ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ಟಕ್ಕರ್ ಕೊಟ್ಟಿರುವ ಬಿಜೆಪಿ, ಕಮಲ ಪಕ್ಷಕ್ಕೆ ರಾಜ್ಯಾಧ್ಯಕ್ಷರನ್ನಾಗಿ ಬಿ.ಎಸ್. ಯಡಿಯೂರಪ್ಪ ಪುತ್ರ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿದೆ.
ಈ ಕುರಿತಂತೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಆದೇಶ ಹೊರಡಿಸಿದ್ದು, ತತಕ್ಷಣದಿಂದಲೇ ಜಾರಿಗೆ ಬರುವಂತೆ ಉಲ್ಲೇಖಿಸಿದ್ದಾರೆ.
ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರೂ ರಾಜ್ಯ ರಾಜಕೀಯದಲ್ಲಿ ಲಿಂಗಾಯತ ಪ್ರಬಲ ನಾಯಕ ಬಿ.ಎಸ್. ಯಡಿಯೂರಪ್ಪ ಪ್ರಭಾವವನ್ನು ಮನಗಂಡ ಹೈಕಮಾಂಡ್, ಕೊನೆಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನೇಮಿಸಲಾಗಿದೆ.

ವಿಧಾನಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಬಿದ್ದಿತ್ತು. ಈ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಮತ್ತಿತರ ಹೆಸರುಗಳು ಕೇಳಿಬರುತಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















