ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ Shri Renukamba Devi Dasara ಆಚರಣಾ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ರೇಣುಕಾಂಬ ಗ್ರಾಮೀಣ ಸೇವಾ ಸಂಸ್ಥೆ, ಗ್ರಾಮ ಪಂಚಾಯಿತಿ ಸಹಕಾರದಲ್ಲಿ ಹಮ್ಮಿಕೊಂಡಿದ್ದ 8ನೇ ವರ್ಷದ ದಸರಾ ಉತ್ಸವದ 4ನೇ ದಿನದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಶ್ರೀ ಮಹಾಗಣಪತಿ ಯಕ್ಷ ಕಲಾ ಬಳಗದವರಿಂದ ಅಂಬಾ ಶಪಥ ಯಕ್ಷಗಾನ ಪ್ರದರ್ಶನ ನಡೆಯಿತು.

Also read: ದೇಶದ 200 ಬುಡಕಟ್ಟು ಯುವಕರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಾದ
ಇದಕ್ಕೂ ಮೊದಲು ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷ ಎಂ.ಬಿ ರೇಣುಕಾ ಪ್ರಸಾದ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರ ಕಾಳಜಿಯಿಂದ ಧಾರ್ಮಿಕ ಕ್ಷೇತ್ರ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಿಂದ ರಥ ಬೀದಿಯವರೆಗೆ 30 ಸಿ.ಸಿ ಕ್ಯಾಮೆರಾ ಆಳವಡಿಸಲಾಗಿದೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆಯಿಂದ ಯಾತ್ರಿನಿವಾಸ ಮತ್ತು ಶೌಚಾಲಯ ಮಂಜೂರಾತಿಯಾಗಿದ್ದು. ಶೀಘ್ರದಲ್ಲೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು.

ವರದಿ: ಮಧುರಾಮ್, ಸೊರಬ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















