ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹಿಳೆಯೊಬ್ಬರಿಗೆ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ Challenging Star Darshan ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿ ಮಾಡಲಾಗಿದೆ.
ಪ್ರಕರಣ ಕುರಿತಂತೆ ಆರ್ ಆರ್ ನಗರ ಪೊಲೀಸರು ನೊಟೀಸ್ ಜಾರಿ ಮಾಡಿದ್ದು, ಮೂರು ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ನಾಯಿಯ ಕೇರ್ ಟೇಕರ್ ಹೇಮಂತ್ ಅವರ ಈಗಾಗಲೇ ವಿಚಾರಣೆಗೆ ಒಳಪಡಿಸಿರುವ ಪೊಲೀಸರು, ನಂತರ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
Also read: ತೆಲುಗಿನ ಖ್ಯಾತ ಹಿರಿಯ ನಟ ಚಂದ್ರಮೋಹನ್ ಹೃದಯಾಘಾತದಿಂದ ನಿಧನ
ಈ ಹಿಂದೆ ದರ್ಶನ್ ವಿರುದ್ಧ ಆರ್’ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















